Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:9 - ಕನ್ನಡ ಸತ್ಯವೇದವು C.L. Bible (BSI)

9 ಆದರೂ ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿನ್ನಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ಯುಕ್ತವಾದದ್ದನ್ನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ನನಗೆ ಕ್ರಿಸ್ತನಲ್ಲಿ ಪೂರ್ಣ ಅಧಿಕಾರವಿದ್ದರೂ ಹಾಗೆ ಆಜ್ಞಾಪಿಸದೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹಾಗೆ ಆಜ್ಞಾಪಿಸದೆ ಮುದುಕನೂ ಈಗ ಕ್ರಿಸ್ತ ಯೇಸುವಿನ ನಿವಿುತ್ತ ಸೆರೆಯವನೂ ಆಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿವಿುತ್ತ ನಿನ್ನನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನಾನು ನಿನಗೆ ಆಜ್ಞಾಪಿಸದೆ ಪ್ರೀತಿಯಿಂದ ನಿನ್ನನ್ನು ಕೇಳಿಕೊಳ್ಳುತ್ತಿದ್ದೇನೆ. ಪೌಲನಾದ ನಾನು ಈಗ ವೃದ್ಧನಾಗಿದ್ದೇನೆ ಮತ್ತು ಕ್ರಿಸ್ತ ಯೇಸುವಿನ ನಿಮಿತ್ತ ಸೆರೆಯಲ್ಲಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹಾಗೆ ಆಜ್ಞಾಪಿಸದೆ, ಈಗ ಕ್ರಿಸ್ತ ಯೇಸುವಿನ ಸೆರೆಯಾಳೂ ಮುದುಕನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಿಯಾ ಪಾವ್ಲು, ಕ್ರಿಸ್ತ್ ಜೆಜುಚೊ ಧುತ್, ಕ್ರಿಸ್ತಾಸಾಟ್ನಿ ಬಂಧಿಖಾನ್ಯಾತ್ ಹಾಂವ್, ಜಾಲ್ಯಾರ್ಬಿ ಮಿಯಾ ತುಜೊ ಪ್ರೆಮ್ ಕರ್ತಾ ತಸೆ ಮನುನ್ ತುಜೆಕ್ಡೆ ವಿನಂತಿ ಕರುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:9
17 ತಿಳಿವುಗಳ ಹೋಲಿಕೆ  

ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ.


ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆ ನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಅನ್ಯಜನರಾದ ನಿಮ್ಮ ನಿಮಿತ್ತ ಯೇಸುಕ್ರಿಸ್ತರ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ನಿಮ್ಮ ಬಳಿಗೆ ನಾನು ಆದಷ್ಟು ಬೇಗನೆ ಬಂದು ಸೇರುವಂತೆ ಪ್ರಾರ್ಥಿಸಬೇಕೆಂದು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ನಾನೇ ನಿಮಗೆ ಆಧಾರ ಮುಪ್ಪಿನ ತನಕ ಹೊತ್ತು ಸಲಹುವೆನು ನಿಮ್ಮನು ನರೆಬಂದಾಗ. ಉಂಟುಮಾಡಿದವನು ನಾನೇ, ಹೊರುವವನು ನಾನೇ ಹೌದು, ನಿಮ್ಮನು ಹೊತ್ತು ಸಲಹುವವನು ನಾನೇ.


ನರೆಗೂದಲು ಸುಂದರ ಕಿರೀಟ, ಸನ್ನಡತೆಗೆ ಸಿಗುವ ಪ್ರತಿಫಲ.


ದೇವಾ, ನರೆಯ ಮುದುಕನಾಗಿರುವಾಗ ನನ್ನ ಕೈ ಬಿಡಬೇಡಯ್ಯಾ I ನಿನ್ನ ಪರಾಕ್ರಮವನು ಮುಂದಿನ ಪೀಳಿಗೆಗೆ ಸಾರುವ ತನಕ ಬೇಡವಯ್ಯಾ I ನಿನ್ನ ಪ್ರತಾಪವನು ತಲತಲಾಂತರದವರೆಗೆ ಪ್ರಕಟಿಸುವೆನಯ್ಯಾ II


ವೃದ್ಧಾಪ್ಯದಲಿ ನನ್ನ ತಳ್ಳಿಬಿಡಬೇಡಯ್ಯಾ I ಶಕ್ತಿ ಕುಂದುತ್ತಿರುವಾಗ ಕೈಬಿಡಬೇಡಯ್ಯಾ II


ಕ್ರಿಸ್ತಯೇಸುವಿನಲ್ಲಿ ಇಟ್ಟಿರುವ ವಿಶ್ವಾಸದ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರಿ.


ಶುಭಸಂದೇಶದ ನಿಮಿತ್ತ ನಾನು ಸೆರೆಯಾಳಾಗಿದ್ದರೂ ಪ್ರಭುವಿನ ರಾಯಭಾರಿಯಾಗಿದ್ದೇನೆ. ಎಂತಲೇ, ಈ ಶುಭಸಂದೇಶವನ್ನು ಧೈರ್ಯದಿಂದ ಸೂಕ್ತ ರೀತಿಯಲ್ಲಿ ಸಾರಲಾಗುವಂತೆ ನನಗಾಗಿ ಪ್ರಾರ್ಥಿಸಿರಿ.


ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಮದ್ಯಾಸಕ್ತಿ ಇಲ್ಲದೆಯೂ ಗೌರವಾಸಕ್ತರಾಗಿಯೂ ಆತ್ಮಸಂಯಮಿಗಳಾಗಿಯೂ ಇರಬೇಕೆಂದು ವೃದ್ಧರಿಗೆ ಬೋಧಿಸು. ವಿಶ್ವಾಸ, ಪ್ರೀತಿ ಮತ್ತು ತಾಳ್ಮೆ ಅವರ ಮುಖ್ಯ ಗುಣಗಳಾಗಿರಬೇಕು.


ಅವರ ತಂದೆಗಳೂ ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರುತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿ; ಯುದ್ಧ ನಿಮಿತ್ತ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು