ಫಿಲಿಪ್ಪಿಯವರಿಗೆ 1:7 - ಕನ್ನಡ ಸತ್ಯವೇದವು C.L. Bible (BSI)7 ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿಮ್ಮೆಲ್ಲರ ವಿಷಯದಲ್ಲಿ ಈ ಅಭಿಪ್ರಾಯವುಳ್ಳವನಾಗಿರುವದು ನ್ಯಾಯವಾಗಿದೆ; ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತುಮ್ಚ್ಯಾ ಸಗ್ಳ್ಯಾಂಚ್ಯಾಸಾಟ್ನಿ ಮಾಕಾ ಅಶೆ ದಿಸ್ತಲೆ ಸಮಾಚ್ ಹಾಯ್, ಮಿಯಾ ಬಂಧಿಖಾನ್ಯಾತ್ ರ್‍ಹಾತಾನಾಬಿ, ಬರ್‍ಯಾ ಖಬ್ರೆಸಾಟ್ನಿ ಹೊಲ್ಲ್ಯಾ ವಾದಾತ್ನಿ ತುಮಿ ಸಗ್ಳ್ಯೆ ಮಾಜ್ಯಾ ವಾಂಗ್ಡಾ ದೆವಾಚ್ಯಾ ಕುರ್ಪೆತ್ ವಾಟೊ ಘೆಟ್ಲ್ಯಾಶಿ, ಮನುನ್ ತುಮ್ಕಾ ಮಾಜ್ಯಾ ಮನಾತ್ ಥವ್ನ್ ಘೆಟ್ಲಾ. ಅಧ್ಯಾಯವನ್ನು ನೋಡಿ |