Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:8 - ಕನ್ನಡ ಸತ್ಯವೇದವು C.L. Bible (BSI)

8 ಆದಕಾರಣ, ನೀನು ಮಾಡಬೇಕಾದುದನ್ನು ಮಾಡು ಎಂದು ಆಜ್ಞಾಪಿಸಲು ಕ್ರಿಸ್ತಯೇಸುವಿನಲ್ಲಿ ನನಗೆ ಧೈರ್ಯ ಮತ್ತು ಅಧಿಕಾರಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ವೃದ್ಧನೂ, ಈಗ ಕ್ರಿಸ್ತಯೇಸುವಿನ ನಿಮಿತ್ತ ಸೆರೆಯಾಳಾಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿಮಿತ್ತ ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದಕಾರಣ ನಿನಗೆ ಯುಕ್ತವಾದದ್ದನ್ನು ಆಜ್ಞಾಪಿಸುವದಕ್ಕೆ ನನಗೆ ಕ್ರಿಸ್ತನಲ್ಲಿ ಪೂರಾ ಅಧಿಕಾರವಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ಮಾಡಬೇಕಾದ ಕಾರ್ಯವೊಂದಿದೆ. ಅದನ್ನು ಮಾಡಬೇಕೆಂದು ಆಜ್ಞಾಪಿಸಲು ನನಗೆ ಕ್ರಿಸ್ತನಲ್ಲಿ ಅಧಿಕಾರವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದಕಾರಣ, ನಾನು ಈಗ ನಿನಗೆ ಏನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಬಹು ಧೈರ್ಯವಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹ್ಯಾ ಕಾರನಾಕ್ ಲಾಗುನ್ ಕ್ರಿಸ್ತಾಚ್ಯಾ ವೈನಾ ಕರುಚೆ ಮನುನ್ ಹೊತ್ತೆ ಕಾಮ್ ಧೈರ್ಯಾನ್ ಸಾಂಗುಕ್ ಮಾಕಾ ಹಕ್ಕ್ ಹೊತ್ತೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:8
7 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ಪ್ರೇಷಿತರಾದ ನಾವು ಜನರಿಂದ ಮರ್ಯಾದೆ, ಗೌರವಗಳನ್ನು ಗಳಿಸಬಹುದಾಗಿದ್ದರೂ ನಿಮ್ಮಿಂದಾಗಲಿ, ಇತರರಿಂದಾಗಲಿ ಅವನ್ನು ನಾವು ಬಯಸಲಿಲ್ಲ.


ಪ್ರಭು ನಮಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿ. ಈ ಅಧಿಕಾರವನ್ನು ಕುರಿತು ಒಂದು ವೇಳೆ, ನಾವು ಕೊಂಚ ಹೆಚ್ಚಾಗಿ ಹೊಗಳಿಕೊಂಡಿದ್ದರೂ ಅದಕ್ಕಾಗಿ ಸಂಕೋಚಪಡುವುದಿಲ್ಲ.


ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ.


ನಿಮಗೆ ತಿಳಿದಿರುವಂತೆ ನಾವು ನಿಮ್ಮಲ್ಲಿಗೆ ಬರುವ ಮೊದಲೇ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆ, ಅವಮಾನಗಳನ್ನು ಸಹಿಸಿದೆವು. ತೀವ್ರವಾದ ವಿರೋಧವಿದ್ದರೂ ದೇವರ ನೆರವಿನಿಂದ ನಿರ್ಭೀತರಾಗಿ ಶುಭಸಂದೇಶವನ್ನು ನಿಮಗೆ ಸಾರಿದೆವು.


ಹೊಲಸು ಮಾತುಗಳು, ಬರಡು ನುಡಿಗಳು, ಕುಚೋದ್ಯ ಪದಗಳು ಯಾವುವೂ ನಿಮಗೆ ತರವಲ್ಲ. ಪ್ರತಿಯಾಗಿ, ದೇವರಿಗೆ ನೀವು ಕೃತಜ್ಞತಾಸ್ತುತಿಮಾಡಿರಿ.


ಇದನ್ನೆಲ್ಲಾ ಮಾಡುವ ಸಾಹಸ ನಮಗಿಲ್ಲವೆಂದು ಹೇಳಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ. ಯಾರಿಗಾದರೂ ಯಾರ ವಿಷಯದಲ್ಲಾದರೂ ಹೊಗಳಿಕೊಳ್ಳುವ ಧೈರ್ಯವಿದ್ದರೆ ಅದಕ್ಕಿಂತ ಹೆಚ್ಚಿನ ಧೈರ್ಯ ನನಗಿದೆ. ಇದನ್ನು ನಾನು ಹುಚ್ಚನಂತೆಯೇ ಹೇಳುತ್ತಿದ್ದೇನೆ ಎಂದು ಭಾವಿಸಿಕೊಳ್ಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು