Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:15 - ಕನ್ನಡ ಸತ್ಯವೇದವು C.L. Bible (BSI)

15 ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನ್ಯಾಯವಿಚಾರಣೆಯ ದಿವಸದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನ್ಯಾಯವಿಚಾರಣೆಯ ದಿನದಲ್ಲಿ ಈ ಊರಿನ ಗತಿಯು ಸೊದೋಮ್ ಮತ್ತು ಗೊಮೋರಗಳಿಗಿಂತ ಬಹಳ ಕೆಟ್ಟದ್ದಾಗಿರುವುದು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನ್ಯಾಯತೀರ್ಪಿನ ದಿನದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಗತಿಯು ಆ ಪಟ್ಟಣಕ್ಕಿಂತ ಹೆಚ್ಚು ತಾಳುವಂಥದ್ದಾಗಿರುವುದು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮಿಯಾ ತುಮ್ಕಾ ಖರೆಚ್ ಸಾಂಗ್ತಾ, “ಝಡ್ತಿಚ್ಯಾ ದಿಸಿ ದೆವ್ ಸೊದೊಮ್, ಅನಿ ಗೊಮೊರ್ ಮನ್ತಲ್ಯಾ ಗಾವಾಕ್ನಿ ಜಾಸ್ತಿ ದಯಾ ದಾಕ್ವಿಲ್ ಖರೆ ತ್ಯಾ ಗಾವಾಕ್ ದಯಾ ದಾಕ್ವಿನಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:15
22 ತಿಳಿವುಗಳ ಹೋಲಿಕೆ  

ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಕೂಡ ದೇವರು ಬಿಡಲಿಲ್ಲ. ದುರ್ಜನರಿಗೆ ಬರಲಿರುವ ದುರ್ಗತಿ ಏನೆಂದು ಸೂಚಿಸುವುದಕ್ಕಾಗಿ ಆ ಪಟ್ಟಣಗಳನ್ನು ಸುಟ್ಟು ಭಸ್ಮಮಾಡಿದರು.


ಇದರಿಂದಾಗಿ, ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬಂದಿರುತ್ತದೆ; ನ್ಯಾಯತೀರ್ಪಿನ ದಿನದಂದು ನಾವು ಭರವಸೆಯಿಂದಿರುತ್ತೇವೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.


ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.


ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


ಯಾವುದೇ ಊರಿನ ಜನರು ನಿಮ್ಮನ್ನು ಸ್ವಾಗತಿಸದೆಯೂ ನಿಮ್ಮ ಬೋಧನೆಗೆ ಕಿವಿಗೊಡದೆಯೂ ಹೋದರೆ, ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅವರ ವಿರುದ್ಧ ಅದು ಸಾಕ್ಷಿಯಾಗಿರಲಿ,” ಎಂದರು.


ಜನರು ತಾವಾಡುವ ಪ್ರತಿಯೊಂದು ಜೊಳ್ಳುಮಾತಿಗೂ ತೀರ್ಪಿನ ದಿನ ಲೆಕ್ಕಕೊಡಬೇಕಾಗುವುದು ಎಂಬುದು ನಿಮಗೆ ತಿಳಿದಿರಲಿ.


ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ತೀರ್ಪಿನ ದಿನದಂದು, ‘ಸ್ವಾಮೀ, ಸ್ವಾಮೀ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೆ? ನಿಮ್ಮ ಹೆಸರಿನಲ್ಲಿ ಹಲವಾರು ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.


ಅವರ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ಕಳೆದುಕೊಳ್ಳದೆ ಅಂತಿಮ ದಿನದಂದು ಅವರೆಲ್ಲರನ್ನೂ ನಾನು ಜೀವಕ್ಕೆ ಎಬ್ಬಿಸಬೇಕು.


ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ,” ಎಂದು ನುಡಿದರು.


ನನ್ನನ್ನು ನಿರಾಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಅವನವನ ಕೆಲಸದ ಗುಣವು ಕಡೆಯ ದಿನ ಬಟ್ಟಬಯಲಾಗುವುದು. ಯೇಸುಕ್ರಿಸ್ತರ ಆ ದಿನವು ಬೆಂಕಿಯ ದಿನವಾಗಿ ಪ್ರಜ್ವಲಿಸುವುದು. ಪ್ರತಿಯೊಬ್ಬನ ಕೆಲಸವನ್ನು ಆ ಬೆಂಕಿ ಪರೀಕ್ಷಿಸುವುದು.


ಸಹೋದರರೇ, ಕಳ್ಳನಂತೆ ಆ ದಿನವು ನಿಮ್ಮನ್ನು ದಿಗ್ಭ್ರಮೆಗೊಳಿಸದಿರಲಿ. ಏಕೆಂದರೆ, ನೀವಿನ್ನು ಅಂಧಕಾರಕ್ಕೆ ಸೇರಿದವರಲ್ಲ. ಆ ದಿನವು ದಿಢೀರನೆ ನಿಮ್ಮ ಮೇಲೆ ಬರಬಾರದು.


ಸಭೆ ಸೇರುವ ರೂಢಿಯನ್ನು ಕೆಲವರು ಕೈಬಿಟ್ಟಿದ್ದಾರೆ. ನಾವು ಹಾಗೆ ಮಾಡದಿರೋಣ. ನಿಮಗೆ ತಿಳಿದಿರುವಂತೆ ಪ್ರಭು ಪ್ರತ್ಯಕ್ಷರಾಗುವ ದಿನವು ಸಮೀಪಿಸುತ್ತಿರುವುದರಿಂದ ಮತ್ತಷ್ಟು ಹೆಚ್ಚಾಗಿ ಒಬ್ಬರನ್ನೊಬ್ಬರು ಪ್ರೋತ್ಸಾಹಿಸೋಣ.


ಅಂತೆಯೇ, ತಮ್ಮ ಆದ್ಯ ಅಂತಸ್ತನ್ನು ಉಳಿಸಿಕೊಳ್ಳದೆ, ತಮ್ಮ ಯೋಗ್ಯ ನಿವಾಸವನ್ನು ಕಳೆದುಕೊಂಡ ದೇವದೂತರನ್ನು ಶಾಶ್ವತ ಸಂಕಲೆಗಳಿಂದ ಬಂಧಿಸಲಾಯಿತು; ಮಹಾದಿನದಲ್ಲಿ ಸಂಭವಿಸುವ ದಂಡನೆಯ ತೀರ್ಪಿಗಾಗಿ ಅವರನ್ನು ಕಾರ್ಗತ್ತಲೆಯಲ್ಲಿ ಕೂಡಿಡಲಾಯಿತು.


ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು