Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:16 - ಕನ್ನಡ ಸತ್ಯವೇದವು C.L. Bible (BSI)

16 ಅಂತೂ, ಇದುವರೆಗೆ ನಾವು ಎಷ್ಟೇ ಮುಂದುವರೆದಿದ್ದರೂ ಅದೇ ಮಾರ್ಗದಲ್ಲಿ ಸಾಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಂತೂ, ನಾವು ಯಾವ ಸೂತ್ರವನ್ನನುಸರಿಸಿ ಇಲ್ಲಿಯ ವರೆಗೆ ಬಂದೆವೋ ಅದನ್ನೇ ಅನುಸರಿಸಿ ನಡೆಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ನಾವು ಯಾವ ಸೂತ್ರವನ್ನನುಸರಿಸಿ ಇಲ್ಲಿಯವರೆಗೆ ಬಂದೆವೋ ಅದನ್ನೇ ಅನುಸರಿಸಿ ನಡೆಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ನಾವು ಈಗಾಗಲೇ ಹೊಂದಿರುವ ಸತ್ಯವನ್ನು ಅನುಸರಿಸುತ್ತಾ ನಡೆಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೂ ಈಗಾಗಲೇ ನಾವು ಯಾವುದರಲ್ಲಿ ಮುಂದುವರೆದಿದ್ದೇವೋ ಆ ಸೂತ್ರದ ಪ್ರಕಾರ ಒಂದೇ ಮನಸ್ಸುಳ್ಳವರಾಗಿ ಬಾಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಮಿ ಎವ್ಡ್ಯಾ ಪತರ್ ಚಲುನ್ಗೆತ್ ಯೆಲ್ಲ್ಯಾ ಸಾರ್ಕೆಚ್ ಹೆಚ್ಯಾನ್ ಫಿಡೆಬಿ ತ್ಯಾ ನಿಯಮಾ ಸಾರ್ಕೆಚ್ ಚಲುಂವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:16
14 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತಯೇಸುವನ್ನು ಪ್ರಭುವಾಗಿ ಸ್ವೀಕರಿಸಿರುವುದರಿಂದ, ಅವರೊಡನೆ ಐಕ್ಯತೆಯಿಂದ ಬಾಳಿರಿ.


ನಿನಗೆ ಕೊಡಲಾದ ಬೋಧನೆಯನ್ನೂ ಅದನ್ನು ನೀನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೋ. ಅದರಂತೆ ನಡೆದು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಎಚ್ಚೆತ್ತುಕೊಳ್ಳದಿದ್ದರೆ ನಾನು ಕಳ್ಳನು ಬರುವಂತೆ ಬರುತ್ತೇನೆ. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಧಾಳಿಮಾಡುತ್ತೇನೆಂದೇ ನಿನಗೆ ತಿಳಿಯದು.


ಈ ನಿಯಮವನ್ನು ಅನುಸರಿಸುವ ಎಲ್ಲರಿಗೂ, ಅಂದರೆ ನಿಜ ಇಸ್ರಯೇಲರಾದ ದೇವಜನರೆಲ್ಲರಿಗೂ ಶಾಂತಿಸಮಾಧಾನವೂ ಕೃಪಾಶೀರ್ವಾದವೂ ಲಭಿಸಲಿ!


ಆ ಸ್ಥೈರಣೆ ಮತ್ತು ಉತ್ತೇಜನದ ಮೂಲವಾಗಿರುವ ದೇವರು, ನೀವೆಲ್ಲರು ಕ್ರಿಸ್ತಯೇಸುವನ್ನು ಅನುಸರಿಸುತ್ತಾ ಒಮ್ಮನಸ್ಸಿನಿಂದ ಬಾಳುವಂತೆ ಮಾಡಲಿ.


ಯುವೋದ್ಯಳು ಮತ್ತು ಸಂತುಕೆ ಇವರಲ್ಲಿ ನನ್ನದೊಂದು ಬಿನ್ನಹ: ನಿಮ್ಮ ಭಿನ್ನಾಭಿಪ್ರಾಯಗಳನ್ನು ತೊರೆದು ಪ್ರಭುವಿನಲ್ಲಿ ಒಂದಾಗಿ ಬಾಳಿರಿ.


ನಿಮ್ಮೆಲ್ಲರಲ್ಲಿ ಒಂದೇ ಮನಸ್ಸು, ಒಂದೇ ಪ್ರೀತಿ ಇರಲಿ. ನಿಮ್ಮ ಗುರಿ ಧ್ಯೇಯಗಳು ಒಂದೇ ಆಗಿರಲಿ. ಆಗ ನನ್ನ ಸಂತೋಷವು ಸಂಪೂರ್ಣಗೊಳ್ಳುವುದು.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ನಿಮ್ಮನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ.


ಇದುವರೆಗೂ ನಿಮ್ಮ ಬದುಕಿನ ಓಟ ಚೆನ್ನಾಗಿ ಸಾಗುತ್ತಿತ್ತು. ಸತ್ಯಕ್ಕೆ ಶರಣರಾಗದಂತೆ ಈಗ ನಿಮ್ಮನ್ನು ತಡೆದವರು ಯಾರು?


ಪ್ರಾರ್ಥನಾ ಜೀವನ ನಡೆಸಿರಿ. ಪ್ರಾರ್ಥಿಸುವಾಗಲೆಲ್ಲಾ ಎಚ್ಚರವಾಗಿದ್ದು ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು