Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:26 - ಕನ್ನಡ ಸತ್ಯವೇದವು C.L. Bible (BSI)

26 ನಿಮ್ಮನ್ನೆಲ್ಲಾ ನೋಡಲು ಅವನು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮ್ಮ ಕಿವಿಗೆ ಮುಟ್ಟಿತೆಂದು ತಿಳಿದು ಬಹಳ ವ್ಯಸನಪಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ಸುದ್ದಿಯನ್ನು ನೀವು ಕೇಳಿದ್ದರಿಂದ ಅವನು ನೊಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ವ್ಯಸನಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಏಕೆಂದರೆ ಅವನು ನಿಮ್ಮೆಲ್ಲರನ್ನು ನೋಡಲು ಬಹು ತವಕಪಡುತ್ತಿದ್ದಾನೆ. ತಾನು ಅಸ್ವಸ್ಥನಾಗಿದ್ದದ್ದು ನಿಮಗೆ ತಿಳಿದದ್ದರಿಂದ ಅವನಿಗೆ ಚಿಂತೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಏಕೆಂದರೆ ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮಗೆ ಮುಟ್ಟಿತೆಂದು ತಿಳಿದು ತುಂಬಾ ವ್ಯಸನಪಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತೊ ತುಮ್ಚ್ಯಾ ಸಗ್ಳ್ಯಾಂಚ್ಯಾ ಸಾಟ್ನಿ ಯಾದ್ ಕರಿತ್ ಹೊತ್ತೊ, ಅನಿ ಸಿಕ್ ಹೊಲ್ಲಿ ಖಬರ್ ತುಮ್ಕಾ ಗಾವಲ್ಯಾ ಸಾಟ್ನಿ ತೆನಿ ಲೈ ದುಖ್ಕ್ ಕರುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:26
23 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನಲ್ಲಿರುವ ಉತ್ಕಟ ಪ್ರೀತಿಯಿಂದಲೇ ನಾನು ನಿಮ್ಮೆಲ್ಲರಿಗಾಗಿ ಹಂಬಲಿಸುತ್ತಿದ್ದೇನೆ; ಇದಕ್ಕೆ ದೇವರೇ ಸಾಕ್ಷಿ.


ಆದುದರಿಂದ ನಿಮಗಾಗಿ ನಾನು ಸಹಿಸುತ್ತಿರುವ ಸಂಕಟಗಳನ್ನು ನೆನೆದು ಎದೆಗುಂದದಿರಿ. ಇದೆಲ್ಲವೂ ನಿಮ್ಮ ಯಶಸ್ವಿಗಾಗಿಯೇ ಎಂಬುದನ್ನು ಮರೆಯದಿರಿ.


ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಚಿಂತೆ ಮನಸ್ಸನ್ನು ಕುಗ್ಗಿಸುತ್ತದೆ; ಸವಿಮಾತು ಅದನ್ನು ಹಿಗ್ಗಿಸುತ್ತದೆ.


ಹೀಗಿರಲಾಗಿ ಒಲವಿನ ಸಹೋದರರೇ, ನನ್ನ ಅತಿ ಪ್ರಿಯರೇ, ಆಪ್ತರೇ, ನನ್ನ ಮುದವೂ ಮುಕುಟವೂ ಆದವರೇ, ಪ್ರಭುವಿನಲ್ಲಿ ದೃಢ ವಿಶ್ವಾಸಿಗಳಾಗಿ ಬಾಳಿರಿ.


ಇದು ಸುಳ್ಳಲ್ಲ, ಕ್ರಿಸ್ತಯೇಸುವಿನಲ್ಲಿ ಸತ್ಯವಾಗಿಯೇ ಹೇಳುತ್ತಿದ್ದೇನೆ. ಪವಿತ್ರಾತ್ಮಾಧೀನವಾಗಿರುವ ನನ್ನ ಮನಸ್ಸೇ ಇದಕ್ಕೆ ಸಾಕ್ಷಿಯಾಗಿದೆ.


ಬಳಿಕ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ತಮ್ಮೊಂದಿಗೆ ಕರೆದುಕೊಂಡು ಮುಂದಕ್ಕೆಹೋದರು. ಅಲ್ಲಿ ಸ್ವಾಮಿ ಚಿಂತಾಕ್ರಾಂತರಾದರು, ದುಃಖಭರಿತರಾದರು.


“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.


ನಿಂದೆಯಿಂದ ಮನನೊಂದು ಹತಾಶನಾಗಿರುವೆನಯ್ಯಾ I ಹಾತೊರೆದರೂ ದಯೆತೋರುವನಾರೂ ಸಿಗಲಿಲ್ಲ I ಅರಸಿದರೂ ಸಾಂತ್ವನನೀಡುವವನು ದೊರಕಲಿಲ್ಲ II


ಅರಸ ದಾವೀದನು, ಅಮ್ನೋನನ ಸಾವಿನ ದುಃಖ ಶಮನವಾದ ಮೇಲೆ ತನ್ನ ಮಗ ಅಬ್ಷಾಲೋಮನನ್ನು ನೋಡಲು ಹಾತೊರೆಯತೊಡಗಿದನು.


ಸದ್ಯಕ್ಕೆ ನೀವು ಕೊಂಚಕಾಲ ಹಲವಿಧವಾದ ಪರಿಶೋಧನೆಗಳ ನಿಮಿತ್ತ ದುಃಖವನ್ನು ಅನುಭವಿಸಬೇಕಾಗಿದ್ದರೂ ಪ್ರತ್ಯಕ್ಷವಾಗಲಿರುವ ಆ ಸಿರಿಸಂಪತ್ತನ್ನು ಜ್ಞಾಪಿಸಿಕೊಂಡು ಹರ್ಷಚಿತ್ತರಾಗಿರಿ.


ನಿಮ್ಮನ್ನು ಜ್ಞಾಪಿಸಿಕೊಳ್ಳುವಾಗಲೆಲ್ಲ ನಾನು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಒಬ್ಬರ ಭಾರವನ್ನು ಒಬ್ಬರು ಹೊತ್ತುಕೊಳ್ಳಿ. ಹೀಗೆ ಕ್ರಿಸ್ತಯೇಸುವಿನ ನಿಯಮವನ್ನು ನೆರವೇರಿಸುವಿರಿ.


ದೇವರು ನಿಮಗೆ ಅನುಗ್ರಹಿಸಿರುವ ಅತಿಶಯವಾದ ವರಕ್ಕಾಗಿ ಅವರು ಪ್ರೀತಿವಾತ್ಸಲ್ಯದಿಂದ ನಿಮಗೋಸ್ಕರ ಪ್ರಾರ್ಥಿಸುವರು.


ಒಂದು ಅಂಗಕ್ಕೆ ನೋವಾದರೆ, ಎಲ್ಲಾ ಅಂಗಗಳೂ ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ನಲಿವಾದರೆ, ಮಿಕ್ಕೆಲ್ಲಾ ಅಂಗಗಳು ಅದರೊಡನೆ ಸೇರಿ ನಲಿದಾಡುತ್ತವೆ.


ನಾನು ನಿಮ್ಮನ್ನು ಕಂಡು, ನಿಮ್ಮೊಡನೆ ಅಧ್ಯಾತ್ಮಿಕ ವರಗಳನ್ನು ಹಂಚಿಕೊಂಡು, ನಿಮ್ಮನ್ನು ದೃಢಪಡಿಸಲು ಅತ್ಯಾಸಕ್ತಿಯಿಂದಿದ್ದೇನೆ.


ಅದಕ್ಕೆ ಅವನು ಪ್ರತ್ಯುತ್ತರವಾಗಿ, “ನೀವು ಮಾಡುತ್ತಿರುವುದಾದರೂ ಏನು? ನಿಮ್ಮ ಅಳುವಿನಿಂದ ನನ್ನ ಹೃದಯವನ್ನು ಸೀಳುತ್ತಿರುವಿರಾ? ನಾನು ಜೆರುಸಲೇಮಿನಲ್ಲಿ ಬಂಧಿತನಾಗುವುದಕ್ಕೆ ಮಾತ್ರವಲ್ಲ, ಪ್ರಭು ಯೇಸುವಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ನನ್ನ ಪ್ರಲಾಪವನ್ನು ನಾನು ಮರೆತುಬಿಟ್ಟರೆ ಬಾಡಿದ ಮುಖವನ್ನು ಮಾರ್ಪಡಿಸಿಕೊಂಡರೆ ಹರ್ಷಿಸುವೆನೆಂದು ನಾನು ಮನಸ್ಸುಮಾಡಿದರೆ.


ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಸರ್ವೇಶ್ವರನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿಮ್ಮ ಕೈ ನನ್ನನ್ನೂ ನನ್ನ ಮನೆಯವರನ್ನೂ ಶಿಕ್ಷಿಸಲಿ,” ಎಂದು ಬೇಡಿಕೊಂಡನು.


ನನಗೆ ನೆರವಾಗಲು ನೀವು ಕಳುಹಿಸಿದ ಸಹೋದರ ಎಪಫ್ರೋದಿತನು ನಿಮ್ಮಲ್ಲಿಗೆ ಹಿಂದಿರುಗುವುದು ಅವಶ್ಯವೆಂದು ಭಾವಿಸುತ್ತೇನೆ. ಅವನು ನನ್ನೊಂದಿಗೆ ದುಡಿಯುತ್ತಾ, ಹೋರಾಡುತ್ತಾ ಬಂದಿದ್ದಾನೆ.


ಅವನು ಅಸ್ವಸ್ಥನಾದದ್ದು ನಿಜ; ಸಾವಿನ ದವಡೆಯಿಂದ ಪಾರಾದದ್ದೂ ನಿಜ. ದೇವರ ಕರುಣೆ ಅವನ ಮೇಲೆ ಮಾತ್ರವಲ್ಲದೆ ನನ್ನ ಮೇಲೂ ಇದ್ದುದರಿಂದ ನನಗೆ ದುಃಖದ ಮೇಲೆ ದುಃಖ ಬರದಂತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು