Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:1 - ಕನ್ನಡ ಸತ್ಯವೇದವು C.L. Bible (BSI)

1 ಹೀಗಿರಲಾಗಿ ಒಲವಿನ ಸಹೋದರರೇ, ನನ್ನ ಅತಿ ಪ್ರಿಯರೇ, ಆಪ್ತರೇ, ನನ್ನ ಮುದವೂ ಮುಕುಟವೂ ಆದವರೇ, ಪ್ರಭುವಿನಲ್ಲಿ ದೃಢ ವಿಶ್ವಾಸಿಗಳಾಗಿ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹೀಗಿರಲಾಗಿ ಪ್ರಿಯರೂ ಇಷ್ಟರೂ ಆದ ನನ್ನ ಸಹೋದರರೇ, ನನಗೆ ಸಂತೋಷವೂ ಜಯಮಾಲೆಯೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ; ಪ್ರಿಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ನಿಮ್ಮನ್ನು ನೋಡಬಯಸುತ್ತೇನೆ. ನೀವು ನನಗೆ ಆನಂದವನ್ನು ಉಂಟುಮಾಡಿ, ನಿಮ್ಮ ವಿಷಯದಲ್ಲಿ ನಾನು ಹೆಮ್ಮಪಡುವಂತೆ ಮಾಡಿದ್ದೀರಿ. ನಾನು ನಿಮಗೆ ಹೇಳಿದಂತೆ ಪ್ರಭುವನ್ನು ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತಸೆ ಹೊವ್ನ್ ಲೈ ಪ್ರೆಮಾಚೆ, ಅನಿ ಬರೆ ಹೊವ್ನ್ ಹೊತ್ತ್ಯಾ ಮಾಜ್ಯಾ ಭಾವಾನು ಅನಿ ಭೆನಿಯಾನು, ಮಾಜಿ ಖುಶಿ, ಅನಿ ಮುಕುಟ್ ಹೊವ್ನ್ ಹೊತ್ತಾ ಪ್ರಿಯಾನು, ಧನಿಯಾಕ್ಡೆ ಘಟ್ಟ್ ಹೊವ್ನ್ ಇಬೆ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:1
35 ತಿಳಿವುಗಳ ಹೋಲಿಕೆ  

ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ಜಾಗರೂಕರಾಗಿರಿ, ವಿಶ್ವಾಸದಲ್ಲಿ ದೃಢರಾಗಿರಿ, ಧೈರ್ಯಶಾಲಿಗಳಾಗಿರಿ, ಸ್ಥೈರ್ಯದಿಂದ ಬಾಳಿರಿ.


ಹೀಗೆ ನೀವು ನಡೆದುಕೊಂಡರೆ ನನ್ನ ಸೇವೆ ವ್ಯರ್ಥವಾಗದೆ, ಶ್ರಮೆ ನಿಷ್ಫಲವಾಗದೆ, ಫಲಪ್ರದವಾಯಿತೆಂದು ಕ್ರಿಸ್ತರ ದಿನದಂದು ನಾನು ಹೆಮ್ಮೆಪಡಬಹುದು.


ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಕ್ರಿಸ್ತಯೇಸುವಿನಲ್ಲಿರುವ ಉತ್ಕಟ ಪ್ರೀತಿಯಿಂದಲೇ ನಾನು ನಿಮ್ಮೆಲ್ಲರಿಗಾಗಿ ಹಂಬಲಿಸುತ್ತಿದ್ದೇನೆ; ಇದಕ್ಕೆ ದೇವರೇ ಸಾಕ್ಷಿ.


ಕೊಟ್ಟ ಮಾತನ್ನು ದೇವರು ಮೀರುವುದಿಲ್ಲ. ಆದ್ದರಿಂದ ನಾವು ನಿವೇದಿಸುವ ನಂಬಿಕೆ ನಿರೀಕ್ಷೆಯಲ್ಲಿ ಚಂಚಲರಾಗದೆ ಸದೃಢರಾಗಿರೋಣ.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.


ಪ್ರಿಯ ಪುತ್ರನೇ, ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅನುಗ್ರಹದಲ್ಲಿ ನೀನು ದೃಢನಾಗಿರು.


ನಿಮ್ಮನ್ನೆಲ್ಲಾ ನೋಡಲು ಅವನು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮ್ಮ ಕಿವಿಗೆ ಮುಟ್ಟಿತೆಂದು ತಿಳಿದು ಬಹಳ ವ್ಯಸನಪಡುತ್ತಿದ್ದಾನೆ.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.


ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II


ಆದಕಾರಣ ಪ್ರಿಯರೇ, ಈ ವಿಷಯಗಳನ್ನು ಮುಂಚಿತವಾಗಿಯೇ ತಿಳಿದುಕೊಂಡಿರುವ ನೀವು ಎಚ್ಚರಿಕೆಯಿಂದಿರಿ. ದುರ್ಜನರ ದುರ್ಬೋಧನೆಗೆ ಮರುಳಾಗದಿರಿ. ನಿಮ್ಮ ಸ್ಥಿರವಿಶ್ವಾಸವನ್ನು ಬಿಟ್ಟು ಭ್ರಷ್ಟರಾಗದಿರಿ.


ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ಆದ್ದರಿಂದ ಸಹೋದರರೇ, ನಾವು ನಿಮಗೆ ಬಾಯಿಮಾತಿನಿಂದಾಗಲಿ, ಪತ್ರದ ಮೂಲವಾಗಲಿ ಬೋಧಿಸಿರುವ ಸತ್‍ಸಂಪ್ರದಾಯಗಳನ್ನು ಪ್ರಾಮಾಣಿಕವಾಗಿ ಪಾಲಿಸುತ್ತಾ ಸ್ಥಿರವಾಗಿ ನಿಲ್ಲಿರಿ


ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.


ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.


ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.


ಆ ಲಿಖಿತವನ್ನು ಹೆಗಲ ಮೇಲೆ ಹೊತ್ತು ನಡೆಯುತ್ತಿದ್ದೆ ಅದನ್ನು ಪೇಟವಾಗಿ ತಲೆಗೆ ಸುತ್ತಿಕೊಳ್ಳುತ್ತಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು