ಫಿಲಿಪ್ಪಿಯವರಿಗೆ 4:15 - ಕನ್ನಡ ಸತ್ಯವೇದವು C.L. Bible (BSI)15 ಫಿಲಿಪ್ಪಿಯ ಸಹೋದರರೇ, ನಾನು ಶುಭಸಂದೇಶವನ್ನು ಸಾರಲು ಹೊರಟ ಪ್ರಾರಂಭದ ದಿನಗಳಲ್ಲಿ ಮಕೆದೋನಿಯವನ್ನು ಬಿಟ್ಟುಹೋದಾಗ ನೀವಲ್ಲದೆ ಬೇರೆ ಯಾವ ಸಭೆಯೂ ನನ್ನ ಆಯ-ವ್ಯಯಗಳಲ್ಲಿ ನೆರವಾಗಿರಲಿಲ್ಲ. ಇದು ನಿಮಗೆ ತಿಳಿದ ವಿಷಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಫಿಲಿಪ್ಪಿಯವರೇ, ನಾನು ಪ್ರಾರಂಭದಲ್ಲಿ ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ, ಮಕೆದೋನ್ಯದಿಂದ ಹೊರಟುಹೋದಾಗ ಕೊಡುವ, ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಯೂ ನನಗೆ ಬೆಂಬಲಿಸಲ್ಲಿಲ್ಲವೆಂಬುದನ್ನು ನೀವೂ ಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇದಲ್ಲದೆ ಫಿಲಿಪ್ಪಿಯವರೇ, ನಾನು ಮೊದಲು ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ ಮಕೆದೋನ್ಯದಿಂದ ಹೊರಟು ಹೋದಾಗ ಕೊಡುವ ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಗೂ ನನಗೂ ಸಂಬಂಧವಿರಲಿಲ್ಲವೆಂದು ನೀವೂ ಬಲ್ಲಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಇದಲ್ಲದೆ ಫಿಲಿಪ್ಪಿ ಪಟ್ಟಣದವರೇ, ನಾನು ಮೊದಲು ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ ಮಕೆದೋನಿಯಕ್ಕೆ ಹೊರಟಾಗ, ನಿಮ್ಮ ಸಭೆಯೊಂದೇ ನನಗೆ ಸಹಾಯ ಮಾಡಿದ್ದು ನಿಮಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಫಿಲಿಪ್ಪಿಯವರೇ, ನಾನು ಪ್ರಾರಂಭ ದಿನಗಳಲ್ಲಿ ನಿಮ್ಮ ನಡುವೆ ಸುವಾರ್ತೆ ಸಾರಿ ಮಕೆದೋನ್ಯದಿಂದ ಹೊರಟುಹೋದಾಗ, ನಿಮ್ಮನ್ನು ಬಿಟ್ಟು ಬೇರಾವ ಸಭೆಯವರು ಕೊಡುವ ಮತ್ತು ತೆಗೆದುಕೊಳ್ಳುವ ವಿಷಯದಲ್ಲಿ ಯಾರೂ ನನ್ನೊಂದಿಗೆ ಪಾಲುಗಾರರಾಗಲಿಲ್ಲ ಎಂಬುದನ್ನು ನೀವು ತಿಳಿದುಕೊಂಡಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಅನಿ ಪಿಲಿಪ್ಪಿತ್ಲ್ಯಾ ಲೊಕಾನು, ಬರಿ ಖಬರ್ ಶುರು ಕರ್‍ತಾನಾ ಮಿಯಾ ಮೆಸೆದೊನಿಯಾಕ್ನಾ ಜಾತಾನಾ ದಿತಲ್ಯಾ, ಅನಿ ಘೆತಲ್ಯಾ ವಿಶಯಾತ್ ತುಮ್ಕಾ ಸೊಡುನ್ ದುಸ್ರ್ಯಾ ತಾಂಡ್ಯಾಚೆ ಮಾಜ್ಯಾ ವಾಂಗ್ಡಾ ಭಾಗಿದಾರ್ ಹೊವ್ನ್ ನಾತ್, ಮನ್ತಲೆ ತುಮ್ಕಾಬಿ ಗೊತ್ತುಚ್ ಹಾಯ್. ಅಧ್ಯಾಯವನ್ನು ನೋಡಿ |