Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:21 - ಕನ್ನಡ ಸತ್ಯವೇದವು C.L. Bible (BSI)

21 ನನ್ನ ಕೋರಿಕೆಯನ್ನು ನೆರವೇರಿಸುವೆ ಎಂಬ ಭರವಸೆಯಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ. ನಾನು ಕೇಳಿದ್ದಕ್ಕಿಂತಲೂ ಹೆಚ್ಚಾಗಿಯೇ ಮಾಡುವೆಯೆಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿನ್ನ ವಿಧೇಯತೆಯಲ್ಲಿ ಭರವಸೆವುಳ್ಳವನಾಗಿ ಈ ಪತ್ರಿಕೆಯನ್ನು ನಿನಗೆ ಬರೆದಿದ್ದೇನೆ. ನಾನು ಹೇಳುವುದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುತ್ತಿ ಎಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನ ಮಾತನ್ನು ಕೇಳುವಿ ಎಂಬ ಭರವಸವುಳ್ಳವನಾಗಿ ಈ ಪತ್ರಿಕೆಯನ್ನು ನಿನಗೆ ಬರೆದಿದ್ದೇನೆ. ನಾನು ಹೇಳಿದ್ದಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾನು ಕೇಳಿಕೊಂಡದ್ದನ್ನು ನೀನು ಮಾಡುವೆ ಎಂದು ನನಗೆ ಗೊತ್ತಿರುವುದರಿಂದಲೇ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ನಾನು ಕೇಳಿದ್ದಕ್ಕಿಂತಲೂ ಹೆಚ್ಚಿಗೆ ನೀನು ಮಾಡುವೆ ಎಂದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿನ್ನ ವಿಧೇಯತೆಯಲ್ಲಿ ಭರವಸೆಯುಳ್ಳವನಾಗಿ ನಾನು ನಿನಗೆ ಬರೆದಿದ್ದೇನೆ. ನಾನು ಹೇಳಿದ್ದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುವೆಯೆಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಇಚಾರಲ್ಲೆ ತಿಯಾ ತಿರಸ್ಕಾರ್ ಕರಿನೆ ಮನ್ತಲ್ಯಾ ಬರೊಸ್ಯಾನ್ ಎವ್ಡೆಚ್ ನ್ಹಯ್, ಮಿಯಾ ಸಾಂಗಲ್ಲ್ಯಾನ್ಕಿ ಜಾಸ್ತಿಚೆ ತಿಯಾ ಕರ್ತೆ ಮನ್ತಲ್ಯಾ ಖಾತ್ರಿನ್ ಮಿಯಾ ತುಕಾ ಲಿವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:21
6 ತಿಳಿವುಗಳ ಹೋಲಿಕೆ  

ನಾವು ನಿಮಗಿತ್ತ ಆಜ್ಞೆಗಳನ್ನು ಪಾಲಿಸಿಕೊಂಡು ಬರುತ್ತಿದ್ದೀರಿ; ಇನ್ನು ಮುಂದೆಯೂ ಪಾಲಿಸುತ್ತೀರಿ ಎಂದು ನಿಮ್ಮ ವಿಷಯವಾಗಿ ಪ್ರಭುವಿನಲ್ಲಿ ನಮಗೆ ಭರವಸೆಯಿದೆ.


ಇದಕ್ಕಾಗಿಯೇ ನಾನು ಆ ಪತ್ರವನ್ನು ಬರೆದದ್ದು; ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮ ಸಂತೋಷವೆಂದು ನೀವು ಭಾವಿಸುತ್ತೀರೆಂದು ಬಲ್ಲೆ.


ನಿಮ್ಮ ಮೇಲೆ ನನಗೆ ಪೂರ್ಣಭರವಸೆ ಇದೆ. ಇದೇ ನನ್ನ ಸಂತೋಷ.


ಭಿನ್ನಾಭಿಪ್ರಾಯಗಳಿಗೆ ನೀವು ಮಣಿಯುವುದಿಲ್ಲವೆಂದು ನಿಮ್ಮನ್ನು ಕುರಿತು ಪ್ರಭುವಿನಲ್ಲಿ ನನಗೆ ದೃಢವಾದ ನಂಬಿಕೆ ಇದೆ. ನಿಮ್ಮಲ್ಲಿ ಗೊಂದಲ ಎಬ್ಬಿಸುವವನು ಯಾರೇ ಆಗಿರಲಿ, ಅವನು ದೈವದಂಡನೆಗೆ ಗುರಿಯಾಗುತ್ತಾನೆ.


ಇವರಿಬ್ಬರ ಸಂಗಡ ಮತ್ತೊಬ್ಬ ಸಹೋದರನನ್ನೂ ಕಳುಹಿಸುತ್ತಿದ್ದೇವೆ. ಈತನು ಆಸಕ್ತಿ ಉಳ್ಳವನೆಂದು ಅನುಭವದಿಂದ ಕಂಡುಕೊಂಡಿದ್ದೇವೆ. ನಿಮ್ಮಲ್ಲಿ ಪೂರ್ಣ ಭರವಸೆಯಿಟ್ಟು ನಿಮಗೆ ನೆರವಾಗಲು ಆತನು ಹೆಚ್ಚು ಉತ್ಸುಕನಾಗಿದ್ದಾನೆ.


ನೀನು ಕುರುಡರಿಗೆ ದಾರಿ ತೋರಿಸುವವನೂ ಕತ್ತಲೆಯಲ್ಲಿರುವವರಿಗೆ ಬೆಳಕೂ ಬುದ್ಧಿಹೀನರಿಗೆ ಬೋಧಕನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು