Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:18 - ಕನ್ನಡ ಸತ್ಯವೇದವು C.L. Bible (BSI)

18 ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎಪಫ್ರೊದೀತನು ನಿಮ್ಮ ಕೊಡುಗೆಯನ್ನು ತಂದು ಕೊಟ್ಟಿದ್ದರಿಂದ ಬೇಕಾದದ್ದೆಲ್ಲ ನನ್ನಲ್ಲಿ ಹೇರಳವಾಗಿದೆ. ನಿಮ್ಮ ಕೊಡುಗೆಯು ದೇವರಿಗೆ ಅರ್ಪಿಸಲ್ಪಟ್ಟ ಪರಿಮಳಭರಿತವಾದ ಯಜ್ಞವಾಗಿದೆ. ಇದು ದೇವರಿಗೆ ಮೆಚ್ಚಿಕೆಯಾದದ್ದೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತುಮಿ ದಿಲ್ಲೆ ಸಗ್ಳ್ಯೆ ಮಾಕಾ ಎಪೆಪ್ರೊದಿಸಾನ್ ಹಾನುನ್ ದಿಲ್ಲ್ಯಾಸಾಟ್ನಿ ಮಾಕಾ ಪಾಜೆ ಹೊಲ್ಲೆ ಸಗ್ಳೆ ಮಾಜ್ಯಾಕ್ಡೆ ಲೈ ಹಾಯ್, ತುಮ್ಚೊ ದಾನ್ ದೆವಾಕ್ ಭೆಟ್ವಲ್ಲೊ ಲೈ ಬರ್ಯ್ಯಾ ವಾಸೆಚಿ ಬಲಿ ಹೊವ್ನ್ ಹಾಯ್, ಹೆ ದೆವಾಕ್ ಮನಾಕ್ ಯೆತಲೆಬಿ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:18
15 ತಿಳಿವುಗಳ ಹೋಲಿಕೆ  

ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.


ಬಡತನ ಇರಲಿ, ಸಿರಿತನವಿರಲಿ, ಕೊರತೆಯಿರಲಿ, ಸಮೃದ್ಧಿ ಇರಲಿ, ಹಸಿದಿರಲಿ, ಹೊಟ್ಟೆ ತುಂಬಿರಲಿ - ಯಾವ ಸ್ಥಿತಿಯಲ್ಲಿದ್ದರೂ, ಎಲ್ಲಾ ವೇಳೆಯಲ್ಲಿಯೂ ತೃಪ್ತನಾಗಿರುವ ರಹಸ್ಯವನ್ನು ತಿಳಿದಿದ್ದೇನೆ.


ಹೀಗೆ ನಿಮ್ಮ ಕೊಡುಗೆ ದೇವಜನರ ಕೊರತೆಗಳನ್ನು ನೀಗಿಸುವುದಲ್ಲದೆ ಅನೇಕರು ದೇವರಿಗೆ ಸ್ತೋತ್ರ ಸಲ್ಲಿಸುವಂತೆ ಮಾಡುವುದು.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಅದನ್ನೆಲ್ಲಾ ಬಲಿಪೀಠದ ಮೇಲೆ ಸರ್ವೇಶ್ವರನಾದ ನನಗೆ ದಹನಬಲಿಯಾಗಿ ಸಮರ್ಪಿಸು. ಇದು ನನಗೆ ಪ್ರಿಯವಾದ ಸುಗಂಧ.


ಸರ್ವೇಶ್ವರನಾದ ನನಗೆ ಸುವಾಸನೆಯ ಕಾಣಿಕೆಯಾಗಿ ದನಕರುಗಳಿಂದ ಬಲಿಯನ್ನು ಅರ್ಪಿಸುವಾಗ ಅದು ಹರಕೆಯ, ಕೃತಜ್ಞತೆಯ ಹಬ್ಬಾಚರಣೆಯ, ಶಾಂತಿಸಮಾಧಾನದ ಬಲಿಯಾಗಿರಲಿ ಅಥವಾ ದಹನಬಲಿಯಾಗಿರಲಿ.


ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.


ನಿಮಗೆ ಸೇವೆಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವುಪಡೆಯುತ್ತಿದ್ದೆ, ನಿಮಗೋಸ್ಕರ ಇತರ ಸಭೆಗಳಿಂದ ಹಣ ವಸೂಲಿಮಾಡುತ್ತಿದ್ದೆ.


ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು