Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:20 - ಕನ್ನಡ ಸತ್ಯವೇದವು C.L. Bible (BSI)

20 ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಇದನ್ನು ಆಲೋಚಿಸುತ್ತಿರುವಾಗ ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು - ಎಲೈ ಯೋಸೇಫನೇ, ದಾವೀದನ ವಂಶದವನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳುವದಕ್ಕೆ ಅಂಜಬೇಡ. ಆಕೆಯ ಗರ್ಭವು ಪವಿತ್ರಾತ್ಮದಿಂದಲೇ ಆದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, “ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅಶೆ ತೊ ಯವಜ್ತಾನಾ, ತೆಚ್ಯಾ ಸಪ್ನಾತ್ ದೆವಾಚೊ ಎಕ್ ದುತ್ ದಿಸ್ಲೊ ಅನಿ, “ದಾವಿದಾಚ್ಯಾ ಘರಾನ್ಯಾಚ್ಯಾ ಜುಜೆ ಮರಿಕ್ ತುಜಿ ಬಾಯ್ಕೊ ಕರುನ್ ಘೆವ್ಕ್ ಭಿಂವ್‍ನಕೊ, ಕಶ್ಯಾಕ್ ಮಟ್ಲ್ಯಾರ್ ತಿ ಪವಿತ್ರ್ ಆತ್ಮ್ಯಾನಿ ಗರ್‍ವಾರ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:20
38 ತಿಳಿವುಗಳ ಹೋಲಿಕೆ  

ಆಗ ದೇವದೂತನು, “ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು.


ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ.


ಹೆರೋದನು ಸತ್ತುಹೋದನು. ಆಗ ಈಜಿಪ್ಟಿನಲ್ಲಿ ಜೋಸೆಫನಿಗೆ ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು,


“ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.


ಜೋಸೆಫನು ದಾವೀದನ ಮನೆತನದವನು ಹಾಗೂ ಗೋತ್ರದವನು. ಆದುದರಿಂದ ಅವನೂ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಹೊರಟು ಜುದೇಯ ನಾಡಿನ ಬೆತ್ಲೆಹೇಮೆಂಬ ದಾವೀದನ ಊರಿಗೆಹೋದನು.


ಆಗ ದೂತನು ಆ ಮಹಿಳೆಯರಿಗೆ, “ಹೆದರಬೇಡಿ, ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆ. ಅವರು ಇಲ್ಲಿಲ್ಲ;


ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ.


ಒಂದಾನೊಂದು ದಿನ ಸರ್ವೇಶ್ವರನ ದೂತ ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.


ಆ ಕನಸಿನಲ್ಲಿ ದೇವದೂತನು, ‘ಯಕೋಬನೇ’ ಎಂದು ಕರೆದನು. ನಾನು, ‘ಇಗೋ, ಇದ್ದೇನೆ’, ಎಂದು ಹೇಳಿದೆ.


ಆದರೆ ಹೆರೋದನ ಮಗ ಅರ್ಖೆಲಾಯನು ತಂದೆಯ ಬದಲಿಗೆ ಜುದೇಯ ಪ್ರಾಂತ್ಯವನ್ನು ಆಳುತ್ತಿದ್ದಾನೆಂದು ಕೇಳಿ ಜೋಸೆಫನು ಅಲ್ಲಿಗೆ ಹೋಗಲು ಅಂಜಿದನು. ಕನಸಿನಲ್ಲಿ ತಾನು ಪಡೆದ ಆದೇಶದ ಪ್ರಕಾರ ಗಲಿಲೇಯ ಪ್ರಾಂತ್ಯಕ್ಕೆ ತೆರಳಿದನು.


ಬೆಳಿಗ್ಗೆ ಸ್ಮರಿಸಮಾಡು ನಿನ್ನಚಲ ಪ್ರೀತಿಯನು I ನಿನ್ನಲ್ಲಿಯೆ ಇಟ್ಟಿರುವೆನು ನನ್ನ ನಂಬಿಕೆಯನು I ತೋರಿಸು ನನಗೆ ನಾ ಹಿಡಿಯಬೇಕಾದ ಮಾರ್ಗವನು I ನಿನ್ನ ಕಡೆಗೆ ಎತ್ತಿರುವೆನು ನನ್ನ ಹೃನ್ಮನಗಳನು II


ನಿನ್ನ ದಾಸ ನಾನು, ದಯಪಾಲಿಸು ಎನಗೆ I ನಿನ್ನ ಕಟ್ಟಳೆಗಳನು ಅರಿವ ತಿಳುವಳಿಕೆ II


ನನ್ನ ಅಂತರಂಗದಲಿ ಏಳಲು ಆಂದೋಲನ I ತಂದಿತೆನ್ನ ಮನಕೆ ಆನಂದ ನಿನ್ನ ಸಾಂತ್ವನ II


ಜ್ಯೋತಿಷಿಗಳು ಹೊರಟುಹೋದ ಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು,” ಎಂದನು.


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ, ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ,’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು.


ಸತ್ಪುರುಷನ ಉದ್ದೇಶ ನ್ಯಾಯಯುತ; ದುಷ್ಟರ ಆಲೋಚನೆ ಮೋಸಭರಿತ.


ಆಗ ಎಲೀಯನು, “ಹೆದರಬೇಡ, ನೀನು ಹೇಳಿದಂತೆ ಮಾಡು; ಆದರೆ ಮೊದಲು ಅದರಿಂದ ನನಗೆ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.


ಇವರಿಗೂ ಇವರ ಜನರಿಗೂ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, “ಬಾಬಿಲೋನಿಯರಿಗೆ ಅಧೀನರಾಗಿರಲು ಹೆದರಬೇಡಿ, ಬಾಬಿಲೋನಿನ ಅರಸನಿಗೆ ಅಧೀನರಾಗಿ ಅಲ್ಲಿಯೇ ವಾಸಮಾಡಿ. ಆಗ ನಿಮಗೆ ಒಳ್ಳೆಯದಾಗುವುದು.


“ನಂಬಿಕೆ ದ್ರೋಹಿಯಾದ ಕುವರಿಯೇ, ಎಂದಿನವರೆಗೆ ಅತ್ತಿತ್ತ ಅಲೆದಾಡುತ್ತಿರುವೆ? ಸರ್ವೇಶ್ವರನಾದ ನಾನು ಅಪೂರ್ವವಾದುದನ್ನು ಉಂಟಾಗಿಸಿರುವೆ: ಇಗೋ, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”


“ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.


ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.


ಆಗ ದೇವರು, “ನಾನೇ ದೇವರು, ನಿನ್ನ ತಂದೆ ಆರಾಧಿಸಿದ ದೇವರು, ನೀನು ಈಜಿಪ್ಟ್ ದೇಶಕ್ಕೆ ಹೋಗಲು ಅಂಜಬೇಡ; ಅಲ್ಲಿ ನಿನ್ನಿಂದ ಮಹಾಜನಾಂಗ ಉತ್ಪನ್ನವಾಗುವಂತೆ ಮಾಡುವೆನು;


ಸಿರಿಯರ ಸೈನಿಕರು ಈಗಾಗಲೇ ಇಸ್ರಯೇಲಿನ ಗಡಿಯೊಳಗಿದ್ದಾರೆ ಎಂಬ ಸುದ್ದಿ ಜುದೇಯದ ಅರಸನಿಗೆ ಮುಟ್ಟಿದ್ದೇ ತಡ, ಅವನೂ ಅವನ ಪ್ರಜೆಗಳೆಲ್ಲರೂ ಹೆದರಿದರು. ಬಿರುಗಾಳಿಗೆ ಸಿಕ್ಕಿದ ಗಿಡಮರಗಳಂತೆ ನಡುಗಿದರು.


ಆಗ ಯೆಶಾಯನು: “ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರುವಿರಾ?


ದೇವರಾದ ಸರ್ವೇಶ್ವರ ಆ ರಾತ್ರಿ ಕನಸಿನಲ್ಲಿ ಅವನಿಗೆ ಕಾಣಿಸಿಕೊಂಡರು; “ನಿನಗೆ ಯಾವ ವರಬೇಕು ಕೇಳಿಕೋ,” ಎಂದು ಹೇಳಿದರು.


ಹೆರೋದನ ಬಳಿಗೆ ಹಿಂದಿರುಗಬಾರದೆಂದು ಕನಸಿನಲ್ಲಿ ದೈವಾಜ್ಞೆಯಾದ್ದರಿಂದ, ಅವರು ಬೇರೆ ಮಾರ್ಗವಾಗಿ ತಮ್ಮ ದೇಶಕ್ಕೆ ಮರಳಿದರು.


ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


ಆ ರಾತ್ರಿಯೇ ಪ್ರಭುವಿನ ದೂತನೊಬ್ಬನು ಸೆರೆಮನೆಯ ದ್ವಾರಗಳನ್ನು ತೆರೆದು ಪ್ರೇಷಿತರನ್ನು ಹೊರಕ್ಕೆ ತಂದನು.


ಬಂದಿದೆ ಯಜ್ಞದ ಕುರಿಮರಿಯ ಶುಭ ವಿವಾಹ ಸಿದ್ಧಳಿಹಳು ಮದುಮಗಳು ಶೃಂಗಾರ ಸಹಿತ ಸಂತೋಷಿಸೋಣ, ಸಂಭ್ರಮಿಸೋಣ ! ಆತನ ಮಹಿಮೆಯನು ಕೀರ್ತಿಸೋಣ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು