Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:29 - ಕನ್ನಡ ಸತ್ಯವೇದವು C.L. Bible (BSI)

29 ಕ್ರಿಸ್ತಯೇಸುವನ್ನು ನೀವು ವಿಶ್ವಾಸಿಸುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವ ಸೌಭಾಗ್ಯವೂ ನಿಮ್ಮದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಹೇಗಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ನಿಮಗೆ ಅನುಗ್ರಹವಾಗಿ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನೀವು ಕ್ರಿಸ್ತನಲ್ಲಿ ನಂಬಿಕೆಯಿಟ್ಟದ್ದು ದೇವರ ಅನುಗ್ರಹದಿಂದಲೇ. ಅಷ್ಟು ಮಾತ್ರವೇ ಅಲ್ಲ, ಕ್ರಿಸ್ತನಿಗೋಸ್ಕರ ಕಷ್ಟಪಡುವುದೂ ಸಹ ನಿಮಗೆ ಅನುಗ್ರಹವಾಗಿ ದೊರೆಯಿತು. ಇವೆರಡೂ ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನೀವು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವುದೂ ನಿಮಗೆ ದಾನವಾಗಿ ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವ್ತಲೆ ಎಕುಚ್ ನ್ಹಯ್ ತೆಚ್ಯಾ ಸಾಟ್ನಿ ತರಾಸ್ ಸೊಸುನ್ ಘೆತಲೆಬಿ ತುಮ್ಕಾ ಎಕ್ ಬರೊ ಅವ್ಕಾಸ್ ಕರುನ್ ದಿಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:29
14 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ನಿಮಗೆ ವಿವಿಧ ಸಂಕಟ ಶೋಧನೆಗಳು ಬಂದೊದಗಿದಾಗ ಅವುಗಳನ್ನು ಸಂತೋಷದಿಂದ ಸಹಿಸಿಕೊಳ್ಳಿ.


ಬದಲಿಗೆ, ಯೇಸುಕ್ರಿಸ್ತರ ಬಾಧೆಗಳಲ್ಲಿ ಪಾಲುಹೊಂದಿರುತ್ತೀರೆಂದು ಸಂತೋಷಪಡಿ; ಅವರ ಮಹಿಮೆಯು ಪ್ರತ್ಯಕ್ಷವಾಗುವಾಗ ಪೂರ್ಣ ಹರ್ಷಾನಂದವನ್ನು ಪಡೆಯುವಿರಿ.


ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.


ಅಷ್ಟೇ ಅಲ್ಲ, ನಮಗೆ ಬಂದೊದಗುವ ಕಷ್ಟಸಂಕಟಗಳಲ್ಲೂ ಹೆಮ್ಮೆಪಡುತ್ತೇವೆ. ಏಕೆಂದರೆ, ಕಷ್ಟಸಂಕಟಗಳು ಸಹನೆಯನ್ನು,


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ.


ದೀಕ್ಷಾಸ್ನಾನದಲ್ಲಿ ನೀವು ಅವರೊಂದಿಗೆ ಸಮಾಧಿಯಾದಿರಿ. ಕ್ರಿಸ್ತಯೇಸುವನ್ನು ಮೃತರ ಮಧ್ಯದಿಂದ ದೇವರು ತಾವೇ ಎಬ್ಬಿಸಿದರು. ಈ ದೇವರ ಶಕ್ತಿಯಲ್ಲಿ ನೀವು ವಿಶ್ವಾಸವಿಟ್ಟಿರುವುದರಿಂದ ದೀಕ್ಷಾಸ್ನಾನದಲ್ಲಿಯೇ ನಿಮ್ಮನ್ನು ಕ್ರಿಸ್ತಯೇಸುವಿನೊಂದಿಗೆ ಎಬ್ಬಿಸಲಾಯಿತು.


ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು