Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:20 - ಕನ್ನಡ ಸತ್ಯವೇದವು C.L. Bible (BSI)

20 ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು, ಉದ್ಧಾರಕರಾದ ಪ್ರಭು ಯೇಸುಕ್ರಿಸ್ತರು ಪುನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವದನ್ನು ಎದುರುನೋಡುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾವಾದರೋ ಪರಲೋಕ ಸಂಸ್ಥಾನದವರು. ನಮ್ಮ ರಕ್ಷಕನು ಅಲ್ಲಿಂದಲೇ ಬರುವುದನ್ನು ನಾವು ಎದುರುನೋಡುತ್ತಿದ್ದೇವೆ. ಪ್ರಭುವಾದ ಯೇಸು ಕ್ರಿಸ್ತನೇ ನಮ್ಮ ರಕ್ಷಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ನಮ್ಮ ಪೌರತ್ವವು ಪರಲೋಕದಲ್ಲಿದೆ. ನಾವು ಪರಲೋಕದಿಂದಲೇ ರಕ್ಷಕರಾಗಿರುವ ಒಬ್ಬರ ಬರುವಿಕೆಗಾಗಿ ಆತುರದಿಂದ ಎದುರುನೋಡುತ್ತಿದ್ದೇವೆ. ಅವರೇ ಕರ್ತದೇವರು ಆಗಿರುವ ಕ್ರಿಸ್ತ ಯೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅಮಿ ತರಿಬಿ ಸರ್‍ಗಾತ್ ರ್‍ಹಾತಲೆ ಥೈತ್ನಾ ರಾಕ್ವನ್‍ಕಾರಿ ಯೆತಲಿ ವಾಟ್ ಬಗುಲ್ಲಾಂವ್, ತೊಚ್ ಧನಿಯಾ ಜೆಜು ಕ್ರಿಸ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:20
36 ತಿಳಿವುಗಳ ಹೋಲಿಕೆ  

ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ.


ನಮ್ಮ ಗಮನವು ಕೇಂದ್ರೀಕೃತವಾಗಿರುವುದು ಗೋಚರವಾದುವುಗಳ ಮೇಲಲ್ಲ, ಅಗೋಚರವಾದುವುಗಳ ಮೇಲೆ. ಗೋಚರವಾದುವುಗಳು ತಾತ್ಕಾಲಿಕ; ಅಗೋಚರವಾದುವುಗಳು ಶಾಶ್ವತ.


ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;


ಸತ್ಯ ವಾಕ್ಯದ, ಅಂದರೆ ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ.


ಯೇಸುಕ್ರಿಸ್ತರೊಡನೆ ನಮ್ಮನ್ನೂ ಎಬ್ಬಿಸಿ, ಸ್ವರ್ಗಲೋಕದಲ್ಲಿ ಅವರ ಸನ್ನಿಧಿಯಲ್ಲಿಯೇ ಮಂಡಿಸುವ ಅವಕಾಶ ಮಾಡಿಕೊಟ್ಟರು.


ಆದ್ದರಿಂದ ಈ ದೇಹವನ್ನು ತ್ಯಜಿಸಿ, ಪ್ರಭುವನ್ನೇ ನೆಚ್ಚಿ ನೆಲಸುವುದು ಲೇಸೆಂದು ಧೈರ್ಯದಿಂದ ಹೇಳುತ್ತೇವೆ.


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ಆದರೆ ಸ್ವರ್ಗೀಯ ಜೆರುಸಲೇಮ್ ದಾಸಿ ಅಲ್ಲ, ಸ್ವತಂತ್ರಳು, ಈಕೆಯೇ ನಮ್ಮ ತಾಯಿ.


ಇದರಿಂದಾಗಿ ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷವಾಗುವುದನ್ನೇ ಎದುರುನೋಡುತ್ತಿರುವ ನಿಮಗೆ ಯಾವ ಕೃಪಾಶೀರ್ವಾದಗಳ ಕೊರತೆಯು ಇಲ್ಲ.


“ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತು ಇರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.


ಆಗ ಯೇಸು, “ನೀನು ಸಂಪೂರ್ಣನಾಗಬೇಕು ಎಂದಿದ್ದರೆ ಹೋಗು, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದುಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದುಬರುತ್ತಾರೆ.


ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ಸತ್ಪುರುಷರು ಪುನರುತ್ಥಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು,” ಎಂದರು.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ವಿವೇಕಿಗಳ ಮಾರ್ಗ ಏರಿಸುವುದು ಸಜ್ಜೀವಕ್ಕೆ; ಅದನ್ನು ಕೈಗೊಳ್ಳುವವರು ಇಳಿಯರು ಪಾತಾಳಕ್ಕೆ.


ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು, ಪ್ರಭು ಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ.


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


“ತನಗೋಸ್ಕರ ಸಂಪತ್ತನ್ನು ಶೇಖರಿಸಿ ಇಟ್ಟುಕೊಂಡು ದೇವರ ದೃಷ್ಟಿಯಲ್ಲಿ ಧನಿಕನಲ್ಲದವನು ಇವನಿಗೆ ಸಮಾನನು,” ಎಂದರು ಯೇಸು.


ಮಣ್ಣಿಗೆ ಸಂಬಂಧಪಟ್ಟವರು ಮಣ್ಣಿನಿಂದ ಆದವನಂತೆಯೇ ಇರುತ್ತಾರೆ. ಸ್ವರ್ಗಕ್ಕೆ ಸಂಬಂಧಪಟ್ಟವರು ಸ್ವರ್ಗದಿಂದ ಬಂದವನಂತೆಯೇ ಇರುತ್ತಾರೆ.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು