Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:10 - ಕನ್ನಡ ಸತ್ಯವೇದವು C.L. Bible (BSI)

10 ಯೇಸುಸ್ವಾಮಿಯನ್ನು ಅರಿಯಬೇಕು; ಅವರ ಪುನರುತ್ಥಾನದ ಪ್ರಭಾವವನ್ನು ಅನುಭವಿಸಬೇಕು; ಅವರ ಯಾತನೆಗಳಲ್ಲಿ ಪಾಲುಗೊಳ್ಳಬೇಕು; ಅವರ ಮರಣದಲ್ಲಿ ಅವರಂತೆಯೇ ಆಗಬೇಕು - ಇದೇ ನನ್ನ ಹೆಬ್ಬಯಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳುಕೊಂಡು ಆತನ ಮರಣದ ವಿಷಯದಲ್ಲಿ ಆತನಿಗೆ ಸರೂಪನಾಗಬೇಕೆಂಬದೇ ನನ್ನ ಕುತೂಹಲವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕ್ರಿಸ್ತನನ್ನೂ ಪುನರುತ್ಥಾನದ ಶಕ್ತಿಯನ್ನೂ ತಿಳಿದುಕೊಂಡು ಆತನ ಸಂಕಟದಲ್ಲಿ ಪಾಲುಗಾರನಾಗಿ ಆತನ ಮರಣದಲ್ಲಿ ಆತನಂತಾಗಬೇಕೆಂಬುದೇ ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕ್ರಿಸ್ತನನ್ನೂ ಅವರ ಪುನರುತ್ಥಾನದ ಶಕ್ತಿಯನ್ನೂ ನಾನು ಅರಿತುಕೊಂಡು, ಕ್ರಿಸ್ತನ ಶ್ರಮೆಯಲ್ಲಿ ಪಾಲುಗೊಳ್ಳುವ ಅನ್ಯೋನ್ಯತೆಯನ್ನೂ ಅವರ ಮರಣದಲ್ಲಿ ಅವರ ಹಾಗೆ ಆಗುವುದನ್ನೂ ತಿಳಿಯುವುದೇ ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಶೆ ತೆಕಾ ತೆಚ್ಯಾ ಪರ್ತುನ್ ಝಿತ್ತೊ ಹೊತಲ್ಯಾ ಬಳಾಕ್ ತೆಚ್ಯಾ ತರಾಸಾತ್ನಿ ವಾಟೊ ಘೆತಲೆ ಕಳ್ವುನ್ ಘೆವ್ನ್ ತೆಚ್ಯಾ ಮರ್‍ನಾಚ್ಯಾ ವಿಶಯಾತ್ ತೆಚ್ಯಾ ಸಾರ್ಕೆಚ್ ಹೊವ್ಚೆ ಮನ್ತಲಿ ಮಾಜಿ ಇಚ್ಛ್ಯಾ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:10
34 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ನಾವು ದೇವರ ಆಜ್ಞೆಗಳನ್ನು ಕೈಗೊಂಡು ನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ.


ನೀವು ಯೇಸುಕ್ರಿಸ್ತರೊಂದಿಗೆ ಪುನರುತ್ಥಾನ ಹೊಂದಿರುವುದಾದರೆ ಸ್ವರ್ಗೀಯ ವಿಷಯಗಳ ಕಡೆಗೆ ಗಮನಕೊಡಿ. ಕ್ರಿಸ್ತಯೇಸು ಸ್ವರ್ಗದಲ್ಲಿ ದೇವರ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ಕ್ರಿಸ್ತಯೇಸುವಿನ ಯಾತನೆಯು ನಮ್ಮ ಬಾಳಿನಲ್ಲಿ ತುಂಬಿರುವಂತೆ ಅವರ ಮುಖಾಂತರ ಲಭಿಸುವ ಸಾಂತ್ವನವೂ ನಮ್ಮಲ್ಲಿ ತುಂಬಿರುತ್ತದೆ.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ಬಲಹೀನಾವಸ್ಥೆಯಲ್ಲಿ ಅವರನ್ನು ಶಿಲುಬೆಗೇರಿಸಲಾಯಿತು ಎಂಬುದೇನೋ ನಿಜ. ಆದರೆ, ದೇವರ ಶಕ್ತಿಯಿಂದ ಅವರು ಜೀವಂತರಾಗಿದ್ದಾರೆ. ಕ್ರಿಸ್ತಯೇಸುವಿನಲ್ಲಿ ನಾವೂ ಬಲಹೀನರೇ. ಆದರೆ ನಿಮ್ಮ ವಿಷಯದಲ್ಲಿ ವರ್ತಿಸುವಾಗ ದೇವರ ಶಕ್ತಿಯಿಂದ ಯೇಸುಸ್ವಾಮಿಯೊಂದಿಗೆ ಜೀವಂತರಾಗಿದ್ದೇವೆ.


ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬಂದಿರುತ್ತದೆ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ನಿಮ್ಮ ಪಾಪಮಯ ಜೀವನದಿಂದಲೂ ಸುನ್ನತಿ ರಹಿತವಾದ ಸ್ವಭಾವದಿಂದಲೂ ಒಮ್ಮೆ ನೀವು ಮೃತರಾಗಿದ್ದೀರಿ. ಆದರೆ ಈಗ ದೇವರು ಕ್ರಿಸ್ತಯೇಸುವಿನೊಂದಿಗೆ ನಿಮ್ಮನ್ನು ಜೀವಂತಗೊಳಿಸಿದ್ದಾರೆ.


ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ.


ದೇವರೇ ನಮ್ಮನ್ನು ಈ ಭಯಂಕರ ಮರಣದಿಂದ ಪಾರುಮಾಡಿದರು. ಇನ್ನು ಮುಂದಕ್ಕೂ ಪಾರುಮಾಡುವರು. ಹೌದು, ನೀವು ಸಹ ನಮಗಾಗಿ ಪ್ರಾರ್ಥಿಸುತ್ತಾ ನಮ್ಮೊಡನೆ ಸಹಕರಿಸಿದರೆ, ಇನ್ನು ಮುಂದಕ್ಕೂ ನಮ್ಮನ್ನು ಪಾರುಮಾಡುವರು ಎಂಬ ಭರವಸೆಯಿಂದ ಇದ್ದೇವೆ. ಇದರ ಫಲವಾಗಿ ನಮಗೆ ದೊರೆಯುವ ವರದಾನಗಳಿಗಾಗಿ ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸುವರು.


ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನಾಗಿಯೇ ಅದನ್ನು ಧಾರೆಯೆರೆಯುತ್ತೇನೆ. ಅದನ್ನು ಧಾರೆಯೆರೆಯುವ ಹಕ್ಕು ನನಗಿದೆ. ಅದನ್ನು ಪುನಃ ಪಡೆಯುವ ಹಕ್ಕು ಸಹ ನನಗಿದೆ. ಈ ಆಜ್ಞೆಯನ್ನು ನಾನು ನನ್ನ ಪಿತನಿಂದ ಪಡೆದಿದ್ದೇನೆ,” ಎಂದು ನುಡಿದರು.


ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು," ಎಂದು ನುಡಿದರು.


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: ದಿನವಿಡೀ ನಿಮಗೋಸ್ಕರವೇ ಸಾವಿಗೀಡಾಗುತಿಹೆವು ನಾವು ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಪರಿಗಣಿತರಾಗುತಿಹೆವು ನಾವು.”


ಇನ್ನು ಮೇಲೆ ಯಾರೂ ನನಗೆ ತೊಂದರೆ ಕೊಡದಿರಲಿ. ಯೇಸುವಿನ ದಾಸನೆಂದು ಸೂಚಿಸುವ ಕೆಂಗುರುತುಗಳು ನನ್ನ ದೇಹದಲ್ಲಿ ಮುದ್ರಿತವಾಗಿವೆ.


ನಾನು ಈ ದೇಹವೆಂಬ ಗುಡಾರದಲ್ಲಿ ಜೀವಿಸಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ, ಪ್ರೋತ್ಸಾಹಿಸುವುದು ಉಚಿತವೆಂದು ಎಣಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು