Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:21 - ಕನ್ನಡ ಸತ್ಯವೇದವು C.L. Bible (BSI)

21 ಇತರರೆಲ್ಲರೂ ಸ್ವಕಾರ್ಯದಲ್ಲಿ ಮಗ್ನರಾಗಿರುವವರೇ ಹೊರತು ಯೇಸುಸ್ವಾಮಿಯ ಕಾರ್ಯದಲ್ಲಿ ನಿರತರಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಉಳಿದವರು ಕೇವಲ ತಮ್ಮ ಬಗ್ಗೆ ಚಿಂತಿಸುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಸೇವೆಯ ಬಗ್ಗೆ ಚಿಂತಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಎಲ್ಲರೂ ಸ್ವಕಾರ್ಯಗಳನ್ನೇ ಹುಡುಕುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಕಾರ್ಯಗಳನ್ನು ಹುಡುಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಸಗ್ಳಿ ಲೊಕಾಬಿ ಅಪ್ಲ್ಯಾ ಸ್ವತಾಚ್ಯಾ ಕಾಮಾ ವೈನಿ ಮನ್ ಥವ್ತಲೆಚ್, ಖರೆ ಜೆಜು ಕ್ರಿಸ್ತಾಚ್ಯಾ ಕಾಮಾ ವೈನಿ ಮನ್ ಥೈಯ್ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:21
19 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ತನ್ನ ಹಿತವನ್ನು ಮಾತ್ರ ಬಯಸದೆ ಪರರ ಹಿತವನ್ನೂ ಬಯಸಬೇಕು.


ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಸ್ವಹಿತವನ್ನೇ ಗಮನಿಸದೆ ಪರರ ಹಿತವನ್ನೂ ಬಯಸಿರಿ.


ಜನರು ಸ್ವಾರ್ಥಚಿಂತಕರೂ ಲೋಭಿಗಳೂ ಅಹಂಕಾರಿಗಳೂ ಬಡಾಯಿಕೋರರೂ ದೇವದೂಷಕರೂ ಹೆತ್ತವರಿಗೆ ಅವಿಧೇಯರೂ ಕೃತಘ್ನರೂ ಭಕ್ತಿಹೀನರೂ ಆಗುವರು.


ನಾನಂತೂ ನನ್ನ ಸ್ವಂತ ಹಿತವನ್ನು ಲೆಕ್ಕಿಸದೆ ಸರ್ವರ ಉದ್ಧಾರಕ್ಕಾಗಿ ಅವರ ಹಿತವನ್ನು ಅಪೇಕ್ಷಿಸಿ, ಎಲ್ಲರನ್ನೂ ಎಲ್ಲದರಲ್ಲೂ ಮೆಚ್ಚಿಸಲು ಪ್ರಯತ್ನಿಸುತ್ತೇನೆ.


“ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು.


ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ಕ್ರಿಸ್ತಯೇಸುವಿನ ಯಾತನೆಯು ನಮ್ಮ ಬಾಳಿನಲ್ಲಿ ತುಂಬಿರುವಂತೆ ಅವರ ಮುಖಾಂತರ ಲಭಿಸುವ ಸಾಂತ್ವನವೂ ನಮ್ಮಲ್ಲಿ ತುಂಬಿರುತ್ತದೆ.


ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ.


ಆದರೆ ಪಾಂಫೀಲಿಯದಲ್ಲಿ ಇದ್ದಾಗ ಧರ್ಮಪ್ರಚಾರ ಕಾರ್ಯದಲ್ಲಿ ಸಹಕರಿಸದೆ ತಮ್ಮನ್ನು ಬಿಟ್ಟಗಲಿದ ಅವನನ್ನು ಜೊತೆಯಲ್ಲಿ ಕರೆದುಕೊಂಡು ಹೋಗುವುದು ಉಚಿತವಲ್ಲವೆಂಬುದು ಪೌಲನ ಅಭಿಪ್ರಾಯ.


ಪೌಲ ಮತ್ತು ಸಂಗಡಿಗರು ಪಾಫೊಸಿನಿಂದ ನೌಕಾಯಾನ ಮಾಡಿ ಪಾಂಫೀಲಿಯದ ಪೆರ್ಗ ಎಂಬಲ್ಲಿಗೆ ಬಂದರು. ಮಾರ್ಕನೆನಿಸಿಕೊಂಡ ಯೊವಾನ್ನನು ಅವರನ್ನು ಅಲ್ಲೇ ಬಿಟ್ಟು ಜೆರುಸಲೇಮಿಗೆ ಹಿಂದಿರುಗಿದನು.


“ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಏಷ್ಯಾ ಪ್ರಾಂತ್ಯದವರೆಲ್ಲ ನನ್ನನ್ನು ಕೈಬಿಟ್ಟುಹೋದರೆಂದು ನೀನು ಬಲ್ಲೆ. ಅವರೊಡನೆ ಫುಗೇಲನೂ ಹೆರ್ಮೊಗೇನನೂ ಸಹ ಹೊರಟುಹೋದರು.


ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದವರೆಗೂ ದೇವಾಲಯದ ದುರಸ್ತುಕಾರ್ಯವನ್ನು ಕೈಗೊಂಡಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು