Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:10 - ಕನ್ನಡ ಸತ್ಯವೇದವು C.L. Bible (BSI)

10 ಇವನು ಯೇಸುವಿನಲ್ಲಿ ನನ್ನ ಸ್ವಂತ ಮಗನಂತಿದ್ದಾನೆ. ಸೆರೆಮನೆಯಲ್ಲೇ ನಾನು ಅವನನ್ನು ಆಧ್ಯಾತ್ಮಿಕವಾಗಿ ಪಡೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಸೆರೆಯಲ್ಲಿ ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಸೆರೆಯಲ್ಲಿ ಪಡೆದಿರುವ ನನ್ನ ಮಗನಾದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಮಗನಾದ ಒನೇಸಿಮನಿಗಾಗಿ ನಿನ್ನನ್ನು ಕೇಳಿಕೊಳ್ಳುತ್ತೇನೆ. ನಾನು ಸೆರೆಮನೆಯಲ್ಲಿರುವಾಗ ಅವನು ನನ್ನ ಮಗನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಕೇಳಿಕೊಳ್ಳುತ್ತೇನೆ. ಏಕೆಂದರೆ ನಾನು ಸೆರೆಯಲ್ಲಿದ್ದಾಗ ಅವನು ನನಗೆ ಆತ್ಮಿಕ ಮಗನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮಿಯಾ ಬಂಧಿಖಾನ್ಯಾತ್ ಹೊತ್ತ್ಯಾ ತನ್ನಾ, ಜೊಡುನ್ ಘೆಟಲ್ಲ್ಯಾ ಮಾಜ್ಯಾ ಲೆಕಾ ಸಾರ್ಕ್ಯಾ ಓನೆಜಿಮಸಾಚ್ಯಾಸಾಟ್ನಿ ಮಿಯಾ ವಿನಂತಿ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:10
14 ತಿಳಿವುಗಳ ಹೋಲಿಕೆ  

ಆತನ ಜೊತೆಯಲ್ಲಿ ನಂಬಿಕಸ್ಥನಾದ ಪ್ರಿಯ ಸಹೋದರ ಒನೇಸಿಮನನ್ನು ಕಳುಹಿಸುತ್ತಿದ್ದೇನೆ. ಇವನು ನಿಮ್ಮ ಊರಿನ ಸಭೆಗೆ ಸೇರಿದವನು. ಇಲ್ಲಿ ನಡೆಯುವುದನ್ನೆಲ್ಲಾ ಇವರು ನಿಮಗೆ ತಿಳಿಸುವರು.


ನಿಮಗೆ ಕ್ರಿಸ್ತಯೇಸುವಿನಲ್ಲಿ ಸಾವಿರಾರು ಮಂದಿ ಶಿಕ್ಷಕರು ಇರಬಹುದು. ಆದರೆ ನಿಮಗೆ ನಾನೊಬ್ಬನೇ ತಂದೆ. ಶುಭಸಂದೇಶದ ಮೂಲಕ ನಾನೇ ನಿಮ್ಮನ್ನು ಕ್ರಿಸ್ತಯೇಸುವಿನಲ್ಲಿ ಪಡೆದ ತಂದೆ.


ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ!


ನನ್ನ ಪ್ರಿಯ ಮಕ್ಕಳೇ, ತಾಯಿ ತನ್ನ ಮಗುವಿಗಾಗಿ ಪ್ರಸವವೇದನೆಪಡುವ ಪ್ರಕಾರ ಕ್ರಿಸ್ತಯೇಸು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಿಮಗಾಗಿ ನಾನು ಮತ್ತೆ ಅಂಥ ವೇದನೆಯನ್ನು ಪಡುತ್ತಿದ್ದೇನೆ.


ಅರಸನು ಯೋವಾಬ್, ಅಬೀಷೈ ಹಾಗು ಇತ್ತೈ ಎಂಬವರಿಗೆ, “ನನ್ನ ಸಲುವಾಗಿ ಯುವಕ ಅಬ್ಷಾಲೋಮನಿಗೆ ಹಾನಿಮಾಡಬೇಡಿ,” ಎಂದು ಆಜ್ಞಾಪಿಸಿದನು. ದಾವೀದನು ಸೇನಾಪತಿಗಳಿಗೆ ಕೊಟ್ಟ ಈ ಅಪ್ಪಣೆ ಸೈನ್ಯದವರಿಗೆಲ್ಲಾ ಕೇಳಿಸಿತು.


ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕರೇ, ನನ್ನ ಮಗನನ್ನು ತಮ್ಮ ಬಳಿಗೆಂದು ಕರೆತಂದೆ.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಬರೆಯಲಿಲ್ಲ. ನಮ್ಮ ನೆಚ್ಚಿನ ಮಕ್ಕಳಾದ ನಿಮ್ಮನ್ನು ಎಚ್ಚರಿಸಲೆಂದು ಬರೆದೆನು.


ಹಿಂದೆ ಅವನು ನಿನಗೆ ಪ್ರಯೋಜಕನಾಗಿರಲಿಲ್ಲ. ಈಗಲಾದರೋ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.


ಶುಭಸಂದೇಶಕ್ಕೋಸ್ಕರ ನಾನು ಸೆರೆಮನೆಯಲ್ಲಿರುವಾಗ ನಿನ್ನ ಬದಲಾಗಿ ನನಗೆ ಸಹಾಯಮಾಡಲು ಇವನನ್ನು ಇಲ್ಲಿಯೇ ಉಳಿಸಿಕೊಳ್ಳಲು ಇಷ್ಟವಿತ್ತು.


ನನ್ನ ಪ್ರಿಯಮಕ್ಕಳು ಸತ್ಯಸಂಧರಾಗಿ ನಡೆಯುತ್ತಿದ್ದಾರೆಂದು ಕೇಳುವುದಕ್ಕಿಂತ ಮಿಗಿಲಾದ ಆನಂದ ನನಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು