Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:9 - ಕನ್ನಡ ಸತ್ಯವೇದವು C.L. Bible (BSI)

9 ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನು ಇತ್ತನು ಹೆಸರುಗಳೊಳುತ್ತಮ ಹೆಸರನು ದೇವಪರಮನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ದೇವರು ಆತನನ್ನು ಅತ್ಯುನ್ನತವಾದ ಸ್ಥಾನಕ್ಕೇರಿಸಿ ಉಳಿದೆಲ್ಲ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ಕಾರಣದಿಂದಲೇ ದೇವರು ಅವರನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಅವರಿಗೆ ದಯಪಾಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಹೆಚ್ಯಾ ಸಾಟ್ನಿ ದೆವಾನ್ ತೆಕಾ ಲೈ ವೈಲ್ಯಾ ಜಾಗ್ಯಾಕ್ ನ್ಹೆವ್ನ್, ಸಗ್ಳ್ಯಾ ನಾವಾಂಚ್ಯಾನ್ಬಿ ಎಗ್ದಮ್ ಬರೆ ನಾವ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:9
46 ತಿಳಿವುಗಳ ಹೋಲಿಕೆ  

ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ.


ಅವರೆಲ್ಲರೂ ಉಚ್ಚಕಂಠದಿಂದ : “ವಧಿತ ಕುರಿಮರಿಯಾದಾತನು ಶಕ್ತಿಯನು, ಸಿರಿತನವನು ಗೌರವವನು, ಘನಮಾನವನು ಸ್ತುತಿಯನು, ಸುಜ್ಞಾನವನು ಹೊಂದಲು ಯೋಗ್ಯನು,” ಎಂದು ಹಾಡಿದರು.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ಹೀಗೆ ದೇವರ ಪುತ್ರನು ದೇವದೂತರಿಗಿಂತಲೂ ಶ್ರೇಷ್ಠ; ಅವರಿಗಿಂತಲೂ ಹೆಸರುವಾಸಿಯಾದಾತ.


ಮಾಡುವೆನವನನು ಜೇಷ್ಠಪುತ್ರನನ್ನಾಗಿ I ಭೂರಾಜರುಗಳೊಳು ಅತ್ಯುನ್ನತನನ್ನಾಗಿ I


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ.


ಬೆಂಬಲವಾಗಿ ನಿಂತಿಹನು ಪ್ರಭು ನಿನ್ನ ಹತ್ತಿರದಲೆ I ಸದೆಬಡಿವನು ಅರಸರನು ತನ್ನ ಪ್ರಕೋಪ ದಿನದಲೆ II


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಪ್ರಭು : “ನನ್ನ ಭಕ್ತನಾದ್ದರಿಂದ ವಿಮೋಚಿಸುವೆನು ಅವನನು I ನನ್ನ ನಾಮವನು ಅರಿತವನಾದ್ದರಿಂದ ರಕ್ಷಿಸುವೆನು II


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ತಂದೆಯಾದ ದೇವರಿಂದ ಅವರು ಗೌರವವನ್ನೂ ಮಹಿಮೆಯನ್ನೂ ಪಡೆದಾಗ, “ಈತನು ನನ್ನ ಪುತ್ರ, ನನಗೆ ಪ್ರಿಯನಾದವನು; ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂದು ಅವರನ್ನು ಕುರಿತೇ ವಾಣಿಯೊಂದು ಮಹೋನ್ನತ ವೈಭವದಿಂದ ಕೇಳಿಬಂದಿತು.


ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ಊಟಕ್ಕೆ ಎಲ್ಲರೂ ಕುಳಿತಿದ್ದರು. ಪಿತನು ಎಲ್ಲವನ್ನೂ ತಮ್ಮ ಕೈಗೆ ಒಪ್ಪಿಸಿರುವರೆಂದೂ ತಾವು ದೇವರ ಬಳಿಯಿಂದ ಬಂದಿದ್ದು, ಈಗ ದೇವರ ಬಳಿಗೇ ಮರಳುತ್ತಿದ್ದೆನೆಂದೂ ಯೇಸುವಿಗೆ ತಿಳಿದಿತ್ತು.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ.


ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರಗ್ರಂಥದ ಮಾತು ನೆರವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ.


ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ:


ಹೀಗೆ ನಿಮ್ಮ ಮುಖಾಂತರ ಪ್ರಭು ಯೇಸುವಿನ ನಾಮಕ್ಕೂ ಮತ್ತು ಅವರಲ್ಲಿ ನಿಮಗೂ ಮಹಿಮೆಯುಂಟಾಗಲಿ. ನಮ್ಮ ದೇವರ ಹಾಗು ಪ್ರಭು ಯೇಸುಕ್ರಿಸ್ತರ ಅನುಗ್ರಹದಿಂದ ಇದು ನೆರವೇರಲಿ.


ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ.


ಅವರು ಈ ಸಂಚಾರವನ್ನು ಕೈಗೊಂಡಿರುವುದು ಕ್ರಿಸ್ತಯೇಸುವಿನ ಸೇವೆಗಾಗಿಯೆ. ಅನ್ಯಧರ್ಮೀಯರಿಂದ ಅವರು ಯಾವ ಸಹಾಯವನ್ನೂ ಸ್ವೀಕರಿಸುವವರಲ್ಲ. ಆದ್ದರಿಂದ, ಇಂಥವರಿಗೆ ನಾವು ನೆರವಾಗಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು