Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:19 - ಕನ್ನಡ ಸತ್ಯವೇದವು C.L. Bible (BSI)

19 ಪ್ರಭು ಯೇಸುವಿನ ಚಿತ್ತವಾದಲ್ಲಿ ತಿಮೊಥೇಯನನ್ನು ನಿಮ್ಮ ಬಳಿಗೆ ಬೇಗನೆ ಕಳುಹಿಸಬೇಕೆಂದಿದ್ದೇನೆ. ಆತನಿಂದ ನಿಮ್ಮ ಸಮಾಚಾರವನ್ನು ತಿಳಿದು ನಾನು ಹರ್ಷಗೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಆದರಣೆ ಹೊಂದಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ಕರ್ತನಾದ ಯೇಸುವಿನ ಚಿತ್ತವಾದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಧೈರ್ಯತಂದುಕೊಂಡೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಿಮ್ಮ ಬಳಿಗೆ ತಿಮೊಥೆಯನನ್ನು ಆದಷ್ಟು ಬೇಗನೆ ಕಳುಹಿಸಿಕೊಡಲು ಪ್ರಭುವಾದ ಯೇಸುವಿನಲ್ಲಿ ನಿರೀಕ್ಷಿಸುತ್ತಿದ್ದೇನೆ. ಅವನ ಮೂಲಕ ನಿಮ್ಮ ಯೋಗಕ್ಷೇವುವನ್ನು ತಿಳಿದುಕೊಳ್ಳುವುದರಿಂದ ನನಗೆ ಪ್ರೋತ್ಸಾಹವಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವುದಕ್ಕೆ ಕರ್ತ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಹೀಗೆ ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಉತ್ತೇಜನಗೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖರೆ ಮಿಯಾ ಲಗ್ಗುನಾಚ್ ತಿಮೊಥಿಕ್ ತುಮ್ಚ್ಯಾಕ್ಡೆ ಧಾಡುಚೆ ಮನುನ್ ಧನಿ ಜೆಜುಕ್ಡೆ ಬರೊಸೊ ಕರ್‍ತಾ, ತೆಜಾಕ್ನಾ ತುಮ್ಚಿ ಖಬ್ರಿಯಾ ಆಯ್ಕುನ್ ಮಿಯಾ ಉಮ್ಮೆದ್ ಹಾನುನ್ ಘೆಟ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:19
22 ತಿಳಿವುಗಳ ಹೋಲಿಕೆ  

ಇದಕ್ಕಾಗಿಯೇ ಪ್ರಭುವಿನಲ್ಲಿ ನನ್ನ ನೆಚ್ಚಿನ ಹಾಗೂ ಪ್ರಾಮಾಣಿಕ ಮಗನಾದ ತಿಮೊಥೇಯನನ್ನು ನಿಮ್ಮ ಬಳಿಗೆ ಕಳಿಸಿದ್ದೇನೆ. ಆತನು ಕ್ರಿಸ್ತಯೇಸುವಿನಲ್ಲಿ ನನ್ನ ಬಾಳುವೆಯನ್ನು ಕುರಿತು ತಿಳಿಸುವನು; ನಾನು ಎಲ್ಲೆಡೆಯಲ್ಲೂ ಎಲ್ಲಾ ಧರ್ಮಸಭೆಗಳಲ್ಲೂ ಬೋಧಿಸುತ್ತಿರುವುದನ್ನು ನಿಮ್ಮ ನೆನಪಿಗೆ ತರುವನು.


ತಿಮೊಥೇಯನು ಯೇಸುಕ್ರಿಸ್ತರ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ನಮ್ಮ ಸಹೋದರ ಹಾಗೂ ದೇವರ ದಾಸ; ನೀವು ವಿಶ್ವಾಸದಲ್ಲಿ ಅಚಲರಾಗಿ ನೆಲೆನಿಲ್ಲುವಂತೆ ಆತನು ನಿಮ್ಮನ್ನು ಉತ್ತೇಜಿಸುವನು.


ಕ್ರಿಸ್ತಯೇಸುವಿನಲ್ಲಿ ಜೀವಿಸುವ ಫಿಲಿಪ್ಪಿಯ ದೇವಜನರಿಗೆ, ಧರ್ಮಾಧಿಕಾರಿಗಳಿಗೆ ಹಾಗೂ ಧರ್ಮಸೇವಕರಿಗೆ - ಕ್ರಿಸ್ತಯೇಸುವಿನ ದಾಸರಾದ ಪೌಲ ಮತ್ತು ತಿಮೊಥೇಯರು ಜೊತೆಗೂಡಿ ಬರೆಯುವ ಪತ್ರ.


ಎಪಫ್ರೋದಿತನನ್ನು ನಿಮ್ಮ ಬಳಿಗೆ ಕಳುಹಿಸಲು ತವಕದಿಂದಿದ್ದೇನೆ. ಅವನನ್ನು ಕಂಡು ನಿಮಗೆ ಆನಂದವಾಗುವುದು, ನನ್ನ ದುಃಖವೂ ಶಮನವಾಗುವುದು.


ಆದ್ದರಿಂದ ನೀವು ಅಂಥ ಮಾತನ್ನು ಬಿಟ್ಟು, “ಪ್ರಭುವಿನ ಚಿತ್ತವಿದ್ದರೆ ನಾವು ಬದುಕಿರುತ್ತೇವೆ, ಇಂಥಿಂಥದ್ದನ್ನು ಮಾಡುತ್ತೇವೆ,” ಎಂದು ನೀವು ಹೇಳುವುದೇ ಸರಿ.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ.


ನನ್ನ ಸಹೋದ್ಯೋಗಿಯಾದ ತಿಮೊಥೇಯನು ಮತ್ತು ನನ್ನ ಸ್ವದೇಶೀಯರಾದ ಲೂಕ್ಯ, ಯಾಸೋನನು, ಸೋಸಿಪತ್ರನು ಇವರುಗಳು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.


ಮಗದೊಂದು ಕಡೆ ಯೆಶಾಯನು ಹೀಗೆನ್ನುತ್ತಾನೆ: “ಜೆಸ್ಸೆಯನ ವಂಶಜನು ಬರುವನು ಅನ್ಯಜನಾಂಗಗಳನ್ನು ಆಳುವವನು ಉದಯಿಸುವನು ಆ ಜನಾಂಗಗಳು ಆತನಲ್ಲೇ ಭರವಸೆಯನ್ನಿಡುವುವು.”


ನೆಮ್ಮುವರು ಅನ್ಯಜನರೆಲ್ಲರು ಇವನ ನಾಮವನು.”


ಇವು ಸರ್ವೇಶ್ವರನ ಮಾತುಗಳು : “ಮಾನವ ಮಾತ್ರದವರಲ್ಲಿ ಭರವಸೆಯಿಟ್ಟು ನರಜನ್ಮದವರನ್ನೇ ತನ್ನ ಭುಜಬಲವೆಂದುಕೊಂಡು ಸರ್ವೇಶ್ವರನನ್ನೇ ತೊರೆಯುವಂಥ ಹೃದಯವುಳ್ಳವನು ಶಾಪಗ್ರಸ್ತನು !


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಪೌಲನು ದೆರ್ಬೆಗೂ ಅಲ್ಲಿಂದ ಲುಸ್ತ್ರಕ್ಕೂ ಪ್ರಯಾಣಮಾಡಿದನು. ತಿಮೊಥೇಯ ಎಂಬ ಕ್ರೈಸ್ತಭಕ್ತನು ಅಲ್ಲಿ ವಾಸಿಸುತ್ತಿದ್ದನು. ಇವನ ತಾಯಿ ಯೆಹೂದ್ಯಳು ಹಾಗೂ ಕ್ರೈಸ್ತಭಕ್ತಳು. ತಂದೆಯಾದರೋ ಗ್ರೀಕನು.


ಅದೇ ರೀತಿ ನೀವು ಸಹ ನನ್ನೊಡನೆ ಸಂತೋಷದಿಂದ ಸಂಭ್ರಮಿಸಿರಿ.


ಆದುದರಿಂದ ನನಗೆ ಸಹಿಸಲು ಅಸಾಧ್ಯವಾಗಿ, ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಬೇಕಾಯಿತು. ಏಕೆಂದರೆ, ನಿಮ್ಮ ವಿಶ್ವಾಸದ ಬಗ್ಗೆ ನನಗೆ ತಿಳಿಯಬೇಕಾಗಿತ್ತು; ಪ್ರಲೋಭಕನು ಒಡ್ಡುವ ಬಲೆಗೆ ನೀವು ಸಿಲುಕಿ ನಮ್ಮ ಶ್ರಮವೆಲ್ಲ ನಿಷ್ಪ್ರಯೋಜಕವಾಯಿತೋ ಏನೋ ಎಂಬ ದಿಗಿಲು ನನಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು