Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:16 - ಕನ್ನಡ ಸತ್ಯವೇದವು C.L. Bible (BSI)

16 ಹೀಗೆ ನೀವು ನಡೆದುಕೊಂಡರೆ ನನ್ನ ಸೇವೆ ವ್ಯರ್ಥವಾಗದೆ, ಶ್ರಮೆ ನಿಷ್ಫಲವಾಗದೆ, ಫಲಪ್ರದವಾಯಿತೆಂದು ಕ್ರಿಸ್ತರ ದಿನದಂದು ನಾನು ಹೆಮ್ಮೆಪಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು ಲೋಕದೊಳಗೆ ಹೊಳೆಯುವ ಜೋತಿರ್ಮಂಡಲಗಳಂತೆ ಕಾಣಿಸುವವರಾಗಿದ್ದೀರಲ್ಲಾ. ನೀವು ಹೀಗೆ ನಡೆದರೆ ನಾನು ಕೆಲಸ ಸಾಧಿಸಿದ್ದೂ ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಉತ್ಸಾಹವು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜೀವದಾಯಕವಾದ ವಾಕ್ಯವನ್ನು ನೀವು ಆ ಜನರಿಗೆ ಕೊಟ್ಟರೆ, ಕ್ರಿಸ್ತನು ಬಂದಾಗ ನಾನು ಹೆಮ್ಮೆಯಿಂದಿರಲು ಸಾಧ್ಯವಾಗುತ್ತದೆ, ಏಕೆಂದರೆ ನನ್ನ ಕೆಲಸವು ವ್ಯರ್ಥವಾಗಲಿಲ್ಲ. ನಾನು ಪಂದ್ಯದಲ್ಲಿ ಓಡಿ ಗೆದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀವು ಜೀವವಾಕ್ಯವನ್ನು ಹಿಡಿದವರಾಗಿದ್ದರೆ, ಹೀಗೆ ನಾನು ಓಡಿದ ಓಟವೂ ಪ್ರಯಾಸವೂ ವ್ಯರ್ಥವಾಗಲಿಲ್ಲವೆಂದು ತಿಳಿದು ಕ್ರಿಸ್ತನ ಪುನರಾಗಮನ ದಿನದಲ್ಲಿ ಅಭಿಮಾನ ಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹೆಚ್ಯಾ ಮದ್ದಿ ಸಗ್ಳ್ಯಾಕ್ನಿಬಿ ಜಿವ್ ಹೊವ್ನ್ ಹೊತ್ತಿ ಬರಿ ಖಬರ್ ದಾಕ್ವುನ್ ದಿತಲೆ ಹೊವ್ನ್, ಜಗಾತ್ ಹೊಳಾವ್ತಲಿ ಚುಕ್ಕಿಯಾ ಸಾರ್ಕೆ ದಿಸ್ತ್ಯಾಶಿ. ತುಮಿ ಅಶೆ ಚಲಲ್ಲೆ ಹೊಲ್ಯಾರ್ ಮಿಯಾ ಬರ್‍ಯಾ ಖಬ್ರೆಸಾಟ್ನಿ ಪಳಲೆ ಫುಕೊಟ್ ಹೊಯ್ನಾ, ಮಿಯಾ ಕಟ್ಪಟ್ ಕರಲೆಬಿ ಫುಕೊಟ್ ಹೊಯ್ನಾ ಮನ್ತಲೆ ಹೊಗ್ಳಾಪ್ ಕ್ರಿಸ್ತಾಚ್ಯಾ ದಿಸಾತ್ ಮಾಕಾ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:16
24 ತಿಳಿವುಗಳ ಹೋಲಿಕೆ  

ನಾನಾದರೋ ಗೊತ್ತು ಗುರಿಯಿಲ್ಲದವನಂತೆ ಓಡುವುದಿಲ್ಲ, ಗಾಳಿಯೊಡನೆ ಗುದ್ದಾಡುವವನಂತೆ ಹೋರಾಡುವುದಿಲ್ಲ.


ದೇವಪ್ರೇರಣೆಗೆ ಅನುಸಾರವಾಗಿಯೇ ಅಲ್ಲಿಗೆ ಹೋದೆ. ಅನ್ಯಧರ್ಮೀಯರಿಗೆ ನಾನು ಸಾರುತ್ತಿದ್ದ ಸಂದೇಶ ಏನೆಂಬುದನ್ನು ಅಲ್ಲಿದ್ದ ಕೆಲವು ಗಣ್ಯವ್ಯಕ್ತಿಗಳಿಗೆ ಪ್ರತ್ಯೇಕವಾಗಿ ತಿಳಿಸಿದೆ. ಅದುವರೆಗೆ ನಾನು ಪಟ್ಟ ಶ್ರಮವಾಗಲಿ ಈಗ ಪಡುತ್ತಿರುವ ಶ್ರಮವಾಗಲಿ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಹೀಗೆ ಮಾಡಿದೆ.


ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ.


ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ.


ಆದುದರಿಂದ ನನಗೆ ಸಹಿಸಲು ಅಸಾಧ್ಯವಾಗಿ, ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಬೇಕಾಯಿತು. ಏಕೆಂದರೆ, ನಿಮ್ಮ ವಿಶ್ವಾಸದ ಬಗ್ಗೆ ನನಗೆ ತಿಳಿಯಬೇಕಾಗಿತ್ತು; ಪ್ರಲೋಭಕನು ಒಡ್ಡುವ ಬಲೆಗೆ ನೀವು ಸಿಲುಕಿ ನಮ್ಮ ಶ್ರಮವೆಲ್ಲ ನಿಷ್ಪ್ರಯೋಜಕವಾಯಿತೋ ಏನೋ ಎಂಬ ದಿಗಿಲು ನನಗಿತ್ತು.


ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.


“ಯಾವನು ಜನರ ಮುಂದೆ ಬಹಿರಂಗವಾಗಿ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಅವನನ್ನು ನರಪುತ್ರನು ಸಹ ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.


ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು.


ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ.


ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ಅವರ ಸಮ್ಮುಖದಲ್ಲಿ ನಮ್ಮ ಆಶಯ-ಆನಂದಗಳು, ಕೀರ್ತಿ-ಕಿರೀಟಗಳಾದರೂ ಯಾರು? ನೀವೇ ಅಲ್ಲವೇ?


ನಿಮಗಾಗಿ ನಾನು ಪಟ್ಟ ಪ್ರಯಾಸವೆಲ್ಲ ವ್ಯರ್ಥವಾಯಿತೇನೋ ಎಂಬ ಶಂಕೆ ನನ್ನನ್ನು ಕಾಡುತ್ತಿದೆ.


ಇಂತೆಂದುಕೊಂಡೆ ನಾನಾಗ : ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ.


ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೆ? I ನಿನ್ನ ಅದ್ಭುತಕಾರ್ಯಗಳನೆಂದಿಗು ನಾ ಘೋಷಿಸುತ್ತಿರುವೆ II


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


“ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ.


ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ I ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ II


ನಮ್ಮ ಪ್ರಭು ಯೇಸುಕ್ರಿಸ್ತರ ದಿನದಂದು ನೀವು ನಿರ್ದೋಷಿಗಳಾಗಿರುವಂತೆ ಆ ದೇವರೇ, ನಿಮ್ಮನ್ನು ಕಡೆಯವರೆಗೂ ಸ್ಥಿರವಾಗಿ ಕಾಪಾಡುವರು.


ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರೆಸುತ್ತಾ, ಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು ಎಂಬುದೇ ನನ್ನ ದೃಢ ನಂಬಿಕೆ.


ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು, ಪ್ರಭು ಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು