Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:18 - ಕನ್ನಡ ಸತ್ಯವೇದವು C.L. Bible (BSI)

18 ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ - ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯಮಾಡಿರಲಾಗಿ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಬಸುರಾಗಿದ್ದದ್ದು ತಿಳಿದುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೇಸು ಕ್ರಿಸ್ತನ ತಾಯಿ ಮರಿಯಳು. ಯೇಸುವಿನ ಜನನ ಈ ರೀತಿ ಸಂಭವಿಸಿತು: ಮದುವೆಮಾಡಿಕೊಳ್ಳಲು ಯೋಸೇಫನಿಗೂ ಮರಿಯಳಿಗೂ ನಿಶ್ಚಿತಾರ್ಥವಾಗಿತ್ತು. ಆದರೆ ಮದುವೆಗೆ ಮೊದಲೇ ತಾನು ಗರ್ಭಿಣಿಯಾಗಿರುವುದು ಮರಿಯಳಿಗೆ ತಿಳಿದುಬಂತು. ಮರಿಯಳು ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಕ್ರಿಸ್ತ ಯೇಸುವಿನ ಜನನದ ವಿವರ: ಯೇಸುವಿನ ತಾಯಿ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದ್ದರು, ಆದರೆ ಅವರಿಬ್ಬರು ಕೂಡಿಬಾಳುವುದಕ್ಕಿಂತ ಮುಂಚೆಯೇ, ಮರಿಯಳು ಪವಿತ್ರಾತ್ಮರಿಂದ ಗರ್ಭಧರಿಸಿರುವುದು ತಿಳಿದುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜೆಜು ಕ್ರಿಸ್ತಾಚೊ ಜಲ್ಮ್ ಅಸೊ ಹೊಲೊ: ತೆಚಿ ಬಾಯ್ ಮರಿಚೆ ಜುಜೆಚ್ಯಾ ವಾಂಗ್ಡಾ ಇಡೆ ಹೊಲ್ಲೆ, ಖರೆ ತೆಂಚೆ ಲಗಿನ್ ಹೊವ್ಚ್ಯಾ ಅದ್ದಿಚ್ ಮರಿ ಪವಿತ್ರ್ ಆತ್ಮ್ಯಾನ್ ಗರ್‍ವಾರ್ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:18
13 ತಿಳಿವುಗಳ ಹೋಲಿಕೆ  

ಅಶುದ್ಧತೆಯಿಂದ ಬಂದೀತೆ ಶುದ್ಧತೆ? ಇಲ್ಲ, ಎಂದಿಗೂ ಅದು ಅಸಾಧ್ಯವೆ.


ಆದ್ದರಿಂದಲೇ ಭೂಲೋಕಕ್ಕೆ ಬರಲಿದ್ದ ಕ್ರಿಸ್ತಯೇಸು ದೇವರಿಗೆ ಇಂತೆಂದರು: “ಬಲಿಯರ್ಪಣೆಗಳೂ ಕಾಣಿಕೆಗಳೂ ನಿಮಗೆ ಬೇಡವಾದವು ಎಂದೇ ಅಣಿಮಾಡಿ ಕೊಟ್ಟಿರಿ ನನಗೆ ದೇಹವೊಂದನು.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ನರನು ಎಷ್ಟರವನು? ಅವನು ಪರಿಶುದ್ಧನಿರಲು ಸಾಧ್ಯವೆ? ಸ್ತ್ರೀಯರಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೆ?


ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ:


“ಒಬ್ಬನಿಗೆ ನಿಶ್ಚಿತಳಾದ ಹೆಣ್ಣನ್ನು ಯಾವನಾದರು, ಊರೊಳಗೆ ಮರುಳುಗೊಳಿಸಿ, ಸಂಗಮಿಸಿದರೆ,


ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ಯೇಸುಸ್ವಾಮಿ ತಮ್ಮನ್ನು ಸುತ್ತುವರಿದಿದ್ದ ಜನರಿಗೆ ಇನ್ನೂ ಬೋಧನೆ ಮಾಡುತ್ತಿದ್ದರು. ಆಗ ಅವರ ತಾಯಿ ಮತ್ತು ಸಹೋದರರು ಬಂದು ಅವರೊಡನೆ ಮಾತನಾಡಬಯಸಿ ಹೊರಗೆ ನಿಂತಿದ್ದರು.


ಆತನ ಸಂಗಡ ಆತನಿಗೆ ನಿಶ್ಚಿತಾರ್ಥಳಾಗಿದ್ದ ಹಾಗೂ ಪೂರ್ಣ ಗರ್ಭವತಿಯಾಗಿದ್ದ ಮರಿಯಳು ಸಹ ಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು