Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:23 - ಕನ್ನಡ ಸತ್ಯವೇದವು C.L. Bible (BSI)

23 ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇವೆರಡರಲ್ಲಿ ಯಾವುದನ್ನು ಆರಿಸಿಕೊಳ್ಳಬೇಕೆಂಬುದೇ ಕಷ್ಟ. ನಾನು ಈ ಜೀವಿತವನ್ನು ಬಿಟ್ಟು ಆತನೊಂದಿಗಿರಲು ಅಪೇಕ್ಷಿಸುತ್ತೇನೆ. ಅದೇ ಉತ್ತಮವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ಮಿಯಾ ಹ್ಯಾ ದೊನಾಚ್ಯಾ ಮದ್ದಿ ಗಾವ್ನ್ ಪಡ್ಲಾ, ಹ್ಯಾತುರ್‍ನಾ ಸುಟ್ಕಾ ಹೊವ್ನ್ ಕ್ರಿಸ್ತಾ ವಾಂಗ್ಡಾ ರ್‍ಹಾವ್ಚೆ ಮನ್ತಲಿ ಮಾಜಿ ಆಶ್ಯಾ, ಅನಿ ತೆ ಲೈ ಬರೆ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:23
24 ತಿಳಿವುಗಳ ಹೋಲಿಕೆ  

ಆದ್ದರಿಂದ ಈ ದೇಹವನ್ನು ತ್ಯಜಿಸಿ, ಪ್ರಭುವನ್ನೇ ನೆಚ್ಚಿ ನೆಲಸುವುದು ಲೇಸೆಂದು ಧೈರ್ಯದಿಂದ ಹೇಳುತ್ತೇವೆ.


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.


ಅವರು ತನ್ನ ಮೇಲೆ ಕಲ್ಲುಬೀರುತ್ತಿದ್ದಾಗ ಸ್ತೇಫನನು, “ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ಅವನಿಗೆ ಯೇಸು, “ಇಂದೇ ನೀನು ನನ್ನೊಡನೆ ಪರಂಧಾಮದಲ್ಲಿರುವೆ ಎಂದು ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ನನ್ನನ್ನಾದರೊ ಸ್ವಾಗತಿಸುವನು ದೇವನು I ಪಾತಾಳದ ಹಿಡಿತದಿಂದ ಬಿಡಿಸುವನು II


ಆಮೇಲೆ, ಇನ್ನೂ ಬದುಕಿರುವ ನಾವು ಎದ್ದುಬಂದವರೊಡನೆ ಆಕಾಶಮಂಡಲದಲ್ಲಿ ಪ್ರಭುವನ್ನು ಎದುರುಗೊಳ್ಳಲು ಮೇಘಾರೂಢರಾಗಿ ಮೇಲಕ್ಕೆ ಒಯ್ಯಲ್ಪಡುತ್ತೇವೆ. ಹೀಗೆ ಸರ್ವದಾ ನಾವು ಪ್ರಭುವಿನೊಂದಿಗೆ ಇರುತ್ತೇವೆ.


ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.


ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು. ಅದು ಈಡೇರುವ ತನಕ ನನಗೆ ನೆಮ್ಮದಿಯಿಲ್ಲ.


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ಅಂದು ಪಾಸ್ಕಹಬ್ಬದ ಹಿಂದಿನ ದಿನ. ತಾವು ಈ ಲೋಕವನ್ನು ಬಿಟ್ಟು ಪಿತನ ಬಳಿಗೆ ಹೋಗಬೇಕಾದ ಗಳಿಗೆ ಬಂದಿರುವುದು ಎಂದು ಯೇಸು ಸ್ವಾಮಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತಮ್ಮವರನ್ನು ಯಾವಾಗಲೂ ಪ್ರೀತಿಸುತ್ತಿದ್ದ ಅವರು ಆ ಪ್ರೀತಿಯ ಪರಮಾವಧಿಯನ್ನು ಈಗ ತೋರಿಸಲಿದ್ದರು.


ಪಿಶಾಚಿಗಳಿಂದ ಬಿಡುಗಡೆ ಆಗಿದ್ದ ಆ ವ್ಯಕ್ತಿಯಾದರೋ, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು.


ಸಹೋದರರೇ, ನಾವು ನಿಮ್ಮಲ್ಲಿಗೆ ಬಂದುದು ವ್ಯರ್ಥವಾಗಲಿಲ್ಲವೆಂಬುದು ನಿಮಗೆ ಗೊತ್ತು.


ನಮ್ಮಲ್ಲಿ ಸಂಕುಚಿತ ಭಾವನೆಯೇನೂ ಇಲ್ಲ. ಇದು ಇರುವುದಾದರೆ ನಿಮ್ಮಲ್ಲೇ.


ಅದಕ್ಕೆ ದಾವೀದನು, “ನಾನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೆ ಬೀಳುತ್ತೇನೆ; ಅವರು ಕೃಪಾಪೂರ್ಣರು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿ ವ್ಯಾಧಿಯನ್ನು ಆಯ್ದುಕೊಂಡನು.


ಮತ್ತೊಂದು ಕಡೆ, ನಿಮಗೋಸ್ಕರ ಇಹದಲ್ಲಿದ್ದು ಜೀವಿಸುವುದು ಅತ್ಯವಶ್ಯಕವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು