Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:2 - ಕನ್ನಡ ಸತ್ಯವೇದವು C.L. Bible (BSI)

2 ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಬ್ರಹಾಮನ ಮಗನು ಇಸಾಕನು. ಇಸಾಕನ ಮಗನು ಯಾಕೋಬನು. ಯಾಕೋಬನ ಮಗನು ಯೆಹೂದನು, ಅವನ ಅಣ್ಣತಮ್ಮಂದಿರು ಯೆಹೂದನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ಯಾಕೋಬನನ್ನು ಪಡೆದನು. ಯಾಕೋಬನು ಯೆಹೂದನನ್ನೂ ಅವನ ಅಣ್ಣತಮ್ಮಂದಿರನ್ನೂ ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಬ್ರಹಾಮನು ಇಸಾಕನ ತಂದೆ. ಇಸಾಕನು ಯಾಕೋಬನ ತಂದೆ. ಯಾಕೋಬನು ಯೆಹೂದ ಮತ್ತು ಅವನ ಸಹೋದರರ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಬ್ರಹಾಮನು ಇಸಾಕನ ತಂದೆ, ಇಸಾಕನು ಯಾಕೋಬನ ತಂದೆ, ಯಾಕೋಬನು ಯೂದ ಮತ್ತು ಅವನ ಅಣ್ಣ ತಮ್ಮಂದಿರ ತಂದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅಬ್ರಾಹಾಮ್ ಇಸಾಕಾಚೊ ಬಾಬಾ, ಇಸಾಕ್ ಜಾಕೊಬಾಚೊ ಬಾಬಾ, ಅನಿ ಜಾಕೊಬ್ ಜುದಾ ಅನಿ ತೆಚ್ಯಾ ಭಾವಾಂಚೊ ಬಾಬಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:2
27 ತಿಳಿವುಗಳ ಹೋಲಿಕೆ  

ಆಮೇಲೆ ದೇವರು ಅಬ್ರಹಾಮನೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಆ ಒಡಂಬಡಿಕೆಯ ಚಿಹ್ನೆಯನ್ನಾಗಿ ಸುನ್ನತಿಯನ್ನು ವಿಧಿಸಿದರು.ಅದರಂತೆ ಅಬ್ರಹಾಮನು ತನ್ನ ಮಗ ಇಸಾಕನಿಗೆ ಹುಟ್ಟಿದ ಎಂಟನೆಯ ದಿನ ಸುನ್ನತಿಯನ್ನು ಮಾಡಿದನು. ಇಸಾಕನು ತನ್ನ ಮಗ ಯಕೋಬನಿಗೂ, ಯಕೋಬನು ತನ್ನ ಹನ್ನೆರಡು ಮಕ್ಕಳಾದ ನಮ್ಮ ಪಿತಾಮಹರಿಗೂ ಹಾಗೆಯೇ ಮಾಡಿದನು.


ಎರಡನೆಯ ಮಗು ಏಸಾವನ ಹಿಮ್ಮಡಿಯನ್ನು ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ ಯಕೋಬ ಎಂದು ಹೆಸರಿಟ್ಟರು. ಇವರು ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷವಾಗಿತ್ತು.


ಯೂದನ ಕುಲದಿಂದ ಹನ್ನೆರಡು ಸಾವಿರ ರೂಬೇನನ ಕುಲದಿಂದ ಹನ್ನೆರಡು ಸಾವಿರ ಗಾದನ ಕುಲದಿಂದ ಹನ್ನೆರಡು ಸಾವಿರ


ಇದಲ್ಲದೆ, ಪ್ರಾಯಮೀರಿದ ಸಾರಳು ಕೂಡ ವಿಶ್ವಾಸದ ಮೂಲಕವಾಗಿಯೇ ಗರ್ಭವತಿ ಆಗುವ ಶಕ್ತಿಯನ್ನು ಪಡೆದಳು; ವಾಗ್ದಾನಮಾಡಿದ ದೇವರು ನಂಬಿಕಸ್ಥರು ಎಂಬ ಭರವಸೆ ಆಕೆಗಿತ್ತು.


ನೆನೆಯಿರಿ ನಿಮ್ಮ ಮೂಲಪುರುಷ ಅಬ್ರಹಾಮನನು ಅವನ ಸತಿ ಸಾರಳನು. ಅಬ್ರಹಾಮನನ್ನು ನಾ ಕರೆದಾಗ ಆತನು ಒಬ್ಬಂಟಿಗನು ಆಶೀರ್ವಾದದಿ ನಾ ಬೆಳೆಸಿದೆ ಆತನ ಸಂತಾನವನು.


ಇಂತಿರಲು ನನ್ನ ದಾಸನಾದ ಇಸ್ರಯೇಲೇ, ನಾನು ಆಯ್ದುಕೊಂಡ ಯಕೋಬೇ, ನನ್ನ ಗೆಳೆಯ ಅಬ್ರಹಾಮನ ಸಂತತಿಯೇ,


ಅಬ್ರಹಾಮನ ಮಗ ಇಸಾಕನಿಗೆ ಇಬ್ಬರು ಮಕ್ಕಳು - ಏಸಾವ ಮತ್ತು ಯಕೋಬ.


ಅಬ್ರಹಾಮನಿಗೆ ಇಬ್ಬರು ಮಕ್ಕಳು - ಇಸಾಕ್ ಮತ್ತು ಇಷ್ಮಾಯೇಲ್.


ನಮ್ಮ ಪ್ರಭು ಹುಟ್ಟಿದ್ದು ಯೂದನ ಕುಲದಲ್ಲಿ ಎಂಬುದು ತಿಳಿದ ವಿಷಯ. ಮೋಶೆ ಯಾಜಕರನ್ನು ಕುರಿತು ಮಾತನಾಡಿದಾಗ ಈ ಕುಲದ ಬಗ್ಗೆ ಏನನ್ನೂ ಹೇಳಲಿಲ್ಲ.


ಅಬ್ರಹಾಮನ ಮಗ ಇಸಾಕನ ವಂಶಾವಳಿ: ಅಬ್ರಹಾಮನು ಇಸಾಕನನ್ನು ಪಡೆದನು.


ಯೆಹೂದ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 74,600:


ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ:


ಯೂದನಿಗೆ ತಾಮರ ಎಂಬವಳಿಂದ, ಪೆರಸ್ ಹಾಗೂ ಜೆರಹನ್ ಹುಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು