Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:7 - ಕನ್ನಡ ಸತ್ಯವೇದವು C.L. Bible (BSI)

7 ಇವನ್ನೆಲ್ಲಾ ಲಾಭವೆಂದು ಪರಿಗಣಿಸಿದ್ದ ನಾನು ಈಗ ಕ್ರಿಸ್ತಯೇಸುವಿನ ಸಲುವಾಗಿ ನಷ್ಟವೆಂದೇ ಎಣಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ, ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿವಿುತ್ತ ನಷ್ಟವೆಂದೆಣಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಒಂದು ಕಾಲದಲ್ಲಿ ಇವುಗಳೆಲ್ಲ ನನಗೆ ಮುಖ್ಯವಾಗಿದ್ದವು. ಆದರೆ ಈಗ ಅವುಗಳೆಲ್ಲ ಕ್ರಿಸ್ತನ ದೆಸೆಯಿಂದ ನಿಷ್ಪ್ರಯೋಜಕವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನನಗೆ ಲಾಭವಾಗಿದ್ದ ಎಲ್ಲವನ್ನೂ ಈಗ ನಾನು ಕ್ರಿಸ್ತನ ನಿಮಿತ್ತ ನಷ್ಟವೆಂದು ಎಣಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ಮಾಕಾ ಫಾಯ್ದೊ ಹೊಲ್ಲೆ ಸಗ್ಳೆಬಿ ಕ್ರಿಸ್ತಾಚ್ಯಾ ಸಾಟ್ನಿ ಲುಕ್ಷಾನ್ ಮನುನ್ ಚಿಂತುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:7
20 ತಿಳಿವುಗಳ ಹೋಲಿಕೆ  

ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ.


ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?


“ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು.


ಹಣವಂತನ ಪ್ರಾಣರಕ್ಷಣೆಗೆ ಅವನ ಹಣವೇ ಈಡು; ಬಡವನಿಗೆ ಈಡಿನ ಬೆದರಿಕೆಯೂ ಇರದು.


ಊರ ಹೊರಗೆ ಬಿಟ್ಟಾದ ಮೇಲೆ ಆ ಇಬ್ಬರಲ್ಲಿ ಒಬ್ಬನು, “ಪ್ರಾಣ ಉಳಿಸಿಕೊಳ್ಳಬೇಕಾದರೆ ಓಡಬೇಕು, ಹಿಂದಕ್ಕೆ ನೋಡಬಾರದು; ಬಯಲುಸೀಮೆಯಲ್ಲೂ ನಿಲ್ಲದೆ ಗುಡ್ಡಗಾಡಿಗೆ ಓಡಬೇಕು, ಇಲ್ಲವಾದರೆ ನಾಶವಾದೀತು!” ಎಂದು ಎಚ್ಚರಿಸಿದನು.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ, ಎಂದ ಹಾಗೆ ಒಬ್ಬ ಮನುಷ್ಯ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ತೊರೆದುಬಿಡುತ್ತಾನೆ.


“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.


ಸತ್ಯವನ್ನು, ಅಂದರೆ ಜ್ಞಾನ, ಸುಶಿಕ್ಷೆ, ವಿವೇಕ ಇವನ್ನು ಬೆಲೆಕೊಟ್ಟಾದರೂ ಕೊಂಡುಕೊ, ಮಾರಿಬಿಡಬೇಡ!


ಲೋಟನ ಹೆಂಡತಿಯೋ, ಅವನ ಹಿಂದೆ ಬರುತ್ತಿದ್ದಾಗ ಹಿಂದಿರುಗಿ ನೋಡಿದಳು; ಕೂಡಲೇ ಉಪ್ಪಿನ ಕಂಬವಾಗಿ ಮಾರ್ಪಟ್ಟಳು.


ಪ್ರತಿಯೊಬ್ಬನೂ ಸಾಕಷ್ಟು ತಿಂದ ಮೇಲೆ ಗೋದಿಯನ್ನು ಸಮುದ್ರಕ್ಕೆ ಎಸೆದು ಹಡಗನ್ನು ಹಗುರಗೊಳಿಸಿದರು.


ಈಜಿಪ್ಟಿನ ಸಕಲ ಐಶ್ವರ್ಯಕ್ಕಿಂತಲೂ ‘ಕ್ರಿಸ್ತ'ನಿಗೋಸ್ಕರ ನಿಂದೆಯನ್ನು ಅನುಭವಿಸುವುದು ದೊಡ್ಡ ಭಾಗ್ಯವೆಂದು ಆತನು ಎಣಿಸಿದನು. ಏಕೆಂದರೆ, ದೇವರಿಂದ ದೊರಕಲಿದ್ದ ಪ್ರತಿಫಲದ ಮೇಲೆಯೇ ಆತನ ಮನಸ್ಸು ನಾಟಿತ್ತು.


ಗಳಿಸುವ ಸಮಯ, ಕಳೆದುಕೊಳ್ಳುವ ಸಮಯ ಕಾಪಾಡುವ ಸಮಯ, ಬಿಸಾಡುವ ಸಮಯ.


ಅವನು ತನ್ನ ಮೇಲುಹೊದಿಕೆಯನ್ನು ಅಲ್ಲೇ ಬಿಟ್ಟು ತಟ್ಟನೆ ಎದ್ದು, ಯೇಸುವಿನ ಬಳಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು