Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:12 - ಕನ್ನಡ ಸತ್ಯವೇದವು C.L. Bible (BSI)

12 ಬಾಬಿಲೋನಿಗೆ ಸೆರೆಹೋದ ದಾಸ್ಯದಿನಗಳು ಮುಗಿದ ಮೇಲೆ ಯೆಕೊನ್ಯನಿಗೆ ಸಲಥಿಯೇಲ್, ಸಲಥಿಯೇಲನಿಗೆ ಜೆರುಬಾಬೆಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಬಾಬಿಲೋನಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನ ಮಗನು ಜೆರುಬ್ಬಾಬೆಲನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಬಾಬೆಲಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನು ಜೆರುಬ್ಬಾಬೆಲನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೂದ್ಯರನ್ನು ಬಾಬಿಲೋನಿಗೆ ಕೊಂಡೊಯ್ದ ನಂತರದ ಕುಟುಂಬದ ಚರಿತ್ರೆ: ಯೆಕೊನ್ಯನು ಶೆಯಲ್ತಿಯೇಲನ ತಂದೆ. ಶೆಯಲ್ತಿಯೇಲನು ಜೆರುಬ್ಬಾಬೆಲನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಬಾಬಿಲೋನಿಗೆ ಸೆರೆಹೋದ ಮೇಲೆ: ಯೆಕೊನ್ಯನು ಶೆಯಲ್ತೀಯೇಲನನ್ನು ಪಡೆದನು, ಶೆಯಲ್ತೀಯೇಲನು ಜೆರುಬ್ಬಾಬೆಲನ ತಂದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಇಸ್ರಾಯೆಲಾಚ್ಯಾ ಲೊಕಾಕ್ನಿ ಬಾಬಿಲೊನಾಕ್ ಧರುನ್ ಘೆವ್ನ್ ಗೆಲ್ಲ್ಯಾಚ್ಯಾ ಮಾನಾಚಿ ವಂಶಾವಳಿ ಹಿ: ಯೆಕೊನಿಯಾ ಶಅಲ್ತಿಯೆಲಾಚೊ ಬಾಬಾ, ಅನಿ ಶೆಅಲ್ತಿಯೆಲ್ ಯೆರುಬಾಬೆಲಾಚೊ ಬಾಬಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:12
20 ತಿಳಿವುಗಳ ಹೋಲಿಕೆ  

ಬಾಬಿಲೋನಿಯರಿಂದ ಸೆರೆಯಾಳಾಗಿ ಒಯ್ಯಲ್ಪಟ್ಟ ಅರಸ ಯೆಕೊನ್ಯನ ವಂಶಜರು ಇವರು: ಯೆಕೊನ್ಯನಿಗೆ ಏಳು ಜನ ಗಂಡುಮಕ್ಕಳು: ಶೆಯಲ್ತೀಯೇಲ್,


ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು.


ಯೊಸೇಖ ಯೋದನಿಗೆ, ಯೋದನು ಯೊವಾನ್ನನಿಗೆ, ಯೊವಾನ್ನನು ರೇಸನಿಗೆ, ರೇಸನು ಜೆರುಬಾಬೇಲನಿಗೆ, ಜೆರುಬಾಬೆಲ್ ಸಲಥಿಯೇಲನಿಗೆ, ಸಲಥಿಯೇಲನು ಸೇರಿಯನಿಗೆ ಹುಟ್ಟಿದರು.


ಕೂಡಲೆ ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ, ಮತ್ತು ಅಳಿದುಳಿದ ಜನರೆಲ್ಲರು ಸ್ವಾಮಿಯ ಪ್ರೇರಣೆಯನ್ನು ಪಡೆದರು.


ಸೇನಾಧಿಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಶೆಯಲ್ತೀಯೇಲನ ಮಗನೂ ನನ್ನ ದಾಸನೂ ಆದ ಜೆರುಬ್ಬಾಬೆಲನೇ, ಆ ದಿನಗಳಲ್ಲಿ ನಾನು ನಿನ್ನನ್ನು ಆರಿಸಿ ತೆಗೆದುಕೊಳ್ಳುವೆನು. ನನ್ನ ಮುದ್ರೆ ಉಂಗುರವನ್ನು ತೊಟ್ಟ ರಾಜನನ್ನಾಗಿ ನಿನ್ನನ್ನು ನೇಮಿಸುವೆನು,” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.


ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ಅಧಿಪತಿಯೂ ಆದ ಜೆರುಬ್ಬಾಬೆಲನಿಗೆ ಮತ್ತು ಮಹಾಯಾಜಕ ಯೆಹೋಶುವನಿಗೆ ಮತ್ತು ಅಳಿದುಳಿದ ಜನರೆಲ್ಲರಿಗೆ ಹೀಗೆ ತಿಳಿಸು -


ಆಗ ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ ಮತ್ತು ಅಳಿದುಳಿದ ಜನರೆಲ್ಲರು ದೇವರಾದ ಸರ್ವೇಶ್ವರಸ್ವಾಮಿಯ ನುಡಿಗೆ ಕಿವಿಗೊಟ್ಟರು. ಆ ಸ್ವಾಮಿಯ ಅಪ್ಪಣೆಯ ಪ್ರಕಾರ ಪ್ರವಾದಿ ಹಗ್ಗಾಯನು ಹೇಳಿದ ಮಾತನ್ನು ಕೇಳಿದರು. ಆ ಸ್ವಾಮಿಯಲ್ಲಿ ಭಯಭಕ್ತಿಯುಳ್ಳವರಾದರು.


ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.


ಕೊನ್ಯನು ಬಿಸಾಡಲ್ಪಟ್ಟ ಒಡಕು ಕುಡಿಕೆಯೆ? ಯಾರಿಗೂ ಬೇಡವಾದ ಮಣ್ಣಿನ ಮಡಿಕೆಯೆ? ಅವನೂ ಅವನ ಮಡದಿಮಕ್ಕಳೇಕೆ ಬೀದಿಪಾಲಾಗಿದ್ದಾರೆ?


ಸರ್ವೇಶ್ವರನ ಮಾತಿದು - “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಕೊನ್ಯನೇ, ನೀನು ನನ್ನ ಬಲಗೈ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆ.


ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್ ಹಾಗು ಯೇಷೂವ ಇವರೊಡನೆ ಜುದೇಯ ನಾಡಿಗೆ ಹಿಂದಿರುಗಿ ಬಂದ ಯಾಜಕರು ಮತ್ತು ಲೇವಿಯರ ಪಟ್ಟಿ : ಯಾಜಕರು -


ಅದನ್ನು ಕೇಳಿದ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್ ಯೋಚಾದಾಕನ ಮಗ ಯೇಷೂವ ಇವರು ಜೆರುಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನೆ ಇದ್ದು ಅವರಿಗೆ ಸಹಾಯಮಾಡುತ್ತ ಇದ್ದರು.


ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ, ಜುದೇಯದ ಅರಸ ಯೆಹೋಯಾಖೀನನು ಸೆರೆಗೆ ಸಿಕ್ಕಿದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಸೆರೆಯಿಂದ ಬಿಡಿಸಿ ಉದ್ಧಾರ ಮಾಡಿದನು.


ಜೆರುಸಲೇಮಿನಲ್ಲಿದ್ದ ಎಲ್ಲಾ ಪದಾಧಿಕಾರಿಗಳನ್ನೂ ಯೋಧರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾರೆ ಹತ್ತು ಸಾವಿರ ಜನರನ್ನು ಸೆರೆಗೊಯ್ದನು. ನಾಡಿನ ಜನರಲ್ಲಿ ಕೇವಲ ಬಡವರನ್ನು ಹೊರತಾಗಿ ಬೇರೆ ಯಾರನ್ನೂ ಬಿಡಲಿಲ್ಲ.


ಹೀಗಿದೆ ಸರ್ವೇಶ್ವರನ ನುಡಿ: “ಇವನು ಮಕ್ಕಳನ್ನು ಕಳೆದುಕೊಂಡ ವ್ಯಕ್ತಿ ತನ್ನ ಜನ್ಮವನ್ನು ಸಾರ್ಥಕ ಮಾಡಿಕೊಳ್ಳದ ವ್ಯಕ್ತಿ ಇವನ ಸಂತಾನದಲ್ಲಿ ಇನ್ನು ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು, ಜುದೇಯವನ್ನು ಆಳಿ ಬಾಳನು.”


ಆಮೋನನಿಗೆ ಯೋಷೀಯ ಹುಟ್ಟಿದರು. ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು. ಈ ಸಮಯದಲ್ಲೇ ಇಸ್ರಯೇಲರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು.


ಜೆರುಬಾಬೆಲನಿಗೆ ಅಬೀಹೂದ್, ಅಬೀಹೂದನಿಗೆ ಎಲ್ಯಕೀಮ್. ಎಲ್ಯಕೀಮನಿಗೆ ಅಜೋರ್ ಹುಟ್ಟಿದರು.


ಹೀಗೆ ಒಟ್ಟು, ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು, ದಾವೀದನಿಂದ ಬಾಬಿಲೋನಿನ ದಾಸ್ಯದಿನಗಳವರೆಗೆ ಹದಿನಾಲ್ಕು, ಬಾಬಿಲೋನಿನ ದಾಸ್ಯದಿನಗಳಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು