Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:27 - ಕನ್ನಡ ಸತ್ಯವೇದವು C.L. Bible (BSI)

27 ಅವನು ಅಸ್ವಸ್ಥನಾದದ್ದು ನಿಜ; ಸಾವಿನ ದವಡೆಯಿಂದ ಪಾರಾದದ್ದೂ ನಿಜ. ದೇವರ ಕರುಣೆ ಅವನ ಮೇಲೆ ಮಾತ್ರವಲ್ಲದೆ ನನ್ನ ಮೇಲೂ ಇದ್ದುದರಿಂದ ನನಗೆ ದುಃಖದ ಮೇಲೆ ದುಃಖ ಬರದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ರೋಗದಲ್ಲಿ ಬಿದ್ದು ಸಾಯುವ ಹಾಗಿದ್ದನೆಂಬುದು ನಿಜವೇ, ಆದರೆ ದೇವರು ಅವನನ್ನು ಕರುಣಿಸಿದನು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖವು ಬಾರದಂತೆ ನನ್ನನ್ನೂ ಕರುಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ರೋಗದಲ್ಲಿ ಬಿದ್ದು ಸಾಯುವ ಹಾಗಿದ್ದನೆಂಬದು ನಿಜವೇ ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅವನು ಅನಾರೋಗ್ಯದಿಂದ ಸಾಯುವ ಸ್ಥಿತಿಯಲ್ಲಿದ್ದನು. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನ್ನನ್ನು ಸಹ ಕರುಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನು ಅಸ್ವಸ್ಥನಾಗಿ ಸಾಯುವ ಹಾಗೆ ಇದ್ದದ್ದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದರು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನು ಕರುಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತೊ ಸಿಕೆತ್ ಪಡುನ್ ಮರ್ತಲ್ಯಾಚ್ಯಾ ಗತಿನ್ ಹೊಲ್ಲೊ ಮನ್ತಲೆ ಖರೆಚ್, ಖರೆ ದೆವಾನ್ ತೆಕಾ ದಯಾ ದಾಕ್ವುಲ್ಯಾನ್, ಅನಿ ತೆಕಾ ತವ್ಡೆಚ್ ನ್ಹಯ್, ವೈಲ್ಯಾ ವೈರ್ ದುಕ್ಕ್ ಯೆಯ್ನಾ ಸಾರ್ಕೆ ಮಾಕಾಬಿ ದಯಾ ದಾಕ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:27
23 ತಿಳಿವುಗಳ ಹೋಲಿಕೆ  

ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ಕ್ರಿಸ್ತಯೇಸುವಿನ ಸೇವೆಯಲ್ಲಿ ಅವನು ಸತ್ತು ಬದುಕಿದ್ದಾನೆ. ನೀವು ಕೊಡಲು ಸಾಧ್ಯವಾಗದೆ ಹೋದ ನೆರವನ್ನು ಅವನು ನನಗೆ ಕೊಟ್ಟು ಸೇವೆಯನ್ನು ಪೂರ್ಣಗೊಳಿಸಿದ್ದಾನೆ.


ಈಗ ನೀವು ಅವನನ್ನು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ ಅವನು ಅತೀವ ದುಃಖದಲ್ಲಿಯೇ ಮುಳುಗಿಹೋದಾನು.


ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.


ಅವಳು ಕಾಯಿಲೆಯಿಂದ ಒಂದು ದಿನ ಸತ್ತಳು. ಜನರು ಅವಳ ಶವಕ್ಕೆ ಸ್ನಾನಮಾಡಿಸಿ ಮೇಲಂತಸ್ತಿನ ಕೋಣೆಯಲ್ಲಿ ಇರಿಸಿದರು.


ಐದಾರು ಇಕ್ಕಟ್ಟುಗಳಿಂದ ನಿನ್ನನು ಬಿಡಿಸುವನು ಏಳನೆಯದು ಬಂದರೂ ನಿನ್ನನು ಕೇಡು ಮುಟ್ಟದು.


ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ಮರಳಿ ಮಾಡು ನಮ್ಮೀಕಾಲದಲಿ ಅವುಗಳನು ಪ್ರಚುರಪಡಿಸು ಪ್ರಸ್ತುತಕಾಲದಲಿ ಅವುಗಳನು ರೋಷಗೊಂಡರೂ ಮರೆಯದಿರು ಕರುಣೆಯನು


ಹೇ ಸರ್ವೇಶ್ವರಾ, ನಮ್ಮನ್ನು ದಂಡಿಸಿ ಸುಧಾರಿಸಿ ಆದರೆ ಮಿತಿಮೀರಬೇಡ, ಕೋಪದಿಂದ ದಂಡಿಸಬೇಡಿ. ಇಲ್ಲವಾದರೆ ನಾವು ನಶಿಸಿ ನಾಶವಾದೇವು !


ಅಯ್ಯೋ, ನಾನು ಮುಕ್ತನಾಗಿಲ್ಲ ದುಃಖದಿಂದ ನನ್ನ ಹೃದಯ ಕುಂದಿಹೋಗಿದೆ ಶೋಕದಿಂದ.


ನಾ ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ನನ್ನಾತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ; ನನ್ನ ಪಾಪಗಳನ್ನೆಲ್ಲಾ ನೀ ಹಾಕಿರುವೆ ನಿನ್ನ ಬೆನ್ನ ಹಿಂದೆ.


ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.


ಆ ದಿನಗಳಲ್ಲಿ ಹಿಜ್ಕೀಯನು ಮಾರಕ ರೋಗದಿಂದ ನರಳುತ್ತಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನಿನ್ನ ಸಂಸಾರದ ವಿಷಯವಾಗಿ ವ್ಯವಸ್ಥೆಮಾಡು; ಏಕೆಂದರೆ, ‘ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ,’ ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದು ಹೇಳಿದನು.


ವ್ಯಥೆಪಡುತ್ತಿದ್ದ ನನಗೆ ಸರ್ವೇಶ್ವರ ದುಃಖದ ಮೇಲೆ ದುಃಖ ಕಳುಹಿಸಿದ್ದಾರೆ. ನಾನು ನರಳಿ ದಣಿದು ಹೋಗಿದ್ದೇನೆ. ನನಗೆ ಯಾವ ನೆಮ್ಮದಿಯೂ ದೊರಕದಿದೆ’ ಎಂದು ಹೇಳುತ್ತಿರುವೆ ಅಲ್ಲವೆ?


ನಿಮ್ಮನ್ನೆಲ್ಲಾ ನೋಡಲು ಅವನು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮ್ಮ ಕಿವಿಗೆ ಮುಟ್ಟಿತೆಂದು ತಿಳಿದು ಬಹಳ ವ್ಯಸನಪಡುತ್ತಿದ್ದಾನೆ.


ಎಪಫ್ರೋದಿತನನ್ನು ನಿಮ್ಮ ಬಳಿಗೆ ಕಳುಹಿಸಲು ತವಕದಿಂದಿದ್ದೇನೆ. ಅವನನ್ನು ಕಂಡು ನಿಮಗೆ ಆನಂದವಾಗುವುದು, ನನ್ನ ದುಃಖವೂ ಶಮನವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು