Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:11 - ಕನ್ನಡ ಸತ್ಯವೇದವು C.L. Bible (BSI)

11 ‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೇಸು ಕ್ರಿಸ್ತನನ್ನು ಒಡೆಯನೆಂದು ಪ್ರತಿಜ್ಞೆಮಾಡಿ ತಂದೆಯಾದ ದೇವರಿಗೆ ಘನವನ್ನು ಸಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಯೇಸು ಕ್ರಿಸ್ತನೇ ಪ್ರಭು”ವೆಂದು ಹೇಳುವರು. ಇದರಿಂದ ತಂದೆಯಾದ ದೇವರಿಗೆ ಮಹಿಮೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅನಿ ಬಾಬಾ ದೆವಾಚ್ಯಾ ಮಹಿಮಾ ಸಾಟ್ನಿ ಹರ್ ಎಕ್ಲೊಬಿ ಜೆಜುಕ್ರಿಸ್ತುಚ್ ಧನಿ ಮನುನ್ ಸಾಂಗ್ತಾತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:11
30 ತಿಳಿವುಗಳ ಹೋಲಿಕೆ  

ಯೇಸುವೇ ದೇವರ ಪುತ್ರನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಸಿದ್ದಾರೆ; ಅವನೂ ದೇವರಲ್ಲಿ ನೆಲೆಸಿದ್ದಾನೆ.


ಪವಿತ್ರಗ್ರಂಥದಲ್ಲಿ : ಎಲ್ಲರೂ ನನಗೆ ಸಾಷ್ಟಾಂಗವೆರಗುವರು ಎಲ್ಲರೂ ನನ್ನನ್ನು ದೇವರೆಂದು ನಿವೇದಿಸುವರು ಇದಕ್ಕೆ ಜೀವಸ್ವರೂಪನಾದ ನಾನೇ ಸಾಕ್ಷಿ,” ಎಂದು ಸರ್ವೇಶ್ವರಸ್ವಾಮಿ ಹೇಳಿದ್ದಾರೆ.


‘ಬೋಧಕರೇ, ಪ್ರಭುವೇ’ ಎಂದು ನೀವು ನನ್ನನ್ನು ಕರೆಯುತ್ತೀರಿ; ನೀವು ಹಾಗೆ ಹೇಳುವುದು ಸರಿಯೆ. ನಾನು ಬೋಧಕನೂ ಹೌದು, ಪ್ರಭುವೂ ಹೌದು.


ದೇವರ ಆತ್ಮದಿಂದ ಬಂದ ಪ್ರೇರಣೆಯನ್ನು ನೀವು ಹೀಗೆ ಗುರುತಿಸಬಹುದು; ಮನುಷ್ಯ ಆಗಿ ಬಂದ ಕ್ರಿಸ್ತಯೇಸುವನ್ನು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾದುದು.


ಏಕೆಂದರೆ, ಸತ್ತವರಿಗೂ ಬದುಕುವವರಿಗೂ ಪ್ರಭುವಾಗಬೇಕೆಂಬ ಉದ್ದೇಶದಿಂದಲೇ ಕ್ರಿಸ್ತಯೇಸು ಸತ್ತು ಜೀವಂತರಾದದ್ದು.


ಇಷ್ಟುಮಾತ್ರ ನಿಮಗೆ ಸ್ಪಷ್ಟವಾಗಿ ತಿಳಿದಿರಲಿ; ಪವಿತ್ರಾತ್ಮ ಪ್ರೇರಣೆಯಿಂದ ಮಾತನಾಡುವ ಯಾವಾತನೂ, “ಯೇಸುವಿಗೆ ಧಿಕ್ಕಾರ!” ಎನ್ನಲಾರನು. ಅಂತೆಯೇ, ಪವಿತ್ರಾತ್ಮ ಪ್ರೇರಣೆಯಿಂದಲ್ಲದೆ ಯಾವಾತನೂ, “ಯೇಸುವೇ ಪ್ರಭು,” ಎಂದು ಒಪ್ಪಿಕೊಳ್ಳಲಾರನು.


ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಆದರೆ ನಮಗೆ ಒಬ್ಬರೇ ದೇವರು. ಅವರು ನಮ್ಮ ಪರಮ ಪಿತ; ಎಲ್ಲ ಸೃಷ್ಟಿಗೂ ಮೂಲಕರ್ತ, ನಾವಿರುವುದು ಅವರಿಗಾಗಿಯೇ. ನಮಗೆ ಒಬ್ಬರೇ ಪ್ರಭು; ಅವರೇ ಯೇಸುಕ್ರಿಸ್ತ. ಅವರ ಮುಖಾಂತರವೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


“ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ.


ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.


“ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುಸ್ವಾಮಿಯನ್ನೇ ದೇವರು ಪ್ರಭುವನ್ನಾಗಿಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ.”


ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.


ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂಧಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು.


ಮತ್ತು ದೇವರು ತೋರಿದ ಕರುಣೆಗಾಗಿ ಅವರನ್ನು ಯೆಹೂದ್ಯರಲ್ಲದವರು ಸಹ ಸ್ತುತಿಸಲು ಸಾಧ್ಯವಾಗುವಂತೆ ಕ್ರಿಸ್ತಯೇಸು ಯೆಹೂದ್ಯರಿಗೆ ಅಧೀನರಾದರು. ಇದಕ್ಕೆ ಸಾದೃಶ್ಯವಾಗಿ ಪವಿತ್ರಗ್ರಂಥದಲ್ಲಿ ಹೀಗೆಂದು ಹೇಳಲಾಗಿದೆ: “ಈ ಕಾರಣದಿಂದ ನಾನು ಯೆಹೂದ್ಯರಲ್ಲದವರ ನಡುವೆ ನಿಮ್ಮನ್ನು ಕೊಂಡಾಡುವೆನು ನಿಮ್ಮ ನಾಮವನು ಸಂಕೀರ್ತಿಸುವೆನು.”


ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.


ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ.


ಯೆಹೂದ್ಯರಲ್ಲಿ ಹಲವುಮಂದಿ ಮುಖಂಡರಿಗೆ ಯೇಸುವಿನಲ್ಲಿ ವಿಶ್ವಾಸಮೂಡಿತು. ಆದರೆ ಫರಿಸಾಯರು ಪ್ರಾರ್ಥನಾಮಂದಿರಗಳಿಂದ ತಮಗೆ ಬಹಿಷ್ಕಾರ ಹಾಕಿಯಾರೆಂಬ ಅಂಜಿಕೆಯ ಕಾರಣ ಅವರು ತಮ್ಮ ವಿಶ್ವಾಸವನ್ನು ಬಯಲುಮಾಡಲಿಲ್ಲ.


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ಎಂತಲೆ, ಅನ್ಯಜನಗಳ ಮಧ್ಯೆ ನಿನ್ನ ಸ್ತುತಿಪೆನು I ನಿನ್ನ ನಾಮವನು ಸರ್ವೇಶ್ವರಾ, ಸಂಕೀರ್ತಿಪೆನು II


ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


ನಿಮಗೆ ಪ್ರಭೂವೂ ಬೋಧಕನೂ ಆಗಿರುವ ನಾನೇ ನಿಮ್ಮ ಕಾಲುಗಳನ್ನು ತೊಳೆದಿರುವಾಗ ನೀವು ಸಹ ಒಬ್ಬರ ಕಾಲುಗಳನ್ನು ಇನ್ನೊಬ್ಬರು ತೊಳೆಯುವ ಹಂಗಿನಲ್ಲಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು