Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:13 - ಕನ್ನಡ ಸತ್ಯವೇದವು C.L. Bible (BSI)

13 ಸಹೋದರರೇ, ಆ ಗುರಿಯನ್ನು ತಲುಪಿದ್ದೇನೆಂದು ನಾನೆಂದೂ ಹೇಳಿಕೊಂಡಿಲ್ಲ. ಆದರೆ ಇದು ನಿಜ. ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು, ಮುಂದಿನವುಗಳ ಮೇಲೆ ಕಣ್ಣಿಟ್ಟು ನಾನು ಓಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವುದಕ್ಕಾಗಿ ಎದೆಬೊಗ್ಗಿದವನಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸಹೋದರರೇ, ನಾನಂತೂ ಹಿಡಿದುಕೊಂಡವನೆಂದು ನನ್ನನ್ನು ಈವರೆಗೂ ಎಣಿಸಿಕೊಳ್ಳುವದಿಲ್ಲ; ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕೆ ಎದೆ ಬೊಗ್ಗಿದವನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಹೋದರ ಸಹೋದರಿಯರೇ, ನಾನಿನ್ನೂ ಆ ಗುರಿಯನ್ನು ಮುಟ್ಟಿಲ್ಲವೆಂಬುದು ನನಗೆ ಗೊತ್ತಿದೆ. ಆದರೆ ನಾನು ಯಾವಾಗಲೂ ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ನನ್ನ ಮುಂದಿರುವ ಗುರಿಯನ್ನು ಮುಟ್ಟಲು ನನ್ನಿಂದಾದಷ್ಟರ ಮಟ್ಟಿಗೆ ಓಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪ್ರಿಯರೇ, ನಾನಂತೂ ಆ ಗುರಿಯನ್ನು ತಲುಪಿದ್ದೇನೆಂದು ಭಾವಿಸಿಕೊಂಡಿಲ್ಲ. ಆದರೆ ಒಂದು ಸಂಗತಿ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು, ಮುಂದಿನ ವಿಷಯಗಳನ್ನು ಮಾತ್ರ ಲಕ್ಷ್ಯವನ್ನಾಗಿ ಮಾಡಿಕೊಂಡು ಅದನ್ನೇ ಪಡೆದುಕೊಳ್ಳುವುದಕ್ಕಾಗಿ ಓಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಭಾವಾನು ಅನಿ ಭೆನಿಯಾನು, ಮಿಯಾತರ್ ಧರುನ್ ಘೆಟಲೊ ಮನುನ್ ಚಿಂತುನ್ ಘೆಯ್ನಾ, ಖರೆ ಹೆ ಎಕ್ ಕರ್‍ತಾ , ಮಿಯಾ ಅದ್ಲಿ ವಿಶಯಾ ಇಸ್ರುನ್ ಸೊಡುನ್ ಫಿಡೆ ಹೊತಲೆ ಹೊತ್ತೆ ಧರುಕ್ ಸಾಟ್ನಿ ಮಾಜ್ಯಾಕ್ನಾ ಹೊತಾ ತವ್ಡೆ ಕಟ್ಪಟುಲ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:13
15 ತಿಳಿವುಗಳ ಹೋಲಿಕೆ  

ಯೇಸು ಅವನನ್ನು ನೋಡಿ, “ನೇಗಿಲಿಗೆ ಕೈಹಾಕಿ ಹಿಂದಕ್ಕೆ ನೋಡುವವನು ದೇವರ ಸಾಮ್ರಾಜ್ಯಕ್ಕೆ ತಕ್ಕವನಲ್ಲ,” ಎಂದರು.


ಈಗಾಗಲೇ ನಾನಿದೆಲ್ಲವನ್ನೂ ಸಾಧಿಸಿದ್ದೇನೆ, ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ನೀವು ಭಾವಿಸಬಾರದು. ಕ್ರಿಸ್ತಯೇಸು ನನ್ನನ್ನು ಯಾವುದಕ್ಕಾಗಿ ತಮ್ಮವನನ್ನಾಗಿ ಮಾಡಿಕೊಂಡರೋ, ಅದನ್ನು ನನ್ನದಾಗಿಸಿಕೊಳ್ಳಲು ನಾನು ಪ್ರಯತ್ನಿಸುತ್ತಿದ್ದೇನೆ.


ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಆದುದರಿಂದ ಕ್ರಿಸ್ತಯೇಸುವನ್ನು ಕುರಿತಾದ ಪ್ರಾಥಮಿಕ ಪಾಠಗಳಲ್ಲೇ ನಿಂತುಬಿಡದೆ ಪ್ರೌಢ ವಿಷಯಗಳತ್ತ ಸಾಗೋಣ.


ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ.


ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.


ಪ್ರಿಯರೇ, ಮತ್ತೊಂದು ವಿಷಯವನ್ನು ಮರೆಯದಿರಿ: ಪ್ರಭುವಿನ ದೃಷ್ಟಿಯಲ್ಲಿ ಒಂದು ದಿನ ಸಾವಿರ ವರ್ಷಗಳಂತೆಯೂ ಮತ್ತು ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ.


ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.


ಎಲೌ ಕುವರಿಯೇ, ಕೇಳು, ಎನ್ನ ಮಾತಿಗೆ ಕಿವಿಗೊಡು I ನಿನ್ನ ಜನರನು, ತೌರು ಮನೆಯನು ಮರೆತುಬಿಡು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು