Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:26 - ಕನ್ನಡ ಸತ್ಯವೇದವು C.L. Bible (BSI)

26 ನಿಮ್ಮಲ್ಲಿಗೆ ನಾನು ಮರಳಿಬಂದಾಗ ಕ್ರಿಸ್ತಯೇಸುವಿನಲ್ಲಿ ನೀವು ಹಿರಿಹಿಗ್ಗುವುದಕ್ಕೆ ಮಹದವಕಾಶ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹೀಗೆ ನಾನು ತಿರುಗಿ ನಿಮ್ಮ ಬಳಿಗೆ ಬರುವುದರಿಂದ ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉಲ್ಲಾಸಪಡುವುದಕ್ಕೆ ನನ್ನಿಂದ ಅಧಿಕ ಆಸ್ಪದವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹೀಗೆ ನಾನು ತಿರಿಗಿ ನಿಮ್ಮಲ್ಲಿಗೆ ಬರುವದರಿಂದ ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉತ್ಸಾಹಪಡುವದಕ್ಕೆ ನನ್ನಿಂದ ಅಧಿಕವಾದ ಆಸ್ಪದವಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಾನು ಮತ್ತೆ ನಿಮ್ಮೊಂದಿಗಿರುವಾಗ ನೀವು ಕ್ರಿಸ್ತಯೇಸುವಿನಲ್ಲಿ ನನ್ನ ವಿಷಯವಾಗಿ ಹೆಮ್ಮೆಪಡಲು ಮತ್ತಷ್ಟು ಕಾರಣಗಳಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಹೀಗೆ ನಾನು ಪುನಃ ನಿಮ್ಮ ಬಳಿಗೆ ಬರುವುದರಿಂದ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಸಂತೋಷವು ನನ್ನ ನಿಮಿತ್ತವಾಗಿ ಅತ್ಯಧಿಕವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅಶೆ ಮಿಯಾ ತುಮ್ಚ್ಯಾಕ್ಡೆ ಪರ್ತುನ್ ಯೆತಲ್ಯಾ ಸಾಟ್ನಿ ತುಮಿ ಜೆಜು ಕ್ರಿಸ್ತಾಚ್ಯಾ ವಿಶಯಾತ್ ಕುಶಿ ಹೊವ್ಕ್ ಮಾಜ್ಯಾಕ್ನಾ ಲೈ ಕಾರನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:26
14 ತಿಳಿವುಗಳ ಹೋಲಿಕೆ  

ಮತ್ತೊಮ್ಮೆ ನಮ್ಮನ್ನು ನಾವೇ ಹೊಗಳಿಕೊಳ್ಳುತ್ತೇವೆಂದು ನೀವು ಭಾವಿಸಬಾರದು. ನಮ್ಮನ್ನು ಕುರಿತು ನೀವೇ ಹೆಚ್ಚಳಪಡುವಂತೆ ಒಂದು ಅವಕಾಶವನ್ನು ಒದಗಿಸುತ್ತಿದ್ದೇವೆ, ಅಷ್ಟೆ. ಹೀಗೆ, ಮನುಷ್ಯನ ಅಂತರಂಗವನ್ನು ಅರಿಯದೆ ಅವನ ಹೊರ ತೋರಿಕೆಗಳನ್ನೇ ನೆಚ್ಚಿ ನಲಿಯುವವರಿಗೆ ಸೂಕ್ತ ಪ್ರತ್ಯುತ್ತರವನ್ನು ಕೊಡಲು ನೀವು ಶಕ್ತರಾಗುತ್ತೀರಿ.


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ನನ್ನ ಬಗ್ಗೆ ನಿಮಗಿರುವ ಮಮತೆಯು ಇಷ್ಟು ದಿನಗಳಾದ ಮೇಲೆ ಪುನಃ ಅರಳಿದ್ದಕ್ಕೆ ಪ್ರಭುವಿನಲ್ಲಿ ನಾನು ಬಹಳ ಸಂತೋಷಪಡುತ್ತೇನೆ. ಇಂಥ ಮಮತೆ ನಿಮಗೆ ಮೊದಲಿನಿಂದ ಇತ್ತಾದರೂ ಅದನ್ನು ವ್ಯಕ್ತಪಡಿಲು ನಿಮಗೆ ಸೂಕ್ತ ಸಂದರ್ಭ ಒದಗಿರಲಿಲ್ಲ.


ಕೊನೆಯದಾಗಿ ಸಹೋದರರೇ, ಪ್ರಭುವಿನಲ್ಲಿ ಆನಂದಿಸಿರಿ. ನಾನು ನಿಮಗೆ ಮೊದಲೇ ತಿಳಿಸಿದಂತೆ ಇದನ್ನು ಮತ್ತೆ ಮತ್ತೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ; ಇದು ನಿಮ್ಮ ಹಿತಕ್ಕಾಗಿಯೇ.


ಆದರೂ ಎದೆಗುಂದಿದವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸಿ ನಮ್ಮನ್ನು ಸಂತೈಸಿದರು.


ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು.


ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ.


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ನಿಮ್ಮಲ್ಲಿ ನನಗೆ ದೃಢವಾದ ಭರವಸೆಯುಂಟು. ಗಾಢವಾದ ಅಭಿಮಾನವುಂಟು. ನಮ್ಮೆಲ್ಲಾ ಸಂಕಟಗಳಲ್ಲೂ ನಾನು ಎದೆಗುಂದದೆ ಆನಂದಭರಿತನಾಗಿದ್ದೇನೆ.


ತೀತನ ಮುಂದೆ ನಾನು ನಿಮ್ಮನ್ನು ಹೊಗಳಿದ್ದು ನಿಜ; ಹಾಗೆ ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿಲ್ಲ. ನಾವು ನಿಮಗೆ ಹೇಳಿದ್ದೆಲ್ಲವೂ ಹೇಗೆ ಸತ್ಯವಾಗಿತ್ತೋ, ಹಾಗೆಯೇ ತೀತನ ಮುಂದೆ ನಾವು ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವಾಗಿವೆ.


ಪ್ರತಿಯೊಬ್ಬನೂ ತನ್ನ ನಡತೆಯನ್ನು ತನ್ನಷ್ಟಕ್ಕೆ ತಾನೇ ಪರಿಶೋಧಿಸಿಕೊಳ್ಳಲಿ. ತನ್ನ ನಡತೆ ಒಳಿತಾಗಿದ್ದರೆ ಹೆಮ್ಮೆಪಡಲಿ. ಆದರೆ ಇತರರೊಂದಿಗೆ ಹೋಲಿಸಿ ಹೆಮ್ಮೆಪಡಬೇಕಾಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು