Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:12 - ಕನ್ನಡ ಸತ್ಯವೇದವು C.L. Bible (BSI)

12 ಬಡತನ ಇರಲಿ, ಸಿರಿತನವಿರಲಿ, ಕೊರತೆಯಿರಲಿ, ಸಮೃದ್ಧಿ ಇರಲಿ, ಹಸಿದಿರಲಿ, ಹೊಟ್ಟೆ ತುಂಬಿರಲಿ - ಯಾವ ಸ್ಥಿತಿಯಲ್ಲಿದ್ದರೂ, ಎಲ್ಲಾ ವೇಳೆಯಲ್ಲಿಯೂ ತೃಪ್ತನಾಗಿರುವ ರಹಸ್ಯವನ್ನು ತಿಳಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ, ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಹಸಿವೆಯಿಂದಿರುವಾಗಲೂ ಸಮೃದ್ಧಿಯುಳ್ಳವನಾಗಿರುವಾಗಲೂ ಹೇಗೆ ಜೀವಿಸಬೇಕೆಂಬುದು ನನಗೆ ತಿಳಿದಿದೆ. ಯಾವ ಸಮಯದಲ್ಲಾಗಲಿ ಯಾವ ಪರಿಸ್ಥಿತಿಯಲ್ಲಾಗಲಿ ಸಂತೋಷದಿಂದಿರುವ ಗುಟ್ಟು ನನಗೆ ತಿಳಿದಿದೆ. ಊಟಕ್ಕೆ ಬೇಕಾದಷ್ಟು ಇರುವಾಗಲೂ ಇಲ್ಲದಿರುವಾಗಲೂ ನನಗೆ ಅಗತ್ಯವಾದವುಗಳನ್ನು ಹೊಂದಿರುವಾಗಲೂ ಹೊಂದಿಲ್ಲದಿರುವಾಗಲೂ ಸಂತೋಷವಾಗಿರಲು ಕಲಿತುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕೊರತೆಯಲ್ಲಾಗಲಿ, ಸಮೃದ್ಧಿಯಲ್ಲಾಗಲಿ ಹೇಗೆ ಜೀವಿಸಬೇಕೆಂಬ ಅನುಭವವನ್ನು ತಿಳಿದುಕೊಂಡಿದ್ದೇನೆ. ಚೆನ್ನಾಗಿ ಊಟಮಾಡಿರಲಿ, ಹಸಿವೆಯಿಂದಿರಲಿ, ಸಮೃದ್ಧಿಯುಳ್ಳವನಾಗಿರಲಿ, ಕೊರತೆಯುಳ್ಳವನಾಗಿರಲಿ, ಯಾವುದೇ ಪರಿಸ್ಥಿತಿಯಲ್ಲಿದ್ದರೂ ಎಲ್ಲಾ ಪರಿಸ್ಥಿತಿಗಳಲ್ಲಿ ತೃಪ್ತನಾಗಿರುವ ರಹಸ್ಯವನ್ನು ಕಲಿತುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಗರಿಬ್ ಹೊವ್ನ್ ರಾತಲೆಬಿ ಮಾಕಾ ಗೊತ್ತ್ ಹಾಯ್, ಸಾವ್ಕಾರ್ ಹೊವ್ನ್ ರಾತಲೆಬಿ ಮಾಕಾ ಗೊತ್ತ್ ಹಾಯ್, ಮಿಯಾ ಸಗ್ಳೆ ಹೊತ್ತೊ ಹೊವ್ನ್ ನಾ ತರ್ ಗರಿಬ್ ಹೊವ್ನ್ ಭುಕೆನ್ ರಾತಲೆಬಿ ಅನಿ ಸಾವ್ಕಾರ್ ಹೊವ್ನ್ ರ್‍ಹಾಲ್ಯಾರ್‍ಬಿ ಕಾಯ್ ನತ್ತೊ ಹೊವ್ನ್ ರ್‍ಹಾಲ್ಯಾರ್‍ಬಿ ಮಿಯಾ ತೆ ಸಗ್ಳೆ ಶಿಕುನ್ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:12
15 ತಿಳಿವುಗಳ ಹೋಲಿಕೆ  

ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


ಶ್ರಮಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.


ನಾನು ನಿಮ್ಮೊಂದಿಗಿದ್ದಾಗ ನನಗೆ ಹಣದ ಕೊರತೆ ಇದ್ದರೂ ನಿಮ್ಮಲ್ಲಿ ಯಾರಿಗೂ ಹೊರೆಯಾಗಲಿಲ್ಲ. ಮಕೆದೋನಿಯದಿಂದ ಬಂದ ಸಹೋದರರು ನನ್ನ ಕೊರತೆಯನ್ನೆಲ್ಲಾ ನೀಗಿಸಿದರು. ನಿಮಗೆ ಯಾವುದರಲ್ಲೂ ಹೊರೆಯಾಗಬಾರದೆಂದು ಎಚ್ಚರಿಕೆ ವಹಿಸಿದ್ದೆ; ಇನ್ನು ಮುಂದಕ್ಕೂ ಎಚ್ಚರಿಕೆಯಿಂದ ಇರುತ್ತೇನೆ.


ಬರಿದಾದ ಭೀಕರ ಮರುಭೂಮಿಯಲಿ ಅವರನು ಕಂಡು ಕಣ್ಣಗುಡ್ಡೆಯಂತೆ ಕಾಪಾಡಿದ ಪ್ರೀತಿಯಿಂದವರನು ಅಪ್ಪಿಕೊಂಡು.


ಜನರು ಅನುಸರಿಸುವ ಮಾರ್ಗದಲ್ಲಿ ನಾನು ನಡೆಯಬಾರದೆಂದು ಸರ್ವೇಶ್ವರ ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು ಎಚ್ಚರಿಕೆ ಇತ್ತರು:


ನಿಮಗೆ ದೇವರ ಶುಭಸಂದೇಶವನ್ನು ಉಚಿತವಾಗಿಯೇ ಬೋಧಿಸಿದೆನು. ನಿಮ್ಮನ್ನು ಮೇಲಕ್ಕೇರಿಸಲು ನನ್ನನ್ನೇ ತಗ್ಗಸಿಕೊಂಡೆನು. ಹೀಗೆ ಮಾಡಿದ್ದು ತಪ್ಪಾಯಿತೇ?


“ಪೌಲನ ಪತ್ರಗಳು ಪ್ರಬಲವಾದುವು, ತೀಕ್ಷ್ಣವಾದುವು; ಆದರೆ ಆತನು ಸ್ವತಃ ನಮ್ಮಲ್ಲಿಗೆ ಬಂದಾಗ ಆತನು ದುರ್ಬಲನು ಹಾಗೂ ಆತನ ಮಾತು ಸಹ ಕೆಲಸಕ್ಕೆ ಬಾರದವು,” ಎಂದು ಕೆಲವರು ಹೇಳುತ್ತಿದ್ದಾರಂತೆ.


“ಪೌಲನು ನಮ್ಮ ಹತ್ತಿರವಿರುವಾಗ ಮೆದುವಾಗಿಯೂ ದೂರವಿರುವಾಗ ಕಠಿಣನಾಗಿಯೂ ವರ್ತಿಸುತ್ತಾನೆ,” ಎಂದು ನಿಮ್ಮಲ್ಲಿ ಕೆಲವರು ಮಾತನಾಡಿಕೊಳ್ಳುವುದು ನನಗೆ ತಿಳಿದುಬಂದಿದೆ. ವಿನಯಶೀಲರೂ ದೀನದಯಾಳುವೂ ಆದ ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ:


ತಿರುಗಿಸಲ್ಪಟ್ಟ ಮೇಲೆಯೆ ನಾನು ಪಶ್ಚಾತ್ತಾಪ ಪಟ್ಟೆ ತಿಳುವಳಿಕೆ ಹೊಂದಿದ ಮೇಲೆಯೆ ಕೆನ್ನೆಗೆ ಹಾಕಿಕೊಂಡೆ ನನ್ನ ಯೌವನ ನಡತೆ ನನಗೆ ಅವಮಾನದ ಹೊರೆ ಈ ಕಾರಣ ಲಜ್ಜೆಗೊಂಡೆ. ಹೌದು, ನಾಚಿಕೆಯಿಂದ ತಲೆತಗ್ಗಿಸಿದೆ’.”


ಅವರಿಗಿತ್ತಿರಿ ಉಪದೇಶಿಸಲು ಸತ್ಯಾತ್ಮವನು ಅವರ ಬಾಯಿಂದ ಹಿಂದೆಗೆಯಲಿಲ್ಲ ಮನ್ನವನು ಬಾಯಾರಿದ್ದಾಗ ಕುಡಿಯಲಿತ್ತಿರಿ ಅವರಿಗೆ ನೀರನು.


ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು