Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:8 - ಕನ್ನಡ ಸತ್ಯವೇದವು C.L. Bible (BSI)

8 ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಷ್ಟೇ ಅಲ್ಲದೇ, ನನ್ನ ಕರ್ತನಾದ ಕ್ರಿಸ್ತ ಯೇಸುವನ್ನರಿಯುವದೇ ಅತಿಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿವಿುತ್ತ ನಾನು ಎಲ್ಲವನ್ನೂ ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಷ್ಟೇ ಅಲ್ಲ, ನನ್ನ ಪ್ರಭುವಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ಎಲ್ಲಾ ಸಂಗತಿಗಳಿಗಿಂತಲೂ ಅತಿಶ್ರೇಷ್ಠವಾದದ್ದೆಂದು ನನಗೆ ಮನದಟ್ಟಾಗಿದೆ. ನಾನು ಯಾವುದನ್ನು ಮುಖ್ಯವಾದವುಗಳೆಂದು ಪರಿಗಣಿಸಿದ್ದೆನೋ ಅವುಗಳನ್ನೆಲ್ಲ ಕ್ರಿಸ್ತನ ನಿಮಿತ್ತ ಕಳೆದುಕೊಂಡೆನು. ಅವುಗಳೆಲ್ಲ ನಿಷ್ಪ್ರಯೋಜಕವಾದವುಗಳೆಂದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ, ನನ್ನ ಕರ್ತದೇವರು ಆಗಿರುವ ಕ್ರಿಸ್ತ ಯೇಸುವನ್ನು ಅರಿತುಕೊಳ್ಳುವುದೇ ಅತಿ ಶ್ರೇಷ್ಠವಾದುದ್ದೆಂದು, ನಾನು ಎಲ್ಲವನ್ನೂ ನಷ್ಟವೆಂದು ಎಣಿಸುತ್ತೇನೆ. ಕ್ರಿಸ್ತನನ್ನೇ ಲಾಭವನ್ನಾಗಿಸಿಕೊಳ್ಳಲು ನಾನು ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಯೆವ್ಡೆ ನಸ್ತಾನಾ ಮಾಜೊ ಧನಿ ಕ್ರಿಸ್ತ್ ಜೆಜುಚ್ಯಾ ವಿಶಯಾತ್ಲ್ಯಾ ಲೈ ಮೊಟ್ಯಾ ಶಾನೆಪಾನಾಚ್ಯಾ ವೈನಾ ಮಿಯಾ ಸಗ್ಳೆಬಿ ಲುಕ್ಷಾನ್ ಮನುನ್ ಚಿಂತುನ್ ಘೆತಾ. ತೆಚ್ಯಾ ಸಾಟ್ನಿ ಮಿಯಾ ಸಗ್ಳೆಬಿ ಕಳ್ದುನ್ ಘೆವ್ನ್ ತೆ ಕಚ್ರೊ ಮನುನ್ ಚಿಂತುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:8
53 ತಿಳಿವುಗಳ ಹೋಲಿಕೆ  

ಇಂದಿನ ಕಾಲದಲ್ಲಿ ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಮುಂದೆ ನಮಗೆ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಹೋಲಿಸುವುದಕ್ಕೂ ಬಾರದವುಗಳೆಂದು ನಾನು ಎಣಿಸುತ್ತೇನೆ.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ಇವನ್ನೆಲ್ಲಾ ಲಾಭವೆಂದು ಪರಿಗಣಿಸಿದ್ದ ನಾನು ಈಗ ಕ್ರಿಸ್ತಯೇಸುವಿನ ಸಲುವಾಗಿ ನಷ್ಟವೆಂದೇ ಎಣಿಸುತ್ತೇನೆ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ಯೇಸುಸ್ವಾಮಿಯನ್ನು ಅರಿಯಬೇಕು; ಅವರ ಪುನರುತ್ಥಾನದ ಪ್ರಭಾವವನ್ನು ಅನುಭವಿಸಬೇಕು; ಅವರ ಯಾತನೆಗಳಲ್ಲಿ ಪಾಲುಗೊಳ್ಳಬೇಕು; ಅವರ ಮರಣದಲ್ಲಿ ಅವರಂತೆಯೇ ಆಗಬೇಕು - ಇದೇ ನನ್ನ ಹೆಬ್ಬಯಕೆ.


ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ.


ನಾನು ನಿಮ್ಮೊಡನೆ ಇದ್ದಾಗ, ಯೇಸುಕ್ರಿಸ್ತರನ್ನು, ಅದೂ ಶಿಲುಬೆಗೇರಿಸಲಾದ ಯೇಸುವನ್ನು ಹೊರತು ಬೇರೆ ಯಾವುದನ್ನೂ ಅರಿಯಲು ಆಶಿಸಲಿಲ್ಲ.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.


ನಾನು ನನ್ನ ಪಿತನಲ್ಲಿ ಇರುವೆನು; ನೀವು ನನ್ನಲ್ಲಿ ಇರುವಿರಿ ಮತ್ತು ನಾನು ನಿಮ್ಮಲ್ಲಿ ಇರುವೆನು. ಇದನ್ನು ಆ ದಿನದಂದು ನೀವು ಅರಿತುಕೊಳ್ಳುವಿರಿ.


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿಂದ ಅವರನ್ನು ನೀವು ಅರಿತವರಾಗಿದ್ದೀರಿ ಹಾಗೂ ಕಂಡೂ ಇದ್ದೀರಿ,” ಎಂದು ನುಡಿದರು.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ.


ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ.


ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.


ನನ್ನನ್ನಾಗಲಿ, ಪಿತನನ್ನಾಗಲಿ ಅವರು ಅರಿತಿಲ್ಲದ ಕಾರಣ ನಿಮಗೆ ಹೀಗೆ ಮಾಡುವರು.


ದುಃಖಿಸುತ್ತಾ ಬೀಜಬಿತ್ತಲು ಹೋದವನು I ಹರ್ಷಿಸುತ್ತಾ ಕೊಯ್ದು ತರುವನು ತೆನೆಗಳನು II


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ವಿಶ್ವಾಸವಿಟ್ಟಿರುವ ನಿಮಗಂತೂ ಈ ಶಿಲೆ ಅತ್ಯಮೂಲ್ಯವಾದುದು. “ಮನೆಕಟ್ಟುವವರು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.”


ನಾನು ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರಬೇಕೆಂದು ದೇವರು ತಮ್ಮ ಮಗನನ್ನು ನನಗೆ ಶ್ರುತಪಡಿಸಿದರು. ಆಗ ಸಲಹೆಗಾಗಿ ನಾನು ಯಾರ ಬಳಿಗೂ ಹೋಗಲಿಲ್ಲ.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ಇದನ್ನು ನಮ್ಮ ಹಿತಚಿಂತನೆಯಿಂದ ಹೇಳಲಾಗಿದೆ; ಅದೇ ಉದ್ದೇಶದಿಂದ ಬರೆಯಲಾಗಿದೆ. ಹೌದು, ಉಳುವವನೂ ಒಕ್ಕುವವನೂ ಕಾಳುಬೆಳೆಯಲ್ಲಿ ಪಾಲುಪಡೆಯುವ ಉದ್ದೇಶದಿಂದಲೇ ದುಡಿಯುತ್ತಾರೆ.


ಅವರು ಆಕೆಯನ್ನು, “ಏಕಮ್ಮಾ ಅಳುತ್ತಿರುವೆ?” ಎಂದು ಕೇಳಿದರು. “ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು,” ಎಂದಳು.


ನಾನು ದೇವರ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ, ಎಂಬುದು ಸ್ಪಷ್ಟ.


ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಸೇರುವುದಿಲ್ಲ.


ನನ್ನ ಪ್ರಭುವಿನ ತಾಯಿ ನೀನು; ನನ್ನ ಬಳಿಗೆ ಬಂದುದು ಅದೆಂಥ ಭಾಗ್ಯ!


ಆದ್ದರಿಂದ ಇದನ್ನು ಗಮನವಿಟ್ಟು ಕೇಳಿ: ನಿಮ್ಮ ಸಂತಾನವನ್ನು ಖಂಡಿಸುವೆನು. ನಿಮ್ಮ ಮುಖಕ್ಕೆ ಸಗಣಿ ಬಳಿಯುವೆನು. ನಿಮ್ಮ ಯಜ್ಞಪಶುಗಳ ಸಗಣಿಯನ್ನೇ ಎರಚುವೆನು. ನೀವು ಆ ಸಗಣಿ ತಿಪ್ಪೆಯ ಪಾಲಾಗುವಿರಿ.


ತನ್ನ ಮಲದ ಹಾಗೆ ನಿತ್ಯಕ್ಕು ಅವನು ನಶಿಸಿಹೋಗುವನು ಅವನನು ಅರಿತವರೆಲ್ಲರೂ “ಅವನೆಲ್ಲಿಯೋ!’ ಎಂದು ಹೇಳುವರು.


ಆಕೆಯ ಶವ ಆ ಹೊಲಕ್ಕೆ ಗೊಬ್ಬರವಾಗುವುದು; ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು’ ಎಂಬುದಾಗಿ ತಿಷ್ಬೀಯನೂ ತಮ್ಮ ದಾಸನೂ ಆದ ಎಲೀಯನ ಮುಖಾಂತರ ಸರ್ವೇಶ್ವರ ಹೇಳಿಸಿದ ಮಾತು ಈಗ ನೆರವೇರಿತು,” ಎಂದನು.


ಆದುದರಿಂದ ಯಾರೊಬ್ಬಾಮನೇ, ಕೇಳು; ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು; ನಿನ್ನ ಕುಟುಂಬದ ಗಂಡಸರಲ್ಲಿ, ಸ್ವತಂತ್ರರಾಗಲಿ, ಪರತಂತ್ರರಾಗಲಿ, ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಸಂಹರಿಸಿಬಿಡುವೆನು. ಕಸವನ್ನು ಗುಡಿಸಿ ಎಸೆಯುವಂತೆ ನಾನು ನಿನ್ನ ಮನೆಯವರನ್ನು ಎಸೆದುಬಿಡುವೆನು; ಅವರು ನಿರ್ನಾಮವಾಗುವರು.


ನನಗೆ ನೀನಲ್ಲದೆ ಇನ್ನಾರಿಹರು ಪರದಲಿ I ನಿನ್ನ ಹೊರತು ನನಗೇನು ಬೇಕಿಲ್ಲ ಇಹದಲಿ II


ಅಂತೆಯೇ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಸೃಷ್ಟಿಸಮಸ್ತಗಳಲ್ಲಿ ಯಾವುದೇ ಆಗಲಿ, ಆ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇದು ನಿಶ್ಚಯ.


ಕ್ರಿಸ್ತಯೇಸುವಿನಲ್ಲಿ ಜೀವಿಸುವ ಫಿಲಿಪ್ಪಿಯ ದೇವಜನರಿಗೆ, ಧರ್ಮಾಧಿಕಾರಿಗಳಿಗೆ ಹಾಗೂ ಧರ್ಮಸೇವಕರಿಗೆ - ಕ್ರಿಸ್ತಯೇಸುವಿನ ದಾಸರಾದ ಪೌಲ ಮತ್ತು ತಿಮೊಥೇಯರು ಜೊತೆಗೂಡಿ ಬರೆಯುವ ಪತ್ರ.


ಈಗಾಗಲೇ ನಾನಿದೆಲ್ಲವನ್ನೂ ಸಾಧಿಸಿದ್ದೇನೆ, ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ನೀವು ಭಾವಿಸಬಾರದು. ಕ್ರಿಸ್ತಯೇಸು ನನ್ನನ್ನು ಯಾವುದಕ್ಕಾಗಿ ತಮ್ಮವನನ್ನಾಗಿ ಮಾಡಿಕೊಂಡರೋ, ಅದನ್ನು ನನ್ನದಾಗಿಸಿಕೊಳ್ಳಲು ನಾನು ಪ್ರಯತ್ನಿಸುತ್ತಿದ್ದೇನೆ.


ದೇವರ ಮತ್ತು ಪ್ರಭು ಯೇಸುಕ್ರಿಸ್ತರ ಬಗ್ಗೆ ನೀವು ಪಡೆಯುತ್ತಿರುವ ಜ್ಞಾನಾರ್ಜನೆಯು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅಧಿಕಾಧಿಕವಾಗಿ ತರಲಿ!


ಈ ಗುಣಗಳು ನಿಮ್ಮಲ್ಲಿ ಬೆಳೆದು ಸಮೃದ್ಧವಾಗಿದ್ದರೆ, ನಮ್ಮ ಪ್ರಭು ಯೇಸುಕ್ರಿಸ್ತರನ್ನು ಅರಿತು ಬಾಳುವುದರಲ್ಲಿ ಇವು ನಿಮ್ಮನ್ನು ಚೈತನ್ಯಪೂರ್ಣರನ್ನಾಗಿಯೂ ಫಲಪ್ರದರನ್ನಾಗಿಯೂ ಮಾಡುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು