Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:20 - ಕನ್ನಡ ಸತ್ಯವೇದವು C.L. Bible (BSI)

20 ಆಗ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮಾತಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮಾತಾಡುವವರು ನಿಜವಾಗಿಯೂ ನೀವಲ್ಲ. ನಿಮ್ಮ ತಂದೆಯ ಆತ್ಮನೇ ನಿಮ್ಮ ಮೂಲಕ ಮಾತನಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮೊಳಗಿಂದ ಮಾತನಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ತುಮಿ ಬೊಲ್ತಲ್ಯಾ ಗೊಸ್ಟಿಯಾ ತುಮ್ಚ್ಯಾ ಗೊಸ್ಟಿಯಾ ನ್ಹಯ್ ತ್ಯಾ ಗೊಸ್ಟಿಯಾ ತುಮ್ಚ್ಯಾ ಸರ್‍ಗಾ ವೈಲ್ಯಾ ಬಾಬಾಚೊ ಪವಿತ್ರ್ ಅತ್ಮೊಚ್ ತುಮ್ಚ್ಯಾ ತೊಂಡಾನಿತ್ನಾ ಬೊಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:20
18 ತಿಳಿವುಗಳ ಹೋಲಿಕೆ  

ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ.


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ಏಕೆಂದರೆ, ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು,” ಎಂದರು.


ನನ್ನೊಳು ಉಸಿರಾಡಿತು ಸರ್ವೇಶ್ವರನಾತ್ಮ ನನ್ನ ಬಾಯೊಳಿತ್ತು ಆತನ ವಾಕ್ಯ.


ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;


ಪೇತ್ರನು ಪವಿತ್ರಾತ್ಮಭರಿತನಾಗಿ ಹೀಗೆಂದು ಉತ್ತರಕೊಟ್ಟನು: “ಜನರ ಅಧಿಕಾರಿಗಳೇ, ಪ್ರಮುಖರೇ,


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.


ಕ್ರಿಸ್ತಯೇಸುವೇ ನನ್ನ ಮುಖಾಂತರ ಮಾತನಾಡುತ್ತಾರೆ ಎಂಬುದಕ್ಕೆ ಆಧಾರ ಬೇಕೆನ್ನುತ್ತೀರಲ್ಲವೇ? ಯೇಸುಕ್ರಿಸ್ತರು ನಿಮ್ಮ ವಿಷಯದಲ್ಲಿ ದುರ್ಬಲರಾಗಿ ವರ್ತಿಸಲಿಲ್ಲ. ಪ್ರಬಲರಾಗಿ ನಿಮ್ಮಲ್ಲಿಯೇ ಇದ್ದಾರೆ ಎಂಬುದೇ ಇದಕ್ಕೆ ಆಧಾರ.


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ಹೀಗೆ ಅವರು ತಮ್ಮತಮ್ಮೊಳಗೆ ಭಿನ್ನಾಭಿಪ್ರಾಯವುಳ್ಳವರಾಗಿ ಅಲ್ಲಿಂದ ಹೊರಟುಹೋಗಲಾರಂಭಿಸಿದರು. ಆಗ ಪೌಲನು ಹೀಗೆಂದನು : “ಪವಿತ್ರಾತ್ಮ ಅವರು ಯೆಶಾಯ ಪ್ರವಾದಿಯ ಮುಖಾಂತರ ನಿಮ್ಮ ಪೂರ್ವಜರಿಗೆ ಎಷ್ಟೊಂದು ವಿಹಿತವಾಗಿ ಹೇಳಿದ್ದಾರೆ:


ಆಗ, ಪೌಲ ಎಂದು ಹೆಸರುಗೊಂಡಿದ್ದ ಸೌಲನು ಪವಿತ್ರಾತ್ಮಭರಿತನಾಗಿ ಆ ಮಂತ್ರವಾದಿಯನ್ನು ದಿಟ್ಟಿಸಿ ನೋಡಿದನು.


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”


‘ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿಗೆ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ನನ್ನ ಪ್ರಭುವಿಗೆ ಸರ್ವೇಶ್ವರ ಹೇಳಿದ್ದಾರೆ,’ ಎಂದು ದಾವೀದನೇ ಪವಿತ್ರಾತ್ಮಪ್ರೇರಣೆಯಿಂದ ಹೇಳಿದ್ದಾನಲ್ಲಾ!


ಇವೆಲ್ಲವುಗಳಿಗಾಗಿ ಪರಕೀಯರೂ ಪರದಾಡುತ್ತಾರೆ; ಇವೆಲ್ಲಾ ನಿಮಗೆ ಅವಶ್ಯ ಎಂದು ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ.


ಆದುದರಿಂದ ಈಗಲೇ ಹೊರಡು; ನಿನ್ನ ಬಾಯಲ್ಲಿ ನಾನೇ ಇರುವೆನು; ನೀನು ಮಾತಾಡಬೇಕಾದುದನ್ನು ನಿನಗೆ ಕಲಿಸಿಕೊಡುವೆನು,” ಎಂದು ಹೇಳಿದರು.


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು