Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:22 - ಕನ್ನಡ ಸತ್ಯವೇದವು C.L. Bible (BSI)

22 ದೈಹಿಕವಾಗಿ ಬದುಕುವುದು ಫಲಪ್ರದವಾಗಿದ್ದರೆ, ನಾನು ಬದುಕುವುದು ಉತ್ತಮವೋ ಅಥವಾ ಸಾಯುವುದು ಸೂಕ್ತವೋ ನನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಶರೀರದಲ್ಲಿಯೇ ಬದುಕಬೇಕಾದ್ದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಶರೀರದಲ್ಲಿಯೇ ಬದುಕಬೇಕಾದಲ್ಲಿ ಕೆಲಸಮಾಡಿ ಫಲ ಹೊಂದಲು ನನಗೆ ಅನುಕೂಲವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಜೀವದಿಂದಿದ್ದರೆ ಫಲಫಲಿಸುವ ಕೆಲಸ ನನಗಿರುತ್ತದೆ. ಆದರೆ ನಾನು ಸಾಯಬೇಕೇ? ಅಥವಾ ಬದುಕಬೇಕೇ? ಏನನ್ನು ಆರಿಸಿಕೊಳ್ಳಬೇಕೋ ನನಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಶರೀರದಲ್ಲಿಯೇ ಬದುಕುವುದು ನನಗೆ ಫಲದಾಯಕವಾದ ಪ್ರಯಾಸವಾಗಿದ್ದರೆ, ನಾನು ಯಾವುದನ್ನು ಆರಿಸಿಕೊಳ್ಳಬೇಕೋ ನನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಕಾಮಾ ಕರುನ್ ಫಳ್ ಘೆತಲೆ ಮಾಜ್ಯಾ ಆಂಗಾಕ್ ಅನುಕುಲ್ ಹೊತಾ, ಅಶೆ ಹೊವ್ನ್ ಮಿಯಾ ಖಲೆ ಎಚುನ್ ಘೆವ್ಚೆ ಮನುನ್ ಮಾಕಾ ಕಳಿನಾ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:22
14 ತಿಳಿವುಗಳ ಹೋಲಿಕೆ  

ಉಳಿದಿರುವ ತನ್ನ ಜೀವಮಾನ ಕಾಲವನ್ನು ಲೌಕಿಕ ವ್ಯಾಮೋಹಗಳಲ್ಲಿ ಕಳೆಯದೆ ದೇವರ ಚಿತ್ತಕ್ಕನುಸಾರ ಕಳೆಯುತ್ತಾನೆ.


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಮತ್ತೊಂದು ಕಡೆ, ನಿಮಗೋಸ್ಕರ ಇಹದಲ್ಲಿದ್ದು ಜೀವಿಸುವುದು ಅತ್ಯವಶ್ಯಕವಾಗಿದೆ.


“ಸಹೋದರರೇ, ನೀವೂ ನಿಮ್ಮ ಅಧಿಕಾರಿಗಳೂ ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನಾನು ಬಲ್ಲೆ.


ನಾವು ಪ್ರಪಂಚದಲ್ಲಿ ಬಾಳುತ್ತಿದ್ದರೂ ನಮ್ಮ ಹೋರಾಟ ಪ್ರಾಪಂಚಿಕ ಉದ್ದೇಶದಿಂದ ಕೂಡಿದ್ದಲ್ಲ.


ದೇವಾ, ನರೆಯ ಮುದುಕನಾಗಿರುವಾಗ ನನ್ನ ಕೈ ಬಿಡಬೇಡಯ್ಯಾ I ನಿನ್ನ ಪರಾಕ್ರಮವನು ಮುಂದಿನ ಪೀಳಿಗೆಗೆ ಸಾರುವ ತನಕ ಬೇಡವಯ್ಯಾ I ನಿನ್ನ ಪ್ರತಾಪವನು ತಲತಲಾಂತರದವರೆಗೆ ಪ್ರಕಟಿಸುವೆನಯ್ಯಾ II


ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ಹಾಗೂ ನನ್ನ ನೇರ ಪರಿಚಯ ಇಲ್ಲದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆಂಬುದನ್ನು ತಿಳಿಸಬಯಸುತ್ತೇನೆ.


ದೇವರು ಮುಂಚಿತವಾಗಿಯೇ ಆರಿಸಿಕೊಂಡಿದ್ದ ತಮ್ಮ ಜನಾಂಗವನ್ನು ತಿರಸ್ಕರಿಸಲಿಲ್ಲ. ಎಲೀಯನ ವಿಷಯವಾಗಿ ಪವಿತ್ರಗ್ರಂಥವು ಹೇಳಿರುವುದು ನಿಮಗೆ ತಿಳಿಯದೋ?


‘ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಯೇಲರು ನೋಡಿ, ಆರೋನನ ಬಳಿಗೆ ಕೂಡಿಬಂದರು. ಅವನಿಗೆ, “ಈಜಿಪ್ಟ್ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆ ಏನಾದನೋ ಗೊತ್ತಿಲ್ಲ. ಆದ್ದರಿಂದ ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗಲು ನಮಗೊಬ್ಬ ದೇವರನ್ನು ಮಾಡಿಸಿಕೊಡು,” ಎಂದು ಕೇಳಿದರು.


ಜೋಸೆಫನು ಒಪ್ಪಲಿಲ್ಲ. “ನನ್ನ ಒಡೆಯ ತನ್ನ ಆಸ್ತಿಪಾಸ್ತಿಯನ್ನೆಲ್ಲ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ನಾನಿರುವುದರಿಂದ ಮನೆಯ ಎಲ್ಲ ವಿಷಯಗಳಲ್ಲಿ ನಿಶ್ಚಿಂತರಾಗಿದ್ದಾರೆ.


ಅಬೀಮೆಲೆಕನು, “ಈ ಕೃತ್ಯವನ್ನು ಮಾಡಿದವರು ಯಾರೆಂದು ನಾನರಿಯೆ; ನೀನೂ ನನಗೆ ತಿಳಿಸಲಿಲ್ಲ; ಇಲ್ಲಿಯವರೆಗೆ ನಾನು ಈ ಸಂಗತಿಯನ್ನು ಕೇಳಿಯೂ ಇಲ್ಲ,” ಎಂದನು.


ಸಹೋದರರೇ, ಈ ವಿಷಯ ನಿಮಗೆ ತಿಳಿದಿರಲಿ; ನನ್ನ ಸೇವೆ ಇತರ ಜನರಲ್ಲಿ ಫಲಪ್ರದವಾದಂತೆ ನಿಮ್ಮಲ್ಲೂ ಫಲಪ್ರದವಾಗಬೇಕೆಂಬ ಉದ್ದೇಶದಿಂದ ನಿಮ್ಮ ಬಳಿಗೆ ಬರಲು ನಾನು ಅನೇಕ ಸಾರಿ ಪ್ರಯತ್ನಿಸಿದೆನು. ಆದರೆ, ಕಾರಣಾಂತರಗಳಿಂದ ಇದುವರೆಗೂ ಬರಲು ಸಾಧ್ಯವಾಗಲಿಲ್ಲ.


ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು