Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:22 - ಕನ್ನಡ ಸತ್ಯವೇದವು C.L. Bible (BSI)

22 ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮತ್ತು ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುತ್ತಾರೆ. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 “ತುಮಿ ಮಾಜ್ಯಾ ಫಾಟ್ನಾ ಹೊತ್ತ್ಯಾ ಸಾಟ್ನಿ ಲೊಕಾ ತುಮ್ಕಾ ಕಿಮ್ಮತ್ ದಿನ್ಯಾತ್, ಖರೆ ಜೊ ಕೊನ್ ಸರ್ತ್ಯಾ ಎಳಾರ್ ಸಗೊಳ್ ಘಟ್ ರ್‍ಹಾತಾ ತೊ ಬಚಾವ್ ಹೊತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:22
30 ತಿಳಿವುಗಳ ಹೋಲಿಕೆ  

ಆದರೆ ಕೊನೆಯವರೆಗೂ ಸ್ಥಿರವಾಗಿರುವವರು ಜೀವೋದ್ಧಾರವನ್ನು ಹೊಂದುವರು.


ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ನೀವು ನನ್ನವರು. ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.


ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗೋಸ್ಕರವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಾಪಾಡಿಕೊಳ್ಳುತ್ತಾನೆ.


ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿ.


“ಬಳಿಕ ಜನರು ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು. ನೀವು ನನ್ನವರು, ಆದುದರಿಂದಲೇ ಜನಾಂಗಗಳೆಲ್ಲ ನಿಮ್ಮನ್ನು ದ್ವೇಷಿಸುವುವು.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ನೀವು ಹೊಂದಿರುವ ನಿರೀಕ್ಷೆ ಪೂರ್ಣವಾಗಿ ಕೈಗೂಡುವಂತೆ ನಿಮ್ಮಲ್ಲಿ ಪ್ರತಿಯೊಬ್ಬನೂ ಮೊದಲಿನ ಆಸಕ್ತಿಯನ್ನು ಕಡೆಯತನಕವೂ ತೋರಿಸಬೇಕೆಂದು ಹಾರೈಸುತ್ತೇನೆ.


ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಷವಿದೆ.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು.


ಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆ.


“ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.


ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ನಾನು ನನ್ನ ಪಿತನಿಂದ ಅಧಿಕಾರ ಪಡೆದಿರುವಂತೆಯೇ, ಜಯಹೊಂದುವವನಿಗೆ ಹಾಗು ನಾನು ಮೆಚ್ಚುವ ಕಾರ್ಯಗಳನ್ನು ಕೊನೆಯವರೆಗೂ ಮುಂದುವರಿಸಿಕೊಂಡು ಹೋಗುವವನಿಗೆ, ‘ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು ಅವನು ಅವುಗಳನ್ನು ಕಬ್ಬಿಣದ ದಂಡದಿಂದ ಆಳುವನು ಮಣ್ಣಿನ ಮಡಕೆಯಂತೆ ಅವುಗಳನ್ನು ನುಚ್ಚುನೂರು ಮಾಡುವನು.’ ಅಂಥವನಿಗೆ ಉದಯ ತಾರೆಯನ್ನು ನೀಡುವೆನು.


ಅವನು ನನ್ನ ನಾಮದ ನಿಮಿತ್ತ ಎಷ್ಟು ಕಷ್ಟಕಾರ್ಪಣ್ಯಗಳನ್ನು ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುತ್ತೇನೆ,” ಎಂದರು.


ಹೌದು, ಸಹನಾಶಕ್ತಿ ನಿನಗಿದೆ. ಬೇಸರಗೊಳ್ಳದೆ ನನ್ನ ಹೆಸರಿನ ನಿಮಿತ್ತ ನೀನು ಕಷ್ಟಸಂಕಟಗಳನ್ನು ತಾಳಿಕೊಂಡೆ.


ಸಜ್ಜನರಿಗೆ ದುರ್ಮಾರ್ಗಿ ತಿರಸ್ಕೃತನು; ದುರ್ಜನರಿಗೆ ಸನ್ಮಾರ್ಗಿ ತಿರಸ್ಕೃತನು.


ನೀವು ನನ್ನವರು ಆದುದರಿಂದಲೇ ಎಲ್ಲರೂ ನಿಮ್ಮನ್ನು ದ್ವೇಷಿಸುವರು.


ಸೈರಣೆಯಿಂದಿರಿ, ಸಂರಕ್ಷಣೆಯನ್ನು ಪಡೆಯುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು