Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:20 - ಕನ್ನಡ ಸತ್ಯವೇದವು C.L. Bible (BSI)

20 ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೇಗಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯದೆ; ಹಾಗೆಯೇ ಆಗುವದೆಂದು ಭರವಸವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಯಾವ ವಿಷಯದಲ್ಲಿಯೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ಧೈರ್ಯದಿಂದ ಇದ್ದೇನೆ. ನಾನು ಬದುಕಿದರೂ ಸರಿ, ಸತ್ತರೂ ಸರಿ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆ ಉಂಟಾಗಬೇಕೆಂಬುದೇ ನನ್ನ ಅಭಿಲಾಷೆ ಮತ್ತು ನಿರೀಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೇಗೆಂದರೆ, ನಾನು ಯಾವ ವಿಷಯದಲ್ಲೂ ನಾಚಿಕೆಪಡದೆ ಎಂದಿನಂತೆ ಈಗಲೂ ಪೂರ್ಣ ಧೈರ್ಯದಿಂದಿರುವಂತೆಯೇ ಬದುಕಿದರೂ ಸತ್ತರೂ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂಬುದೇ ನನ್ನ ಬಯಕೆಯೂ ನಿರೀಕ್ಷೆಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಕಶಿ ಮಟ್ಲ್ಯಾರ್, ಮಿಯಾ ಕಚ್ಚ್ಯಾ ವಿಶಯಾತ್ಬಿ ಮರ್ಯಾದ್ ಕರುನ್ ಘೆಯ್ನಸ್ತಾನಾ ಅದ್ದಿ ಹೊತ್ತ್ಯಾ ಸಾರ್ಕೆಚ್ ಅತ್ತಾಬಿ ಧೈರ್ಯಾನ್ ಹೊತ್ತ್ಯಾ ಸಾಟ್ನಿ ಝಿತ್ತೊ ರ್‍ಹಾಲ್ಯಾರ್‍ಬಿ ನಾ ತರ್ ಮರ್ಲ್ಯಾಬಿ ಮಾಜ್ಯಾ ಅಂಗಾನಿ ಕ್ರಿಸ್ತಾಕ್ ಮಹಿಮಾ ಹೊತಾ ಮನುನ್ ಮಾಕಾ ಆಶ್ಯಾ ಹಾಯ್ ಅನಿ ತಸೆಚ್ ಹೊತಾ ಮನ್ತಲೊ ಬರೊಸೊಬಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:20
41 ತಿಳಿವುಗಳ ಹೋಲಿಕೆ  

ಅದಕ್ಕೆ ಪ್ರತಿಯಾಗಿ, ಒಬ್ಬನು ಕ್ರೈಸ್ತವಿಶ್ವಾಸಿ ಎಂಬ ಕಾರಣದಿಂದ ಹಿಂಸೆಯನ್ನು ಅನುಭವಿಸಿದರೆ ಅಂಥವನು ನಾಚಿಕೆಪಡಬೇಕಾಗಿಲ್ಲ; ಕ್ರೈಸ್ತವಿಶ್ವಾಸಿ ಎಂಬ ಆ ಹೆಸರನ್ನು ಪಡೆದುದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಲಿ.


ಏಕೆಂದರೆ, ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನಿಮ್ಮ ದೇಹದಲ್ಲಿ ಆ ದೇವರ ಮಹಿಮೆ ಬೆಳಗುವಂತೆ ಮಾಡಿರಿ.


ಅಂಜಬೇಡ, ನಿನಗಾಗುವುದಿಲ್ಲ ಅವಮಾನ ನಾಚಬೇಡ, ನಿನಗಾಗದು ಆಶಾಭಂಗ. ಮರೆವೆ ಯೌವನದಲ್ಲಿ ನಿನಗಾದ ಅವಮಾನವನು ವೈಧವ್ಯದಲ್ಲಾದ ನಿಂದೆ ನೆನಪಿಗೆ ಬಾರದಿನ್ನು.


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ಹೌದು ಪ್ರಿಯ ಮಕ್ಕಳೇ, ಕ್ರಿಸ್ತಯೇಸು ಪ್ರತ್ಯಕ್ಷರಾಗುವಾಗ, ಅವರ ಪುನರಾಗಮನದ ಪ್ರಯುಕ್ತ ಅವರ ಮುಂದೆ ನಾವು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಂಡಿರೋಣ.


ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.


ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೋ ಎಂದು ಸೃಷ್ಟಿಸಮಸ್ತವು ಬಹು ಉತ್ಸುಕತೆಯಿಂದ ಎದುರು ನೋಡುತ್ತಿದೆ.


ಪ್ರಭು ನಮಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿ. ಈ ಅಧಿಕಾರವನ್ನು ಕುರಿತು ಒಂದು ವೇಳೆ, ನಾವು ಕೊಂಚ ಹೆಚ್ಚಾಗಿ ಹೊಗಳಿಕೊಂಡಿದ್ದರೂ ಅದಕ್ಕಾಗಿ ಸಂಕೋಚಪಡುವುದಿಲ್ಲ.


ಯೇಸುವಿನ ದಿವ್ಯಜೀವವು ನಮ್ಮ ದೇಹದಲ್ಲಿ ಗೋಚರವಾಗುವಂತೆ ಅವರ ಮರಣಯಾತನೆಯನ್ನು ನಿರಂತರವಾಗಿ ಅನುಭವಿಸುತ್ತಾ ಬಾಳುತ್ತಿದ್ದೇವೆ.


ಅಂಥವನು ಉಭಯ ಸಂಕಟಕ್ಕೆ ಸಿಕ್ಕಿಕೊಳ್ಳುತ್ತಾನೆ. ಮದುವೆಯಾಗದ ಮಹಿಳೆ ಅಥವಾ ಕನ್ನಿಕೆ ಪ್ರಭುವಿನ ಸೇವೆಯಲ್ಲಿ ನಿರತಳಾಗಿರುತ್ತಾಳೆ. ದೇಹಾತ್ಮಗಳೆರಡನ್ನೂ ಪ್ರಭುವಿಗೆ ಮೀಸಲಾಗಿಡುತ್ತಾಳೆ. ಆದರೆ ವಿವಾಹಿತ ಸ್ತ್ರೀ ಲೋಕವ್ಯವಹಾರಗಳಲ್ಲಿ ಮಗ್ನಳಾಗಿರುತ್ತಾಳೆ. ತನ್ನ ಪತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಾಳೆ.


ನೆರವಾಗಿಹನು ನನಗೆ ಸ್ವಾಮಿ ಸರ್ವೇಶ್ವರ ಎಂದೇ ತಲೆತಗ್ಗಿಸಲಿಲ್ಲ ನಾನು ನಾಚಿಕೆಯಿಂದ ಗಟ್ಟಿಮಾಡಿಕೊಂಡೆ ಮುಖವನು ಕಗ್ಗಲ್ಲಿನ ಹಾಗೆ ಆಶಾಭಂಗಪಡಲಾರೆನೆಂದು ಗೊತ್ತು ನನಗೆ.


ನಿನ್ನ ನುಡಿಗನುಸಾರ ಉದ್ಧರಿಸು, ನಾ ಬದುಕುವೆ I ನಿರಾಶೆಗೊಳಿಸಬೇಡ ನಾ ನಿರೀಕ್ಷಿಸುತ್ತಿರುವೆ II


ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ನನ್ನ ಬಂಧನದಿಂದಾಗಿ ನಮ್ಮ ಸಹೋದರರಲ್ಲಿ ಅನೇಕರು ದೇವರಲ್ಲಿ ಭರವಸೆಯಿಟ್ಟಿರುವರು. ಅಳುಕಿಲ್ಲದೆ, ಅಂಜಿಕೆಯಿಲ್ಲದೆ ದಿಟ್ಟತನದಿಂದ ಶುಭಸಂದೇಶವನ್ನು ಅವರು ಸಾರುತ್ತಿರುವರು.


ತೀತನ ಮುಂದೆ ನಾನು ನಿಮ್ಮನ್ನು ಹೊಗಳಿದ್ದು ನಿಜ; ಹಾಗೆ ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿಲ್ಲ. ನಾವು ನಿಮಗೆ ಹೇಳಿದ್ದೆಲ್ಲವೂ ಹೇಗೆ ಸತ್ಯವಾಗಿತ್ತೋ, ಹಾಗೆಯೇ ತೀತನ ಮುಂದೆ ನಾವು ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವಾಗಿವೆ.


ಸರ್ವರಿಗಾಗಿ ಯೇಸು ಪ್ರಾಣತ್ಯಾಗ ಮಾಡಿದರು. ಪರಿಣಾಮವಾಗಿ, ಇನ್ನು ಮುಂದೆ ಜೀವಿಸುವವರು ತಮಗಾಗಿ ಜೀವಿಸದೆ, ಸತ್ತು ಪುನರುತ್ಥಾನರಾದ ಯೇಸುವಿಗಾಗಿ ಜೀವಿಸಬೇಕು.


ಹೌದು ಸಹೋದರರೇ, ಪ್ರತಿದಿನವೂ ನಾನು ಸಾವಿನ ದವಡೆಯಲ್ಲಿದ್ದೇನೆ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಿಮ್ಮ ಬಗ್ಗೆ ನನಗಿರುವ ಹೆಮ್ಮೆಯಿಂದ ಇದನ್ನು ಪ್ರಮಾಣವಾಗಿ ಹೇಳುತ್ತಿದ್ದೇನೆ.


ಪವಿತ್ರಗ್ರಂಥದಲ್ಲಿ ಹೀಗೆಂದು ಲಿಖಿತವಾಗಿದೆ: “ಇಗೋ, ಎಡವಿ ನೆಲಕ್ಕುರುಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸಿ ಬೀಳುವಂತೆ ಮಾಡುವ ಬಂಡೆಯನ್ನೂ ನಾನು ಸಿಯೋನಿನಲ್ಲಿ ಇರಿಸುವೆನು; ಆತನಲ್ಲಿ ವಿಶ್ವಾಸವಿಡುವವನಾದರೋ ಎಂದಿಗೂ ಆಶಾಭಂಗಗೊಳ್ಳನು.”


ಇದನ್ನು ಅರ್ಥಮಾಡಿಕೊಳ್ಳಲು ನೀವು ಅಶಕ್ತರಾಗಿರುವುದರಿಂದ ನಾನು ಹೀಗೆ ಸಾಮಾನ್ಯ ರೀತಿಯಲ್ಲಿ ಮಾತನಾಡುತ್ತಿದ್ದೇನೆ. ಹಿಂದೊಮ್ಮೆ ನೀವು ನಿಮ್ಮ ಇಂದ್ರಿಯಗಳನ್ನು ಹೆಚ್ಚುಹೆಚ್ಚಾಗಿ ಅಶ್ಲೀಲತೆಗೂ ಅಕ್ರಮಕ್ಕೂ ಗುಲಾಮರನ್ನಾಗಿಸಿದಿರಿ; ಈಗಲಾದರೋ ಪರಿಶುದ್ಧತೆಗೂ ಸತ್ಸಂಬಂಧಕ್ಕೂ ನಿಮ್ಮ ಇಂದ್ರಿಯಗಳನ್ನು ಅಧೀನರಾಗಿಸಿರಿ.


ನಿಮ್ಮ ದೇಹದ ಯಾವುದೇ ಅಂಗವು ದುಷ್ಕೃತ್ಯವನ್ನೆಸಗುವ ಸಾಧನವಾಗುವಂತೆ ಪಾಪದ ಕಾರ್ಯಕ್ಕೆ ಅದನ್ನು ಒಪ್ಪಿಸದಿರಿ. ಬದಲಾಗಿ ಸತ್ತು ಜೀವಕ್ಕೆ ಬಂದವರಂತೆ ದೇವರಿಗೆ ನಿಮ್ಮನ್ನೇ ಸಮರ್ಪಿಸಿಕೊಳ್ಳಿರಿ; ನಿಮ್ಮ ಅಂಗಗಳನ್ನು ಸತ್ಕಾರ್ಯ ಸಾಧನಗಳನ್ನಾಗಿ ದೇವರಿಗೆ ಒಪ್ಪಿಸಿಕೊಡಿರಿ.


ಅದಕ್ಕೆ ಅವನು ಪ್ರತ್ಯುತ್ತರವಾಗಿ, “ನೀವು ಮಾಡುತ್ತಿರುವುದಾದರೂ ಏನು? ನಿಮ್ಮ ಅಳುವಿನಿಂದ ನನ್ನ ಹೃದಯವನ್ನು ಸೀಳುತ್ತಿರುವಿರಾ? ನಾನು ಜೆರುಸಲೇಮಿನಲ್ಲಿ ಬಂಧಿತನಾಗುವುದಕ್ಕೆ ಮಾತ್ರವಲ್ಲ, ಪ್ರಭು ಯೇಸುವಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ಪೇತ್ರನು ಎಂಥ ಸಾವಿನಿಂದ ದೇವರ ಮಹಿಮೆಯನ್ನು ಬೆಳಗಿಸಲಿದ್ದಾನೆಂದು ಸೂಚಿಸಿ ಹಾಗೆ ಹೇಳಿದರು. ಇದಾದ ಮೇಲೆ ಯೇಸು ಪೇತ್ರನಿಗೆ, “ನೀನು ನನ್ನನ್ನು ಹಿಂಬಾಲಿಸಿ ಬಾ,” ಎಂದರು.


ಆಗ ನಿನ್ನ ಭವಿಷ್ಯ ಶುಭದಾಯಕವಾಗಿರುವುದು, ನಿನ್ನ ನಿರೀಕ್ಷೆ ಸಾರ್ಥಕವಾಗುವುದು.


ಸಜ್ಜನರ ನಂಬಿಕೆ ಆನಂದಕರ; ದುರ್ಜನರ ನಿರೀಕ್ಷೆ ವಿನಾಶಕರ.


ನಿನ್ನ ನಿಬಂಧನೆಗಳಲಿ ಸ್ಥಿರವಿದೆ ಎನ್ನ ಮನ I ನನಗೆ ಒದಗದು ಆಗ ಆಶಾಭಂಗ, ಅವಮಾನ II


ಎನ್ನ ಮನಕೆ ಶಾಂತಿ ದೇವನಿಂದಲೆ I ನನಗೆ ನಂಬಿಕೆ ನಿರೀಕ್ಷೆ ಆತನಿಂದಲೆ II


ಶತ್ರುಗಾಗದಿರಲಿ ಸಡಗರ I ನನಗೊದಗದಿರಲಿ ಮುಜುಗರ II


ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.


ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ.


ನಿಮ್ಮಲ್ಲಿ ನನಗೆ ದೃಢವಾದ ಭರವಸೆಯುಂಟು. ಗಾಢವಾದ ಅಭಿಮಾನವುಂಟು. ನಮ್ಮೆಲ್ಲಾ ಸಂಕಟಗಳಲ್ಲೂ ನಾನು ಎದೆಗುಂದದೆ ಆನಂದಭರಿತನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು