Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:4 - ಕನ್ನಡ ಸತ್ಯವೇದವು C.L. Bible (BSI)

4 ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ತಿರಿಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಸಗ್ಳ್ಯಾ ಯೆಳಾರ್ಬಿ ಧನಿಯಾಕ್ಡೆ ಖುಶಿನ್ ರ್‍ಹಾವಾ, ಖುಶಿ ಹೊವಾ ಮನುನ್ ಮಿಯಾ ಅನಿ ಪರ್ತುನ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:4
18 ತಿಳಿವುಗಳ ಹೋಲಿಕೆ  

ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ಕೊನೆಯದಾಗಿ ಸಹೋದರರೇ, ಪ್ರಭುವಿನಲ್ಲಿ ಆನಂದಿಸಿರಿ. ನಾನು ನಿಮಗೆ ಮೊದಲೇ ತಿಳಿಸಿದಂತೆ ಇದನ್ನು ಮತ್ತೆ ಮತ್ತೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ; ಇದು ನಿಮ್ಮ ಹಿತಕ್ಕಾಗಿಯೇ.


ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು, ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.”


ಬದಲಿಗೆ, ಯೇಸುಕ್ರಿಸ್ತರ ಬಾಧೆಗಳಲ್ಲಿ ಪಾಲುಹೊಂದಿರುತ್ತೀರೆಂದು ಸಂತೋಷಪಡಿ; ಅವರ ಮಹಿಮೆಯು ಪ್ರತ್ಯಕ್ಷವಾಗುವಾಗ ಪೂರ್ಣ ಹರ್ಷಾನಂದವನ್ನು ಪಡೆಯುವಿರಿ.


ಪ್ರಾಣವಿರುವವರೆಗೆ ಸ್ತುತಿಸುವೆನು ಪ್ರಭುವನು I ಬಾಳೆಲ್ಲ ಹಾಡಿ ಭಜಿಪೆನು ನನ್ನ ದೇವರನು II


ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.


ನಾವು ನಿಮಗೆ ಬೋಧಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ನಾವೇ ಆಗಲಿ, ಸ್ವರ್ಗದಿಂದ ಇಳಿದ ದೇವದೂತನೇ ಆಗಲಿ, ಯಾರೇ ಆಗಲಿ ಬೋಧಿಸಿದರೆ ಅವನು ಶಾಪಗ್ರಸ್ತನಾಗಲಿ!


ಸಜ್ಜನರೇ, ಮಾಡಿರಿ ಪ್ರಭುವಿನ ಗುಣಗಾನ I ನೀತಿವಂತರೇ, ಆತನ ಸ್ತುತಿ ನಿಮಗೆ ಸುಗುಣ II


ಸಂತೋಷಿಸುವೆ ನಾನು ಸರ್ವೇಶ್ವರನಲಿ ಆನಂದಿಸುವೆ ನನ್ನ ಉದ್ಧಾರಕ ದೇವನಲಿ.


ದುಃಖಪಡುತ್ತಿದ್ದರೂ ಸದಾ ಸಂತೋಷದಿಂದ ಇದ್ದೇವೆ. ದರಿದ್ರರಾಗಿದ್ದರೂ ಅನೇಕರನ್ನು ಧನವಂತರನ್ನಾಗಿಸುತ್ತಿದ್ದೇವೆ; ನಾವು ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಂತೆ ಇದ್ದೇವೆ.


ಅದೇ ರೀತಿ ನೀವು ಸಹ ನನ್ನೊಡನೆ ಸಂತೋಷದಿಂದ ಸಂಭ್ರಮಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು