Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:12 - ಕನ್ನಡ ಸತ್ಯವೇದವು C.L. Bible (BSI)

12 ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಕೇಳಿದಂತೆ ಈಗಲೂ ಕೇಳಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ಪ್ರಿಯ ಸ್ನೇಹಿತರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ ನಾನು ದೂರವಿರುವಾಗಲೂ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿರಿ. ನೀವು ದೇವರಿಗೆ ಭಯಭಕ್ತಿಯಿಂದಿದ್ದು ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಶೆ ರ್‍ಹಾತಾನಾ ಮಾಜ್ಯಾ ಪ್ರೆಮಾಚ್ಯಾ ವಾಂಗ್ಡಿಯಾನು, ತುಮಿ ಸಗ್ಳ್ಯಾ ಎಳಾರ್ ಖಾಲ್ತಿಹೊವ್ನ್ ಚಲ್ತಲ್ಯಾ ಸಾರ್ಕೆ ಅತ್ತಾಬಿ ಖಾಲ್ತಿ ಹೊವ್ನ್ ಚಲುನ್ಗೆತ್ ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾತಾನಾ ತವ್ಡೆಚ್ ನ್ಹಯ್, ಮಿಯಾ ನಸಲ್ಲ್ಯಾ ತನ್ನಾಬಿ ಲೈ ಭಿಂಯಾನ್ ಥರ್ತರುನ್ಗೆತ್ ತುಮ್ಚೆ ರಾಕ್ವನ್ ಪಾವುನ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:12
41 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಪಡೋಣ. ನಮ್ಮಲ್ಲಿ ಯಾರೂ ಆ ಜನರಂತೆ ಅವಿಧೇಯತೆಯಿಂದ ವರ್ತಿಸಿ ವಿಶ್ವಾಸಭ್ರಷ್ಟರಾಗದೆ ಇರೋಣ.


ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.


ಸೋಮಾರಿಗೆ ಹಸಿದಿದ್ದರೂ ಊಟವಿಲ್ಲ; ಶ್ರಮಜೀವಿಗಳಿಗಾದರೋ ಬಲಿಷ್ಠರನ್ನಾಗಿಸುವ ಮೃಷ್ಟಾನ್ನ.


ದೇವರು ತಮ್ಮ ವಿಶ್ರಾಂತಿಯ ನೆಲೆಯನ್ನು ನೀಡುವುದಾಗಿ ಮಾಡಿದ ವಾಗ್ದಾನ ಇನ್ನೂ ರದ್ದಾಗದೆ ಉಳಿದಿದೆ. ನಿಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯದೆ ಇರಬಾರದು. ಎಂತಲೇ, ನಾವು ಭಯಭಕ್ತಿಯಿಂದ ಬಾಳೋಣ.


ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ಹೀಗಿರಲಾಗಿ ಒಲವಿನ ಸಹೋದರರೇ, ನನ್ನ ಅತಿ ಪ್ರಿಯರೇ, ಆಪ್ತರೇ, ನನ್ನ ಮುದವೂ ಮುಕುಟವೂ ಆದವರೇ, ಪ್ರಭುವಿನಲ್ಲಿ ದೃಢ ವಿಶ್ವಾಸಿಗಳಾಗಿ ಬಾಳಿರಿ.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.


ಕ್ರಿಸ್ತಯೇಸುವನ್ನು ನೀವು ವಿಶ್ವಾಸಿಸುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವ ಸೌಭಾಗ್ಯವೂ ನಿಮ್ಮದಾಗಿದೆ.


ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


“ಭಯಭಕುತಿಯಿಂದ ಪ್ರಭುವಿಗೆ ಸೇವೆಮಾಡಿರಿ I ನಡುನಡುಗುತ ಆತನ ಪಾದಪೂಜೆ ಮಾಡಿರಿ” II


ನಿಮ್ಮೆಲ್ಲರ ವಿನಯ-ವಿಧೇಯತೆಯನ್ನು, ಭಯಭಕ್ತಿಯಿಂದ ನೀವು ನೀಡಿದ ಸ್ವಾಗತವನ್ನು ಸ್ಮರಿಸಿಕೊಳ್ಳುವಾಗಲೆಲ್ಲ ನಿಮ್ಮ ಮೇಲೆ ಆತನಿಗಿರುವ ಪ್ರೀತಿ ಉಕ್ಕಿ ಹರಿಯುತ್ತದೆ.


ಈ ಕಾರಣ, ನಾನು ನಿಮ್ಮ ನಡುವೆ ದುರ್ಬಲನೂ ಭಯಭೀತನೂ ಆಗಿದ್ದೆ.


ಸೇವಕರೇ, ನೀವು ಮಾಡುತ್ತಿರುವುದು ಕ್ರಿಸ್ತಯೇಸುವಿನ ಸೇವೆಯನ್ನೇ ಎಂದು ಭಾವಿಸಿ, ನಿಮ್ಮ ಲೌಕಿಕ ಧಣಿಗಳಿಗೆ ಭಯಭಕ್ತಿಯಿಂದಲೂ ಏಕಮನಸ್ಸಿನಿಂದಲೂ ವಿಧೇಯರಾಗಿರಿ.


ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು ! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು !


ಸಜ್ಜನರ ದುಡಿತ ಜೀವಾಸ್ಪದ; ದುರ್ಜನರ ಆದಾಯ ಪಾಪಾಸ್ಪದ.


ಯೊವಾನ್ನನು ತನ್ನ ಸಂದೇಶವನ್ನು ಸಾರಿದಂದಿನಿಂದ ಇಂದಿನವರೆಗೆ ಸ್ವರ್ಗಸಾಮ್ರಾಜ್ಯವು ನೂಕುನುಗ್ಗಲಿಗೆ ಗುರಿಯಾಗಿದೆ. ಬಲಪ್ರಯೋಗ ಮಾಡುವವರು ಅದನ್ನು ಸ್ವಾಧೀನಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.


ನೀನು ಹಾಗು ನಮ್ಮ ದೇವರ ಆಜ್ಞೆಯನ್ನು ಗೌರವಿಸುವವರು ಹೇಳಿಕೊಟ್ಟ ಬುದ್ಧಿವಾದಾನುಸಾರ ಅಂಥ ಎಲ್ಲ ಹೆಂಡತಿಯರನ್ನೂ ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ, ಈಗಲೇ ನಮ್ಮ ದೇವರಿಗೆ ಪ್ರತಿಜ್ಞೆಮಾಡಿ, ಧರ್ಮಶಾಸ್ತ್ರಕ್ಕನುಸಾರ ನಡೆಯೋಣ.


ಏಕೆಂದರೆ, ನಾನು ನಿಮ್ಮನ್ನು ಸಂಧಿಸಿದ ಮೊದಲ ದಿನದಿಂದ ಇಂದಿನವರೆಗೂ ನೀವು ನನ್ನೊಡನೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸುತ್ತಿರುವಿರಿ.


ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು,” ಎಂದು ಆ ವಾಣಿ ಹೇಳಿತು.


ಪ್ರಭು ಯೇಸುವಿನ ಚಿತ್ತವಾದಲ್ಲಿ ತಿಮೊಥೇಯನನ್ನು ನಿಮ್ಮ ಬಳಿಗೆ ಬೇಗನೆ ಕಳುಹಿಸಬೇಕೆಂದಿದ್ದೇನೆ. ಆತನಿಂದ ನಿಮ್ಮ ಸಮಾಚಾರವನ್ನು ತಿಳಿದು ನಾನು ಹರ್ಷಗೊಳ್ಳುತ್ತೇನೆ.


ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಬರೆಯಲಿಲ್ಲ. ನಮ್ಮ ನೆಚ್ಚಿನ ಮಕ್ಕಳಾದ ನಿಮ್ಮನ್ನು ಎಚ್ಚರಿಸಲೆಂದು ಬರೆದೆನು.


ಫಿಲಿಪ್ಪಿಯ ಸಹೋದರರೇ, ನಾನು ಶುಭಸಂದೇಶವನ್ನು ಸಾರಲು ಹೊರಟ ಪ್ರಾರಂಭದ ದಿನಗಳಲ್ಲಿ ಮಕೆದೋನಿಯವನ್ನು ಬಿಟ್ಟುಹೋದಾಗ ನೀವಲ್ಲದೆ ಬೇರೆ ಯಾವ ಸಭೆಯೂ ನನ್ನ ಆಯ-ವ್ಯಯಗಳಲ್ಲಿ ನೆರವಾಗಿರಲಿಲ್ಲ. ಇದು ನಿಮಗೆ ತಿಳಿದ ವಿಷಯ.


ಸೆರೆಮನೆಯ ಅಧಿಕಾರಿ ದೀಪವನ್ನು ತರಿಸಿ, ಒಳಗೆ ಧಾವಿಸಿ ಬಂದು, ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಪಾದಕ್ಕೆ ಬಿದ್ದನು.


ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರೆಸುತ್ತಾ, ಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು ಎಂಬುದೇ ನನ್ನ ದೃಢ ನಂಬಿಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು