Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:22 - ಕನ್ನಡ ಸತ್ಯವೇದವು C.L. Bible (BSI)

22 ಇದಲ್ಲದೆ, ನಿಮ್ಮೆಲ್ಲರ ಪ್ರಾರ್ಥನೆಗಳ ಫಲವಾಗಿ ದೇವರು ನನ್ನನ್ನು ಇಲ್ಲಿಂದ ಬಿಡುಗಡೆ ಮಾಡಿ ನಿಮ್ಮ ಬಳಿಗೆ ಕಳುಹಿಸುವರು ಎಂಬ ನಂಬಿಕೆ ನನಗಿದೆ. ಆದ್ದರಿಂದ ನನಗಾಗಿ ಒಂದು ಅತಿಥಿ ಕೊಠಡಿಯನ್ನು ಸಿದ್ಧಪಡಿಸಿಟ್ಟುಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಲ್ಲದೆ ದೇವರು ನಿಮ್ಮ ಪ್ರಾರ್ಥನೆಗಳನ್ನು ಕೇಳಿ ನಾನು ನಿಮ್ಮ ಬಳಿಗೆ ಬರುವುದಕ್ಕೆ ಕೃಪೆ ಮಾಡುವನೆಂಬ ನಿರೀಕ್ಷೆ ನನಗುಂಟು. ಆದಕಾರಣ ನಾನು ಉಳಿದುಕೊಳ್ಳಲು ಒಂದು ಕೊಠಡಿಯನ್ನು ಸಿದ್ಧಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇದಲ್ಲದೆ ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿ ನನ್ನನ್ನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹಿಸುವನೆಂದು ನನಗೆ ನಿರೀಕ್ಷೆ ಉಂಟು. ಆದಕಾರಣ ನನಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಇಳಿದುಕೊಳ್ಳಲು ಒಂದು ಕೊಠಡಿಯನ್ನು ದಯವಿಟ್ಟು ಸಿದ್ಧಗೊಳಿಸು. ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿ ನನ್ನನ್ನು ನಿಮ್ಮ ಬಳಿಗೆ ಬರಲು ಅವಕಾಶ ನೀಡುವನೆಂಬ ಭರವಸೆ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದಲ್ಲದೆ: ನಿಮ್ಮ ಪ್ರಾರ್ಥನೆಯ ದೆಸೆಯಿಂದ ನಾನು ಪುನಃ ನಿಮ್ಮ ಬಳಿಗೆ ಬರುತ್ತೇನೆಂದು ನನಗೆ ನಿರೀಕ್ಷೆ ಇರುವುದು. ಆದಕಾರಣ ನನಗಾಗಿ ಒಂದು ಅತಿಥಿ ಕೊಠಡಿಯನ್ನು ಸಿದ್ಧಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತಸೆಚ್ ಅನಿಎಕ್ ಉಪ್ಕಾರ್ಬಿ ಮಿಯಾ ತುಜೆಕ್ಡೆ ಮಾಗ್ತಾ ಮಾಕಾ ರ್‍ಹಾವ್ನ್ ಎಕ್ ಜಾಗೊ ತಯಾರ್ ಕರುನ್ ಥವ್; ತುಜ್ಯಾ ಮಾಗ್ನಿ ವೈನಾ ದೆವ್ ಮಾಕಾ ಸುಟ್ಕಾ ದಿವ್ನ್ ತುಮ್ಚೆಕ್ಡೆ ಘೆವ್ನ್ ಯೆತಾ ಮನುನ್ ಮಿಯಾ ಬರೊಸೊ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:22
13 ತಿಳಿವುಗಳ ಹೋಲಿಕೆ  

ಅಲ್ಲದೆ, ದೇವರ ಚಿತ್ತವಿದ್ದರೆ, ನಾನೇ ನಿಮ್ಮಲ್ಲಿಗೆ ಬೇಗನೆ ಬರುವೆನೆಂಬ ದೃಢನಂಬಿಕೆಯೂ ನನಗಿದೆ.


ನಾನು ನಿಮಗೆ ತಿಳಿಸಬೇಕಾದ ವಿಷಯಗಳು ಬಹಳಷ್ಟಿವೆ. ಆದರೆ ಅವುಗಳನ್ನು ಕಾಗದಪತ್ರಗಳ ಮೂಲಕ ತಿಳಿಸಲು ನನಗೆ ಇಷ್ಟವಿಲ್ಲ. ನಾನೇ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ಮಾತನಾಡುವ ನಿರೀಕ್ಷೆ ಇದೆ. ಹೀಗೆ ಮುಖಾಮುಖಿಯಾಗಿ ಮಾತನಾಡುವುದರಿಂದ ಪೂರ್ಣಸಂತೋಷವೂ ಆಗುತ್ತದೆ.


ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


ಹೌದು, ನನಗದು ತುಂಬಾ ಸಂತೋಷದ ವಿಷಯ. ನಿಮ್ಮ ಪ್ರಾರ್ಥನಾ ಫಲದಿಂದಲೂ ಯೇಸುಕ್ರಿಸ್ತರು ಕೊಡುವ ಆತ್ಮದ ನೆರವಿನಿಂದಲೂ ನನಗೆ ಬಿಡುಗಡೆ ಖಚಿತವೆಂದು ಬಲ್ಲೆ.


ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.


ಸದ್ಯದಲ್ಲೇ ನಿನ್ನನ್ನು ಕಾಣುವ ನಿರೀಕ್ಷೆ ನನಗಿದೆ. ಆಗ ನಾವು ಮುಖಾಮುಖಿಯಾಗಿ ಮಾತಾಡಬಹುದು.


ನಿಮ್ಮ ಸಹೋದರ ತಿಮೊಥೆಯನಿಗೆ ಬಿಡುಗಡೆಯಾಗಿದೆ ಎಂದು ನಿಮಗೆ ತಿಳಿಸಬಯಸುತ್ತೇನೆ. ಆತನು ಬೇಗ ಬಂದರೆ, ನಾನೂ ಆತನೊಂದಿಗೆ ಬಂದು ನಿಮ್ಮನ್ನು ಕಾಣುತ್ತೇನೆ.


ನಿಮ್ಮ ಬಳಿಗೆ ನಾನು ಆದಷ್ಟು ಬೇಗನೆ ಬಂದು ಸೇರುವಂತೆ ಪ್ರಾರ್ಥಿಸಬೇಕೆಂದು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ.


ನಾನು ಸ್ಪೇಯಿನ್ ದೇಶಕ್ಕೆ ಹೋಗುವ ಮಾರ್ಗದಲ್ಲಿ ಮೊದಲು ನಿಮ್ಮನ್ನು ಕಾಣಬೇಕೆಂದಿದ್ದೇನೆ. ಸ್ವಲ್ಪಕಾಲ ನಿಮ್ಮೊಡನೆ ಸಂತೋಷವಾಗಿ ತಂಗಿದ್ದು ಬಳಿಕ ನಿಮ್ಮ ಸಹಾಯದಿಂದ ಆ ದೇಶಕ್ಕೆ ಪ್ರಯಾಣವನ್ನು ಮುಂದುವರಿಸುತ್ತೇನೆ.


‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು