Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:17 - ಕನ್ನಡ ಸತ್ಯವೇದವು C.L. Bible (BSI)

17 ಆ ಕೆಲವರಾದರೋ ಸ್ವಾರ್ಥಸಾಧನೆಗಾಗಿಯೇ ಹೊರತು ಪ್ರಾಮಾಣಿಕರಾಗಿ ಕ್ರಿಸ್ತಯೇಸುವನ್ನು ಸಾರುತ್ತಿಲ್ಲ. ಸೆರೆಯಲ್ಲಿರುವ ನನ್ನನ್ನು ಇನ್ನೂ ಹೆಚ್ಚಿನ ಕಷ್ಟಕ್ಕೆ ಗುರಿಮಾಡಬೇಕೆಂಬುದೇ ಅವರ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಬೇರೆ ತರದವರಾದರೋ ನಾನು ಬೇಡಿಯಿಂದ ಬಂಧಿತನಾಗಿರುವಾಗಲೂ ನನಗೆ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ, ಪ್ರಾಮಾಣಿಕವಲ್ಲದ ಸ್ವಾರ್ಥ ಉದ್ದೇಶದಿಂದ ಕ್ರಿಸ್ತನನ್ನು ಪ್ರಸಿದ್ಧಿಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಬೇರೆ ತರದವರಾದರೋ ನಾನು ಬೇಡಿಬಿದ್ದಿರುವಾಗಲೂ ನನಗೆ ಸಂಕಟವನ್ನು ಎಬ್ಬಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಿಪಡಿಸದೆ ಕಕ್ಷಿಭಾವದಿಂದ ಪ್ರಸಿದ್ಧಿಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬೇರೆ ಕೆಲವರು ತಮ್ಮ ಸ್ವಾರ್ಥದ ದೆಸೆಯಿಂದ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ. ಅವರ ಸುವಾರ್ತಾಸೇವೆಯ ಉದ್ದೇಶವೇ ತಪ್ಪಾಗಿದೆ. ಸೆರೆಯಲ್ಲಿರುವ ನನಗೆ ತೊಂದರೆ ಮಾಡಬೇಕೆಂಬುದೇ ಅವರ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರಾದರೋ, ನಾನು ಬೇಡಿಗಳಿಂದ ಸೆರೆಮನೆಯಲ್ಲಿರುವಾಗ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧ ಪಡಿಸದೆ ಪ್ರತಿಸ್ಪರ್ಧೆಗಾಗಿ ಸಾರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅನಿ ಉರಲ್ಲಿ ಲೊಕಾ ಖರ್ಯಾಪಾನಾನ್ ಪರ್ಗಟ್ ಕರಿನಾ ಹೊಲ್ಯಾತ್, ತೆನಿ ಬುರ್ಶ್ಯಾ ಮನಾನಿ ಅಪ್ಲ್ಯಾ ಸ್ವತಾಚ್ಯಾ ಸಾಟ್ನಿ ಮಾಕಾ ತರಾಸ್ ಲೈ ಹೊಂವ್ದಿ ಮನುನ್ ಕ್ರಿಸ್ತಾಕ್ ಪರ್ಗಟ್ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:17
16 ತಿಳಿವುಗಳ ಹೋಲಿಕೆ  

ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ.


ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ.


ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ.


ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ.


ಈ ರೀತಿ ಪೌಲನು ತನ್ನ ಪರವಾಗಿ ವಾದಿಸುತ್ತಿದ್ದಾಗ ಫೆಸ್ತನು, “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಗಟ್ಟಿಯಾಗಿ ಕೂಗಿದನು.


ಅಗ್ರಿಪ್ಪನು ಪೌಲನಿಗೆ ಮಾತನಾಡಲು ಅಪ್ಪಣೆಕೊಡುತ್ತಾ, “ಈಗ ನಿನ್ನ ಪರವಾಗಿ ನೀನು ಮಾತನಾಡಬಹುದು,” ಎಂದನು. ಪೌಲನು ಕೈಯೆತ್ತಿ ಹೀಗೆ ವಾದಿಸತೊಡಗಿದನು:


“ಭ್ರಾತೃಗಳೇ, ಪಿತೃಗಳೇ, ಈಗ ನಾನು ಮಾಡಹೋಗುವ ನನ್ನ ಸಮರ್ಥನೆಗೆ ಕಿವಿಗೊಡಿ.”


ಆಗ ವಾದಿಸುವುದು ಹೇಗೆಂದು ನೀವು ಮುಂಚಿತವಾಗಿ ಚಿಂತಿಸಬೇಕಾಗಿಲ್ಲ; ಇದು ನಿಮಗೆ ಮನದಟ್ಟಾಗಿರಲಿ.


ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತವೆ.


ಅವರ ಉದ್ದೇಶ ಏನೇ ಆಗಿರಲಿ, ನನಗದು ಮುಖ್ಯವಲ್ಲ. ಕ್ರಿಸ್ತಯೇಸುವನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು