Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:21 - ಕನ್ನಡ ಸತ್ಯವೇದವು C.L. Bible (BSI)

21 ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಕೆಯು ಒಬ್ಬ ಮಗನನ್ನು ಹಡೆಯುವಳು; ನೀನು ಆತನಿಗೆ ಯೇಸು ಎಂದು ಹೆಸರಿಡಬೇಕು; ಯಾಕಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ಕಾಯುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತಿ ಎಕ್ ಝಿಲ್ಗ್ಯಾಕ್ ಜಲಮ್ ದಿತಾ, ತೆಕಾ ತಿಯಾ ‘ಜೆಜು’ ಮನುನ್ ನಾವ್ ಥವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್ ತೊ ಅಪ್ನಾಚ್ಯಾ ಲೊಕಾಕ್ನಿ ತೆಂಚ್ಯಾ ಪಾಪಾನಿತ್ನಾ ಸುಟ್ಕಾ ದಿತಾ”, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:21
36 ತಿಳಿವುಗಳ ಹೋಲಿಕೆ  

ಈ ದಾವೀದನ ಸಂತತಿಯಿಂದಲೇ ದೇವರು ತಮ್ಮ ವಾಗ್ದಾನದ ಪ್ರಕಾರ ಇಸ್ರಯೇಲ್ ಜನರಿಗೆ ಒಬ್ಬ ಉದ್ಧಾರಕನನ್ನು ಕಳುಹಿಸಿದರು. ಇವರೇ ಯೇಸುಸ್ವಾಮಿ.


ಇವರಿಂದಲ್ಲದೆ ಬೇರಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವ ನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ.”


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ.


ಎಂಟನೆಯ ದಿನ ಶಿಶುವಿಗೆ ಸುನ್ನತಿ ಮಾಡಬೇಕಾಗಿದ್ದ ಸಂದರ್ಭದಲ್ಲಿ ಅದಕ್ಕೆ ‘ಯೇಸು’ ಎಂಬ ಹೆಸರನ್ನಿಟ್ಟು ನಾಮಕರಣ ಮಾಡಿದರು. ಈ ಹೆಸರನ್ನು ಮರಿಯಳು ಗರ್ಭಿಣಿಯಾಗುವುದಕ್ಕೆ ಮುಂಚೆಯೇ ದೂತನು ಸೂಚಿಸಿದ್ದನು.


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ. ಆತನಿಗೆ ‘ಯೇಸು’ ಎಂಬ ಹೆಸರಿಡಬೇಕು;


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ಆಗ ಸರ್ವೇಶ್ವರ ಸ್ವಾಮಿ, “ಬರುವ ವರ್ಷ ಇದೇ ಕಾಲದಲ್ಲಿ ನಾನು ತಪ್ಪದೆ ಮರಳಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಹೆಂಡತಿ ಸಾರಳಿಗೆ ಮಗನಿರುತ್ತಾನೆ,” ಎಂದರು. ಈ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿದ್ದಿತು.


ದೂತನು ಅವನಿಗೆ, “ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡುಮಗು ಹುಟ್ಟುವುದು. ನೀನು ಅವನಿಗೆ ‘ಯೊವಾನ್ನ’ ಎಂದು ನಾಮಕರಣ ಮಾಡಬೇಕು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ‘ಯೆಹೂವಚಿದ್ಕೇನು’ (ಅಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.


ಅದಕ್ಕೆ ದೇವರು, “ಇಲ್ಲ, ನಿನ್ನ ಹೆಂಡತಿ ಸಾರಳೇ ನಿನಗೊಂದು ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ನನ್ನ ಒಡಂಬಡಿಕೆಯನ್ನು ಅವನೊಂದಿಗೂ ಅವನ ಸಂತತಿಯೊಂದಿಗೂ ಚಿರವಾದ ಒಡಂಬಡಿಕೆಯಾಗಿ ಸ್ಥಿರಗೊಳಿಸುತ್ತೇನೆ.


ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನಲ್ಲಿಯೇ ಊರ್ಜಿತಗೊಳಿಸುತ್ತೇನೆ.


ಒಂದಾನೊಂದು ದಿನ ಸರ್ವೇಶ್ವರನ ದೂತ ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.


ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. “ನಾನು ಇವನನ್ನು ಸರ್ವೇಶ್ವರನಿಂದ ಬೇಡಿ ಪಡೆದೆ,” ಎಂದು ಹೇಳಿ ಆ ಮಗುವಿಗೆ ‘ಸಮುವೇಲ’ ಎಂದು ಹೆಸರಿಟ್ಟಳು.


ಆದರೆ ಆಕೆಯೊಡನೆ ಲೈಂಗಿಕ ಸಂಬಂಧವಿಲ್ಲದೆ ಇದ್ದನು. ಆಕೆ ಗಂಡುಮಗುವಿಗೆ ಜನ್ಮವಿತ್ತಳು. ಜೋಸೆಫನು ಆ ಮಗುವಿಗೆ ‘ಯೇಸು’ ಎಂದು ನಾಮಕರಣ ಮಾಡಿದನು.


ಆಗ ಅವರು, ಆ ಮಹಿಳೆಗೆ, “ನೀನು ಹೇಳಿದುದರಿಂದ ಮಾತ್ರವೇ ಈಗ ನಾವು ನಂಬುತ್ತಿಲ್ಲ, ನಾವೇ ಕಿವಿಯಾರೆ ಕೇಳಿ ನಂಬಿದ್ದೇವೆ; ಲೋಕೋದ್ಧಾರಕ ಇವರೇ ಎಂದು ನಮಗೀಗ ತಿಳಿಯಿತು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು