Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:22 - ಕನ್ನಡ ಸತ್ಯವೇದವು C.L. Bible (BSI)

22 ತಿಮೊಥೇಯನ ಯೋಗ್ಯತೆಯನ್ನು ನೀವು ಬಲ್ಲಿರಿ. ತಂದೆಯೊಂದಿಗೆ ಮಗನು ದುಡಿಯುವಂತೆ, ಶುಭಸಂದೇಶದ ಸೇವೆಯಲ್ಲಿ ನನ್ನೊಂದಿಗೆ ಆತನು ದುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ತಿಮೊಥೆಯನ ಯೋಗ್ಯತೆಯನ್ನು ನೀವು ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಸೇವೆಮಾಡಿದನೆಂಬುದು ನಿಮಗೆ ಗೊತ್ತುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ತಿಮೊಥೆಯನ ಗುಣವನ್ನು ನೀವು ನೋಡಿ ತಿಳಿದುಕೊಂಡಿದ್ದೀರಿ; ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಕಷ್ಟಪಟ್ಟು ಕೆಲಸನಡಿಸಿದನೆಂಬದು ನಿಮಗೆ ಗೊತ್ತುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ತಿಮೊಥೆಯನು ಎಂಥವನೆಂಬುದು ನಿಮಗೆ ಗೊತ್ತಿದೆ. ಮಗನು ತನ್ನ ತಂದೆಯೊಡನೆ ಸೇವೆ ಮಾಡುವಂತೆ ಅವನು ಸುವಾರ್ತೆಯನ್ನು ತಿಳಿಸುವುದರಲ್ಲಿ ನನ್ನೊಂದಿಗೆ ಸೇವೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ತಿಮೊಥೆಯನ ಗುಣಸ್ವಭಾವವನ್ನು ನೀವು ಬಲ್ಲಿರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಶ್ರಮಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರೆ ಲೆಕ್ ಬಾಬಾ ವಾಂಗ್ಡಾ ಹೊತ್ತ್ಯಾ ಸಾರ್ಕೊಚ್ ತಿಮೊಥಿಬಿ ಮಾಜ್ಯಾ ವಾಂಗ್ಡಾ ಬರಿ ಖಬರ್ ಪರ್ಗಟ್ ಕರುಕ್ ಸೆವಾ ಕರಲ್ಲೆ ಬಗುನ್ ತೆಜೆ ಯೊಗ್ಯತೆ ತುಮಿ ಕಳ್ವುನ್ ಘೆಟ್ಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:22
20 ತಿಳಿವುಗಳ ಹೋಲಿಕೆ  

ಇದಕ್ಕಾಗಿಯೇ ಪ್ರಭುವಿನಲ್ಲಿ ನನ್ನ ನೆಚ್ಚಿನ ಹಾಗೂ ಪ್ರಾಮಾಣಿಕ ಮಗನಾದ ತಿಮೊಥೇಯನನ್ನು ನಿಮ್ಮ ಬಳಿಗೆ ಕಳಿಸಿದ್ದೇನೆ. ಆತನು ಕ್ರಿಸ್ತಯೇಸುವಿನಲ್ಲಿ ನನ್ನ ಬಾಳುವೆಯನ್ನು ಕುರಿತು ತಿಳಿಸುವನು; ನಾನು ಎಲ್ಲೆಡೆಯಲ್ಲೂ ಎಲ್ಲಾ ಧರ್ಮಸಭೆಗಳಲ್ಲೂ ಬೋಧಿಸುತ್ತಿರುವುದನ್ನು ನಿಮ್ಮ ನೆನಪಿಗೆ ತರುವನು.


ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ!


ನೀವು ಎಲ್ಲ ವಿಷಯಗಳಲ್ಲೂ ನನಗೆ ವಿಧೇಯರಾಗಿದ್ದೀರೋ ಇಲ್ಲವೋ ಎಂದು ಪರೀಕ್ಷಿಸಲು ನಾನು ಬರೆದದ್ದು.


ತಿಮೊಥೇಯನೇ, ನನ್ನ ಕುಮಾರನೇ, ಹಿಂದೆ ನಿನ್ನ ಕುರಿತು ಮಾಡಲಾಗಿರುವ ಪ್ರವಾದನೆಗಳಿಗೆ ಅನುಗುಣವಾಗಿ ನಾನು ನಿನಗೆ ಕೊಡುವ ಆಜ್ಞೆ ಇದು: ಪ್ರವಾದನೆಗಳಿಂದ ಪ್ರೇರಣೆ ಪಡೆದು ದಿಟ್ಟಹೋರಾಟವನ್ನು ಮಾಡು.


ಇವರಿಬ್ಬರ ಸಂಗಡ ಮತ್ತೊಬ್ಬ ಸಹೋದರನನ್ನೂ ಕಳುಹಿಸುತ್ತಿದ್ದೇವೆ. ಈತನು ಆಸಕ್ತಿ ಉಳ್ಳವನೆಂದು ಅನುಭವದಿಂದ ಕಂಡುಕೊಂಡಿದ್ದೇವೆ. ನಿಮ್ಮಲ್ಲಿ ಪೂರ್ಣ ಭರವಸೆಯಿಟ್ಟು ನಿಮಗೆ ನೆರವಾಗಲು ಆತನು ಹೆಚ್ಚು ಉತ್ಸುಕನಾಗಿದ್ದಾನೆ.


ನೀನಾದರೋ ನನ್ನ ಬೋಧನೆ, ನಡತೆ ಹಾಗೂ ಧ್ಯೇಯಗಳನ್ನು ಅರಿತಿರುವೆ. ನನ್ನ ವಿಶ್ವಾಸ, ಸಹಿಷ್ಣುತೆ ಮತ್ತು ಸೈರಣೆ ನಿನಗೆ ತಿಳಿದಿದೆ.


ಆತನಂತೆ ನಿಷ್ಕಪಟವಾಗಿ ನಿಮ್ಮ ಯೋಗಕ್ಷೇಮವನ್ನು ಬಯಸುವವರು ಬೇರೆ ಯಾರೂ ಇಲ್ಲಿಲ್ಲ.


ಆದ್ದರಿಂದ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟುಮಾಡಿಕೊಡಿರಿ.


ಇದನ್ನು ನಾನು ಆಜ್ಞಾರೂಪವಾಗಿ ಹೇಳುತ್ತಿಲ್ಲ. ಬೇರೆಯವರಿಗೆ ಈ ಸೇವಾಕಾರ್ಯದಲ್ಲಿ ಇರುವ ಶ್ರದ್ಧೆಯನ್ನು ಆದರ್ಶವಾಗಿ ಹಿಡಿದು ನಿಮ್ಮ ಪ್ರೀತಿ ಎಷ್ಟು ಯಥಾರ್ಥವಾದುದೆಂದು ಕಂಡುಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇನೆ.


ಲುಸ್ತ್ರ ಮತ್ತು ಇಕೋನಿಯದ ಸಹೋದರರೆಲ್ಲರಿಗೆ ತಿಮೊಥೇಯನ ಬಗ್ಗೆ ಸದಭಿಪ್ರಾಯವಿತ್ತು.


ಸಹನೆಯು ಸದ್ಗುಣವನ್ನು, ಸದ್ಗುಣವು ನಂಬಿಕೆನಿರೀಕ್ಷೆಯನ್ನು ಬೆಳೆಸುತ್ತವೆಂದು ನಾವು ಬಲ್ಲೆವು.


ತಿಮೊಥೇಯನು ಬಂದರೆ ಆತನಿಗೆ ಯಾವ ಚಿಂತೆಯೂ ಇರದಂತೆ ನೋಡಿಕೊಳ್ಳಿ. ಆತನು ನನ್ನ ಹಾಗೆ ಪ್ರಭುವಿನ ಸೇವೆಯಲ್ಲಿಯೇ ನಿರತನಾಗಿರುತ್ತಾನೆ.


ಏಕೆಂದರೆ, ನಾನು ನಿಮ್ಮನ್ನು ಸಂಧಿಸಿದ ಮೊದಲ ದಿನದಿಂದ ಇಂದಿನವರೆಗೂ ನೀವು ನನ್ನೊಡನೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸುತ್ತಿರುವಿರಿ.


ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ.


ಸಹೋದರರೇ, ನನಗೆ ಬಂದೊದಗಿರುವುದೆಲ್ಲವೂ ಶುಭಸಂದೇಶದ ಬೆಳವಣಿಗೆಗೆ ಹಿತಕರವಾಗಿ ಪರಿಣಮಿಸಿದೆ. ಇದು ನಿಮಗೆ ತಿಳಿದಿರಬೇಕೆಂಬುದೇ ನನ್ನ ಆಶಯ.


ಒಲವಿನ ಒತ್ತಾಯದಿಂದ ಸಾರುತ್ತಿದ್ದಾರೆ; ಶುಭಸಂದೇಶದ ಸತ್ಯವನ್ನು ಸಮರ್ಥಿಸುವುದಕ್ಕಾಗಿ ನಾನು ಬಂಧಿತನೆಂದು ಇವರು ಬಲ್ಲರು.


ಈ ವಿಷಯಗಳನ್ನೆಲ್ಲಾ ಇತರ ಸಹೋದರರಿಗೆ ನೀನು ವಿವರಿಸುವವನಾದರೆ, ನೀನು ಕ್ರಿಸ್ತಯೇಸುವಿನ ಯೋಗ್ಯ ದಾಸನಾಗುವೆ, ನೀನು ಅನುಸರಿಸುತ್ತಾ ಬಂದಿರುವ ಸದ್ಬೋಧನೆಯಿಂದಲೂ ವಿಶ್ವಾಸದಿಂದಲೂ ಆಧ್ಯಾತ್ಮಿಕ ಪೋಷಣೆಯನ್ನು ಪಡೆಯುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು