Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:15 - ಕನ್ನಡ ಸತ್ಯವೇದವು C.L. Bible (BSI)

15 ನಮ್ಮಲ್ಲಿ ಪರಿಣತರಾದವರು ಈ ವಿಷಯದಲ್ಲಿ ಇದೇ ಮನೋಭಾವನೆಯಿಂದ ಇರಬೇಕು. ಯಾವುದಾದರೂ ಒಂದು ವಿಷಯದಲ್ಲಿ ನೀವು ಭಿನ್ನಾಭಿಪ್ರಾಯ ಉಳ್ಳವರಾಗಿದ್ದರೆ ದೇವರು ನಿಜಾಂಶವನ್ನು ಸ್ಪಷ್ಟೀಕರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಮ್ಮಲ್ಲಿ ಪ್ರವೀಣರಾದವರೆಲ್ಲರೂ ಈ ವಿಷಯದಲ್ಲಿ ಇದೇ ಅಭಿಪ್ರಾಯವುಳ್ಳವರಾಗಿರಿ. ಮತ್ತು ಯಾವುದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನು ದೇವರು ನಿಮಗೆ ತೋರಿಸಿಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಮ್ಮಲ್ಲಿ ಪ್ರವೀಣರಾದವರು ಇದೇ ಅಭಿಪ್ರಾಯವುಳ್ಳವರಾಗಿರೋಣ. ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆತ್ಮಿಕತೆಯಲ್ಲಿ ಪರಿಪೂರ್ಣವಾದ ಮಟ್ಟಕ್ಕೆ ಬಂದಿರುವ ನಾವೆಲ್ಲರೂ ಇದೇ ರೀತಿ ಯೋಚಿಸಬೇಕು. ನೀವು ಈ ಸಂಗತಿಗಳಲ್ಲಿ ಯಾವುದನ್ನಾದರೂ ಒಪ್ಪಿಕೊಳ್ಳದಿದ್ದರೆ ದೇವರೇ ನಿಮಗೆ ಅದನ್ನು ಸ್ಪಷ್ಟಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ನಮ್ಮಲ್ಲಿ ಆತ್ಮಿಕ ಪರಿಪಕ್ವತೆಯುಳ್ಳವರು ಇದೇ ಮನೋಭಾವವುಳ್ಳವರಾಗಿರಬೇಕು. ಕೆಲವು ವಿಷಯಗಳ ಮೇಲೆ ಭಿನ್ನಾಭಿಪ್ರಾಯವಿದ್ದರೆ, ಅದನ್ನೂ ದೇವರು ನಿಮಗೆ ಸ್ಪಷ್ಟಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಸೆ ಹೊವ್ನ್ ಅಮ್ಚ್ಯಾತ್ ತಯಾರ್ ಹೊವ್ನ್ ಹೊತ್ತೆ ಸಗ್ಳೆಬಿ ಹ್ಯಾಚ್ ಮನಾಚೆ ಹೊವ್ನ್ ರಾಂವಾ, ಖಚ್ಚ್ಯಾ ತರಿಬಿ ಎಕ್ ವಿಶಯಾತ್ ತುಮಿ ದುಸ್ರ್ಯಾ ಮನಾನ್ ಹೊತ್ತೆ ಹೊಲ್ಯಾರ್ ತೆ ದೆವುಚ್ ತುಮ್ಕಾ ದಾಕ್ವುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:15
21 ತಿಳಿವುಗಳ ಹೋಲಿಕೆ  

ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


ಭಿನ್ನಾಭಿಪ್ರಾಯಗಳಿಗೆ ನೀವು ಮಣಿಯುವುದಿಲ್ಲವೆಂದು ನಿಮ್ಮನ್ನು ಕುರಿತು ಪ್ರಭುವಿನಲ್ಲಿ ನನಗೆ ದೃಢವಾದ ನಂಬಿಕೆ ಇದೆ. ನಿಮ್ಮಲ್ಲಿ ಗೊಂದಲ ಎಬ್ಬಿಸುವವನು ಯಾರೇ ಆಗಿರಲಿ, ಅವನು ದೈವದಂಡನೆಗೆ ಗುರಿಯಾಗುತ್ತಾನೆ.


ನಾನು ಪರಿಣಿತರೊಂದಿಗೆ ಜ್ಞಾನವನ್ನೇ ಕುರಿತು ಮಾತನಾಡುತ್ತೇನೆ. ಆದರೆ ಇದು ಇಹಲೋಕದ ಜ್ಞಾನವಲ್ಲ, ಅಳಿದುಹೋಗುವಂಥ ಅಧಿಪತಿಗಳ ಜ್ಞಾನವೂ ಅಲ್ಲ.


ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ವಿಶ್ವಾಸದಲ್ಲಿ ದೃಢವಾಗಿರುವ ನಾವು ನಮ್ಮ ಹಿತವನ್ನೇ ಬಯಸದೆ ವಿಶ್ವಾಸದಲ್ಲಿ ದೃಢವಲ್ಲದವರ ಲೋಪದೋಷಗಳನ್ನು ಸಹಿಸಿಕೊಳ್ಳಬೇಕು.


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”


ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬಂದಿರುತ್ತದೆ.


ಅದರ ಮೂಲಕ ದೈವಭಕ್ತರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು.


‘ದೇವರಿಂದಲೇ ಅವರೆಲ್ಲರೂ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ಪಿತನಿಗೆ ಕಿವಿಕೊಟ್ಟು ಅವರಿಂದಲೇ ಕಲಿತುಕೊಂಡ ಪ್ರತಿ ಒಬ್ಬನೂ ನನ್ನ ಬಳಿಗೆ ಬರುತ್ತಾನೆ.


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ಸಹೋದರ ಪ್ರೇಮವನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ನೀವು ಒಬ್ಬರನ್ನೊಬ್ಬರು ಪ್ರೀತಿಸುವುದನ್ನು ದೇವರಿಂದಲೇ ಕಲಿತಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು