Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:14 - ಕನ್ನಡ ಸತ್ಯವೇದವು C.L. Bible (BSI)

14 ಆದರೂ ನನ್ನ ಸಂಕಷ್ಟಗಳಲ್ಲಿ ಸಹಾಯ ಮಾಡಿದುದು ನಿಮ್ಮ ಸೌಜನ್ಯವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರರಾಗಿದ್ದದ್ದು ಒಳ್ಳೇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೂ ನಾನು ಕೊರತೆಯಲ್ಲಿದ್ದಾಗ ನೀವು ನನಗೆ ಸಹಾಯ ಮಾಡಿದ್ದು ಒಳ್ಳೆಯದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗಿದ್ದರೂ, ನನ್ನ ತೊಂದರೆಗಳಲ್ಲಿ ನೀವು ಭಾಗವಹಿಸಿದ್ದು ಒಳ್ಳೆಯದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಅಶೆ ರ್‍ಹಾಲ್ಯಾರ್‍ಬಿ ತುಮಿ ಮಾಜ್ಯಾ ತರಾಸಾತ್ನಿ ವಾಟೊ ಘೆಟಲ್ಲೆ ಬರೆಚ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:14
14 ತಿಳಿವುಗಳ ಹೋಲಿಕೆ  

ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.


ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ.


ಸೆರೆಯಾಳುಗಳಿಗೆ ಸಂತಾಪ ತೋರಿಸಿದಿರಿ, ನಿಮ್ಮ ಸೊತ್ತನ್ನು ಸುಲಿಗೆಮಾಡಿದಾಗ ಸಂತೋಷದಿಂದ ಬಿಟ್ಟುಕೊಟ್ಟಿರಿ. ಏಕೆಂದರೆ, ಇದಕ್ಕೂ ಶ್ರೇಷ್ಠವಾದ ಹಾಗೂ ಶಾಶ್ವತವಾದ ಸೊತ್ತು ನಿಮಗಿದೆಯೆಂದು ಚೆನ್ನಾಗಿ ಅರಿತಿದ್ದಿರಿ.


ದೇವರ ವಾಕ್ಯದ ಉಪದೇಶ ಪಡೆಯುವವನು ಉಪದೇಶ ಮಾಡುವವನೊಂದಿಗೆ ತನಗೆ ಇರುವ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


‘ನೀನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸುಮಾಡಿದ್ದು ಒಳ್ಳೆಯದೇ ಸರಿ.


ಅವರು ಸದ್ಗುಣಶೀಲರಾಗಬೇಕು, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಶ್ರೀಮಂತರಾಗಿರಬೇಕು. ದಾನಶೀಲರೂ ಇತರರೊಂದಿಗೆ ಪಾಲು ಹಂಚಿಕೊಳ್ಳುವವರೂ ಪರೋಪಕಾರಿಗಳೂ ಆಗಿರಬೇಕು.


ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.


ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.


ಅವರ ಸ್ವಂತ ಇಷ್ಟದಿಂದಲೇ ಮುಂದೆ ಬಂದಿದ್ದಾರೆ. ಹಾಗೆ ಮಾಡುವುದು ಅವರ ಕರ್ತವ್ಯವೂ ಹೌದು. ಏಕೆಂದರೆ, ಯೆಹೂದ್ಯರ ಆಧ್ಯಾತ್ಮಿಕ ಸಂಪತ್ತಿನಲ್ಲಿ ಪಾಲುಗಾರರಾಗಿರುವ ಅನ್ಯಧರ್ಮೀಯರು ತಮ್ಮ ಐಹಿಕಸಂಪತ್ತಿನಲ್ಲಿ ಅವರಿಗೆ ಪಾಲು ನೀಡಲು ಕರ್ತವ್ಯಬದ್ಧರಾಗಿದ್ದಾರೆ.


‘ನೀನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ.


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ಕೆಲವೊಮ್ಮೆ ಬಹಿರಂಗವಾಗಿ ಹಿಂಸೆಬಾಧೆಗಳಿಗೂ ನಿಂದೆ ಅವಮಾನಗಳಿಗೂ ಗುರಿಯಾದಿರಿ; ಮತ್ತೆ ಕೆಲವೊಮ್ಮೆ ನಿಮ್ಮಂತೆ ಸಂಕಟಪಡುವವರ ಸಂಗಡ ಸಹಭಾಗಿಗಳಾದಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು