Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:3 - ಕನ್ನಡ ಸತ್ಯವೇದವು C.L. Bible (BSI)

3 ನಿಮ್ಮನ್ನು ಜ್ಞಾಪಿಸಿಕೊಳ್ಳುವಾಗಲೆಲ್ಲ ನಾನು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3-4 ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3-4 ನಾನು ನಿಮಗೋಸ್ಕರ ದೇವರನ್ನು ಬೇಡಿಕೊಳ್ಳುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಬೇಡುವವನಾಗಿದ್ದೇನೆ. ನಾನು ನಿಮ್ಮನ್ನು ನೆನಸಿಕೊಳ್ಳುವಾಗೆಲ್ಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ನಿಮ್ಮನ್ನು ಜ್ಞಾಪಿಸಿಕೊಂಡಾಗಲೆಲ್ಲಾ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ನಿಮ್ಮನ್ನು ನೆನೆಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಾಕಾ ತುಮ್ಚಿ ಯಾದ್ ಯೆಲ್ಲ್ಯಾ ತನ್ನಾ ಸಗ್ಳ್ಯಾ ವೆಳಾರ್ ಮಿಯಾ ದೆವಾಕ್ ಧನ್ಯಾವಾದ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:3
10 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನಲ್ಲಿ ನಿಮಗೆ ಕೊಡಲಾಗಿರುವ ದೇವಾನುಗ್ರಹದ ಸಲುವಾಗಿ ನಾನು ನಿಮಗೋಸ್ಕರ ನನ್ನ ದೇವರಿಗೆ ಸತತವಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಂದು ನೀನು ಸುರಿಸಿದ ಕಣ್ಣೀರನ್ನು ನಾನು ಇನ್ನೂ ಮರೆತಿಲ್ಲ. ನಿನ್ನನ್ನು ಪುನಃ ನೋಡಿ ಆನಂದಪಡಬೇಕೆಂದು ಹಂಬಲಿಸುತ್ತಿದ್ದೇನೆ.


ನಿಮ್ಮ ನಿಮಿತ್ತ ನಮಗೆ ಲಭಿಸಿರುವ ಆನಂದಕ್ಕಾಗಿ ದೇವರಿಗೆ ಎಷ್ಟು ಕೃತಜ್ಞತೆಯನ್ನು ಸಲ್ಲಿಸಿದರೂ ಸಾಲದು.


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು