Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:19 - ಕನ್ನಡ ಸತ್ಯವೇದವು C.L. Bible (BSI)

19 ನಿಮ್ಮನ್ನು ಹಿಡಿದೊಪ್ಪಿಸುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಹೇಗೆ ಮಾತಾಡಬೇಕು, ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಗಳಿಗೆಯಲ್ಲಿ ನಿಮಗೆ ಸೂಚನೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಿಮ್ಮನ್ನು ಬಂಧಿಸಿದಾಗ ನೀವು ಏನು ಮಾತಾಡಬೇಕು, ಹೇಗೆ ಮಾತಾಡಬೇಕು ಎಂದು ಚಿಂತಿಸಬೇಡಿ. ನೀವು ಹೇಳಬೇಕಾದುವುಗಳನ್ನು ಆ ಸಮಯದಲ್ಲಿ ನಿಮಗೆ ಅನುಗ್ರಹಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ಅವರು ನಿಮ್ಮನ್ನು ಬಂಧಿಸುವಾಗ, ನೀವು ಹೇಗೆ ಇಲ್ಲವೆ ಏನು ಮಾತನಾಡಬೇಕೆಂದು ಯೋಚಿಸಬೇಡಿರಿ. ನೀವು ಏನು ಮಾತನಾಡಬೇಕೆಂಬುದು ಆ ಗಳಿಗೆಯಲ್ಲೇ ನಿಮಗೆ ತಿಳಿಸಲಾಗುವುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖರೆ ತೆನಿ ತುಮ್ಕಾ ಇಚಾರ್‍ನಿ ಕರುಕ್ ಘೆವ್ನ್ ಗೆಲ್ಲ್ಯಾ ತನ್ನಾ, ತುಮಿ ಕಾಯ್ ಸಾಂಗ್ತಲೆ ಕಶೆ ಸಾಂಗ್ತಲೆ ಮನುನ್ ಚಿಂತಾ ಕರುನಕಾಸಿ, ತ್ಯಾ ಎಳಾರ್ ಕಾಯ್ ಬೊಲ್ತಲೆ ಮನುನ್ ತುಮ್ಕಾ ದಿಲ್ಲೆ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:19
20 ತಿಳಿವುಗಳ ಹೋಲಿಕೆ  

ಆದುದರಿಂದ ಈಗಲೇ ಹೊರಡು; ನಿನ್ನ ಬಾಯಲ್ಲಿ ನಾನೇ ಇರುವೆನು; ನೀನು ಮಾತಾಡಬೇಕಾದುದನ್ನು ನಿನಗೆ ಕಲಿಸಿಕೊಡುವೆನು,” ಎಂದು ಹೇಳಿದರು.


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


“ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ.


ನೀನು ಅವನ ಸಂಗಡ ಮಾತಾಡಿ ಹೇಳಬೇಕಾದ ವಿಷಯಗಳನ್ನು ತಿಳಿಸು . ನಾನು ನಿನಗೂ ಅವನಿಗೂ ಹೇಗೆ ಮಾತಾಡಬೇಕೆಂದು ತಿಳಿಸಿ ನೀವು ಮಾಡಬೇಕಾದುದನ್ನು ಕಲಿಸುವೆನು .


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ.


“ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ?


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ.


ಬಳಿಕ ಸ್ವಾಮಿ ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ಆಗ ಸರ್ವೇಶ್ವರ ನನಗೆ, “ನಾನೊಬ್ಬ ತರುಣ ಎನ್ನಬೇಡ; ಯಾರ ಬಳಿಗೆ ನಿನ್ನನ್ನು ಕಳಿಸುತ್ತೇನೋ, ಅವರೆಲ್ಲರ ಬಳಿಗೆ ನೀನು ಹೋಗಲೇಬೇಕು; ನಾನು ಆಜ್ಞಾಪಿಸುವುದನ್ನೆಲ್ಲ ನುಡಿಯಲೇ ಬೇಕು.


ಆದುದರಿಂದ ನಾಳೆಯ ಚಿಂತೆ ನಿಮಗೆ ಬೇಡ. ನಾಳೆಯ ಚಿಂತೆ ನಾಳೆಗೇ ಇರಲಿ. ಇಂದಿನ ಪಾಡೇ ಇಂದಿಗೆ ಸಾಕು.”


ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಂದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.


ಏಕೆಂದರೆ, ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು