Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:9 - ಕನ್ನಡ ಸತ್ಯವೇದವು C.L. Bible (BSI)

9 ನೀವು ನನ್ನಿಂದ ಕಲಿತವು ಹಾಗೂ ಅರಿತವುಗಳನ್ನು, ಕೇಳಿದವು ಹಾಗೂ ಕಂಡವುಗಳನ್ನು ನಿಮ್ಮ ಜೀವಿತದಲ್ಲಿ ಕಾರ್ಯರೂಪಕ್ಕೆ ತನ್ನಿರಿ. ಆಗ ಶಾಂತಿದಾಯಕ ದೇವರು ನಿಮ್ಮ ಸಂಗಡ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿ ಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀವು ನನ್ನಿಂದ ಕಲಿತುಕೊಂಡದ್ದನ್ನು, ಹೊಂದಿಕೊಂಡದ್ದನ್ನು, ಕೇಳಿದ್ದನ್ನು ಮತ್ತು ಕಣ್ಣಾರೆ ಕಂಡದ್ದನ್ನು ಮಾಡಿರಿ. ಆಗ, ಶಾಂತಿಯನ್ನು ಕೊಡುವ ದೇವರು ನಿಮ್ಮೊಂದಿಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿದ್ದೀರೋ ಅದನ್ನೇ ಮಾಡುವವರಾಗಿರಿ. ಆಗ ಸಮಾಧಾನದ ದೇವರು ನಿಮ್ಮೊಂದಿಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮಿ ಮಾಜ್ಯಾಕ್ನಾ ಶಿಕಲ್ಲೆ , ಘೆಟಲ್ಲೆ ಆಯ್ಕಲ್ಲೆ, ಅನಿ ಡೊಳ್ಯಾನಿ ಬಗಟಲ್ಲೆ ಕರಾ ತನ್ನಾ ಶಾಂತ್ಪಾನ್ ದಿತಲೊ ದೆವ್ ತುಮ್ಚ್ಯಾ ವಾಂಗ್ಡಾ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:9
36 ತಿಳಿವುಗಳ ಹೋಲಿಕೆ  

ದೇವರ ವಾಕ್ಯವನ್ನು ಕಿವಿಯಿಂದ ಕೇಳಿದರೆ ಸಾಕೆಂದು ತಿಳಿದು ಮರುಳಾಗದಿರಿ. ಆ ವಾಕ್ಯವನ್ನು ಅನುಸರಿಸಿ ನಡೆಯುವವರಾಗಿರಿ.


ಸಹೋದರರೇ, ನೀವು ನನ್ನನ್ನು ಅನುಸರಿಸಿರಿ. ನಮ್ಮಂತೆ ಆದರ್ಶಜೀವನ ನಡೆಸುವವರನ್ನು ಅನುಸರಿಸಿ ಬಾಳಿರಿ.


ಸಹೋದರರೇ, ನೀವು ದೇವರಿಂದ ಕರೆಹೊಂದಿದವರು; ದೇವರಿಂದ ಆಯ್ಕೆಯಾದವರು. ಈ ವರದಲ್ಲಿ ದೃಢವಾಗಿರಲು ಮತ್ತಷ್ಟು ಪ್ರಯತ್ನಿಸಿರಿ. ಹೀಗೆ ಮಾಡಿದರೆ, ನೀವೆಂದಿಗೂ ವಿಶ್ವಾಸಭ್ರಷ್ಟರಾಗಲಾರಿರಿ.


ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು !


ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು.


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


“ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ?


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


“ನನ್ನನ್ನು ‘ಸ್ವಾಮೀ, ಸ್ವಾಮೀ,’ ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು.


ನಾವು ನಿಮಗಿತ್ತ ಆಜ್ಞೆಗಳನ್ನು ಪಾಲಿಸಿಕೊಂಡು ಬರುತ್ತಿದ್ದೀರಿ; ಇನ್ನು ಮುಂದೆಯೂ ಪಾಲಿಸುತ್ತೀರಿ ಎಂದು ನಿಮ್ಮ ವಿಷಯವಾಗಿ ಪ್ರಭುವಿನಲ್ಲಿ ನಮಗೆ ಭರವಸೆಯಿದೆ.


ನೀವು ನಮ್ಮನ್ನು ಹಾಗೂ ಪ್ರಭು ಯೇಸುವನ್ನು ಅನುಸರಿಸುವವರಾದಿರಿ. ಇದರಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ಪವಿತ್ರಾತ್ಮ ಪ್ರೇರಿತ ಆನಂದದಿಂದ ದೇವರ ವಾಕ್ಯವನ್ನು ಅಂಗೀಕರಿಸಿದಿರಿ.


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ಶಾಂತಿದಾತ ದೇವರು ನಿಮ್ಮೆಲ್ಲರೊಡನೆ ಇರಲಿ! ಆಮೆನ್.


ತಾಯಿ ಸೇವಕರಿಗೆ, “ಆತ ಹೇಳಿದಂತೆ ಮಾಡಿ,” ಎಂದು ತಿಳಿಸಿದರು.


ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿ ಮತ್ತು ಅಣ್ಣತಮ್ಮಂದಿರು,” ಎಂದರು.


ಸಹೋದರರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳನ್ನು ಅನುಸರಿಸಿದಿರಿ. ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಯೆಹೂದ್ಯರಿಂದ ಅನುಭವಿಸಿದಂಥ ಹಿಂಸೆಯನ್ನು, ನೀವೂ ಸ್ವಜನರಿಂದ ಅನುಭವಿಸಿದಿರಿ.


ಅದಕ್ಕೆ ನನ್ನ ಉತ್ತರ ಇದು: ನೀವು ಉಂಡರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿ.


ಮೋಶೆ ಇಸ್ರಯೇಲರನ್ನು ಕರೆದು ಹೀಗೆ ಸಂಬೋಧಿಸಿದನು: “ಇಸ್ರಯೇಲರೇ, ನಾನು ಈಗ ನಿಮಗೆ ತಿಳಿಸಲಿರುವ ಆಜ್ಞಾವಿಧಿಗಳನ್ನು ಕಿವಿಗೊಟ್ಟು ಕೇಳಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಿರಿ.


ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು,” ಎಂದು ಆ ವಾಣಿ ಹೇಳಿತು.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ದೇವರು ಗಲಿಬಿಲಿಯನ್ನು ಬಯಸುವವರಲ್ಲ; ಅವರು ಶಾಂತಿ ಮತ್ತು ಸುವ್ಯವಸ್ಥೆಯ ದೇವರು.


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ನಾವು ದೇವರ ಆಜ್ಞೆಗಳಿಗೆ ವಿಧೇಯರಾಗಿ ಅವರಿಗೆ ಮೆಚ್ಚುಗೆಯಾದವುಗಳನ್ನೇ ಮಾಡುವುದರಿಂದ ನಾವು ಕೋರುವುದೆಲ್ಲವನ್ನೂ ಅವರಿಂದ ಪಡೆಯುತ್ತೇವೆ.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”


ಆದ್ದರಿಂದ ನನ್ನನ್ನು ಅನುಸರಿಸಿ ಬಾಳಬೇಕೆಂದು ನಿಮ್ಮನ್ನು ಒತ್ತಾಯಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು