Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:16 - ಕನ್ನಡ ಸತ್ಯವೇದವು C.L. Bible (BSI)

16 ಈಗ ಅವನು ನಿನ್ನ ಬಳಿಗೆ ಬರುತ್ತಿರುವುದು ಕೇವಲ ಗುಲಾಮನಂತೆ ಅಲ್ಲ. ಅದಕ್ಕಿಂತಲೂ ಬಹಳ ಮೇಲಾದವನಂತೆ, ಕ್ರಿಸ್ತಯೇಸುವಿನಲ್ಲಿ ಪ್ರಿಯ ಸಹೋದರನಂತೆ, ಅವನೆಂದರೆ ನನಗೆಷ್ಟೋ ಪ್ರೀತಿ. ಹಾಗಾದರೆ ನಿನ್ನ ಸೇವಕನೂ ನಮ್ಮ ಪ್ರಭುವಿನಲ್ಲಿ ನಿನ್ನ ಪ್ರಿಯ ಸಹೋದರನೂ ಆಗಿರುವ ಅವನ ಬಗ್ಗೆ ನಿನಗೆ ಮತ್ತಷ್ಟು ಪ್ರೀತಿ ಇರಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇನ್ನು ಮೇಲೆ ಅವನು ದಾಸನಂತಾಗಿರದೆ ದಾಸನಿಗಿಂತ ಮಿಗಿಲಾಗಿ ಉತ್ತಮವಾದ ಪ್ರಿಯ ಸಹೋದರನಂತಾಗಬೇಕು. ಅವನು ನನಗೆ ಬಹಳ ಪ್ರಿಯನಾಗಿರುವಲ್ಲಿ ನಿನಗೆ ಲೋಕದ ಪ್ರಕಾರವಾಗಿಯೂ, ಕರ್ತನ ಸಂಬಂಧದಲ್ಲಿಯೂ ಇನ್ನೂ ಹೆಚ್ಚು ಪ್ರಿಯನಾಗಿರುವನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇನ್ನು ಮೇಲೆ ಅವನು ದಾಸನಾಗದೆ ದಾಸನಿಗಿಂತ ಉತ್ತಮನಾಗಿ ಪ್ರಿಯ ಸಹೋದರನಂತಾಗಬೇಕು. ಅವನು ನನಗೆ ಬಹಳ ಪ್ರಿಯನಾಗಿರುವಲ್ಲಿ ನಿನಗೆ ಲೋಕಸಂಬಂಧದಲ್ಲಿಯೂ ಕರ್ತನ ಸಂಬಂಧದಲ್ಲಿಯೂ ಇನ್ನೂ ಎಷ್ಟೋ ಪ್ರಿಯನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇನ್ನು ಮೇಲೆ ಅವನು ನಿನಗೆ ಕೇವಲ ಗುಲಾಮನಾಗಿರದೆ ಗುಲಾಮನಿಗಿಂತಲೂ ಹೆಚ್ಚಿನ ಪ್ರಿಯ ಸಹೋದರನಾಗಿದ್ದಾನೆ. ಅವನನ್ನು ಬಹಳವಾಗಿ ಪ್ರೀತಿಸುತ್ತೇನೆ. ಆದರೆ ನೀನು ಅವನನ್ನು ಮತ್ತಷ್ಟು ಹೆಚ್ಚಾಗಿ ಪ್ರೀತಿಸುವೆ. ನೀನು ಅವನನ್ನು ಮನುಷ್ಯನೆಂದು ಮತ್ತು ಪ್ರಭುವಿನಲ್ಲಿ ಒಬ್ಬ ಸಹೋದರನೆಂದು ಪ್ರೀತಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇನ್ನು ಮೇಲೆ ಅವನು ದಾಸನಾಗದೆ, ದಾಸನಿಗಿಂತ ಮೇಲಾಗಿ ಪ್ರಿಯ ಸಹೋದರನಂತಾಗಬೇಕು. ಅವನು ವಿಶೇಷವಾಗಿ ನನಗೆ ಬಹು ಪ್ರಿಯನಾಗಿದ್ದಾನೆ. ಆದರೂ ಓನೇಸಿಮನು ನಿನಗೆ ಮಾನವ ರೀತಿಯಲ್ಲಿಯೂ ಕರ್ತ ಯೇಸುವಿನಲ್ಲಿಯೂ ಒಬ್ಬ ಸಹೋದರನಾಗಿ ಇನ್ನು ಎಷ್ಟೋ ಪ್ರಿಯನಾಗಿರಬೇಕಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅನಿ ಫಿಡೆ ತೊ ಗುಲಾಮ್ ನ್ಹಯ್, ಗುಲಾಮಾಚ್ಯಾನ್ ಮೊಟೊ. ತಸೆ ಮಟ್ಲ್ಯಾರ್ ತುಕಾ ಎಕ್ ಪ್ರೆಮಾಚೊ ಭಾವ್, ಮಾಕಾ ತರ್ ತೊ ಲೈ ಅಪುರ್ಬಾಯೆಚೊಚ್, ಖರೆ ಮಾಜ್ಯಾನ್ಕಿ ತುಕಾ ಲೈ ಅಪುರ್ಬಾಯೆಚೊ. ತುಜೆ ಸಾರ್ಕೊಚ್ ಎಕ್ ಮಾನುಸ್ ಹೊವ್ನ್ ಕ್ರಿಸ್ತಾತ್ ಎಕ್ ಭಾವ್ ತೊ ತುಕಾ ಹೊಲಾ, ಮನ್ತಾನಾ ತುಕಾ ಕವ್ಡೊ ಅಪುರ್ಬಾಯೆಚೊ ತೊ ಅಸಿಲ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:16
10 ತಿಳಿವುಗಳ ಹೋಲಿಕೆ  

ದಾಸ್ಯದಲ್ಲಿರುವವರೇ, ಎಲ್ಲಾ ವಿಷಯಗಳಲ್ಲೂ ನಿಮ್ಮ ನಿಮ್ಮ ಧಣಿಗಳಿಗೆ ವಿಧೇಯರಾಗಿರಿ. ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಮಾಡಬೇಡಿ. ಪ್ರಭುವಿಗೆ ಭಯಪಟ್ಟು ಪ್ರಾಮಾಣಿಕತೆಯಿಂದ ದುಡಿಯಿರಿ.


ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು.


ಒಂದು ವೇಳೆ ಯಜಮಾನರು ಕ್ರೈಸ್ತವಿಶ್ವಾಸಿಗಳಾಗಿದ್ದರೆ ತಮ್ಮ ಯಜಮಾನರು ಸಹೋದರ ವರ್ಗದವರು ಎಂದು ಉದಾಸೀನ ಮಾಡಬಾರದು. ಬದಲಿಗೆ ಹೆಚ್ಚಿನ ಉತ್ಸಾಹದಿಂದ ಸೇವೆಸಲ್ಲಿಸಬೇಕು. ಏಕೆಂದರೆ, ಅವರ ಸೇವೆಯ ಪ್ರಯೋಜನವನ್ನು ಪಡೆಯುತ್ತಿರುವ ಯಜಮಾನರು, ಕ್ರೈಸ್ತವಿಶ್ವಾಸಿಗಳೂ ಪ್ರೀತಿಗೆ ಪಾತ್ರರಾದವರು. ಈ ವಿಷಯಗಳ ಬಗ್ಗೆ ಆಜ್ಞಾಪೂರ್ವಕವಾಗಿ ಬೋಧಿಸು.


ಪ್ರಭುವಿನಿಂದ ಕರೆಹೊಂದಿದವನು ದಾಸನಾಗಿದ್ದರೂ ಪ್ರಭುವಿನಲ್ಲಿ ಅವನು ಸ್ವತಂತ್ರನೆ. ಅದೇ ಮೇರೆಗೆ ಸ್ವತಂತ್ರನಾದವನು ಕ್ರಿಸ್ತಯೇಸುವಿನಿಂದ ಕರೆಹೊಂದಿದ್ದರೆ ಅವನು ಕ್ರಿಸ್ತಯೇಸುವಿನ ದಾಸನೇ ಆಗುತ್ತಾನೆ.


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ಅಂತೆಯೇ ಅನನೀಯನು ಹೊರಟು ಆ ಮನೆಗೆ ಹೋದನು. ಸೌಲನ ಮೇಲೆ ಹಸ್ತನಿಕ್ಷೇಪಮಾಡಿ, “ಸಹೋದರ ಸೌಲನೇ, ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ನೀನು ಬರುವಾಗ ದಾರಿಯಲ್ಲಿ ಕಾಣಿಸಿಕೊಂಡ ಯೇಸುಸ್ವಾಮಿಯೇ, ನೀನು ದೃಷ್ಟಿಯನ್ನು ಮರಳಿ ಪಡೆಯುವಂತೆಯೂ ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದನು.


ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು