ಫಿಲಿಪ್ಪಿಯವರಿಗೆ 3:21 - ಕನ್ನಡ ಸತ್ಯವೇದವು C.L. Bible (BSI)21 ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸಿ ಪ್ರಭಾವವುಳ್ಳ ತನ್ನ ದೇಹದ ಸಾರೂಪ್ಯವಾಗುವಂತೆ ಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಹೀಗೆ ಕ್ರಿಸ್ತ ಯೇಸು ಎಲ್ಲವನ್ನೂ ತಮಗೆ ಅಧೀನ ಮಾಡಿಕೊಳ್ಳುವ ತಮ್ಮ ಶಕ್ತಿಯ ಪ್ರಕಾರ, ಮಹಿಮೆಯುಳ್ಳ ತಮ್ಮ ದೇಹಕ್ಕೆ ಸಮವಾಗಿ ಸಾರೂಪ್ಯವಾಗುವಂತೆ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತೊ ಸಗ್ಳೆಬಿ ಅಪ್ನಾಕ್ ಮಾನಿ ಸಾರ್ಕೆ ಕರುನ್ ಘೆತಲಿ ಬಳ್ ಘೆವ್ನ್ ಗರಿಬ್ಪಾನಾತ್ ಹೊತ್ತೆ ಅಮ್ಚೆ ಆಂಗ್ ಬಳ್ ಹೊತ್ತ್ಯಾ ಅಪ್ಲೆ ಆಂಗ್ ಸಾರ್ಕೆ ರುಪ್ ದಿತಾ. ಅಧ್ಯಾಯವನ್ನು ನೋಡಿ |