Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:23 - ಕನ್ನಡ ಸತ್ಯವೇದವು C.L. Bible (BSI)

23 “ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆಯುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ಎಂಬದು. ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 “ಎಕ್ ನಿಂಬೆ ಚೆಡು ಗರ್‍ವಾರ್ ಹೊತಾ, ಅನಿ ಎಕ್ ಪೊರಾಕ್ ಜಲಮ್ ದಿತಾ ಅನಿ ತೆಕಾ ‘ಇಮ್ಮಾನುಎಲ್’ ಮನುನ್ ಬಲ್ವುತ್ಯಾತ್, ತಸೆ ಮಟ್ಲ್ಯಾರ್ ದೆವ್ ಅಮ್ಚ್ಯಾ ವಾಂಗ್ಡಾ ಹಾಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:23
18 ತಿಳಿವುಗಳ ಹೋಲಿಕೆ  

ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ.


ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು,


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ಆಗ ಜೋಸೆಫನು ಎಚ್ಚೆತ್ತು ದೇವದೂತನ ಆಜ್ಞೆಯ ಪ್ರಕಾರ ಮರಿಯಳನ್ನು ವಿವಾಹಮಾಡಿಕೊಂಡನು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಹೀಗೆ ದಾವೀದನೇ ಆತನನ್ನು, ‘ನನ್ನ ಪ್ರಭು,’ ಎಂದು ಕರೆದಿರುವಲ್ಲಿ ಆತನು ದಾವೀದನ ಪುತ್ರನು ಆಗಿರುವುದು ಹೇಗೆ?” ಎಂದು ಪ್ರಶ್ನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು