ಮತ್ತಾಯ 10:26 - ಕನ್ನಡ ಸತ್ಯವೇದವು C.L. Bible (BSI)26 “ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದರೂ ಅವರಿಗೆ ಹೆದರಬೇಡಿರಿ. ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಮರೆಯಾಗಿರುವ ಯಾವದೂ ವ್ಯಕ್ತವಾಗದೆ ಇರುವದಿಲ್ಲ; ಹೊರಪಡದ ರಹಸ್ಯವೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಆದಕಾರಣ ಆ ಜನರಿಗೆ ಹೆದರಬೇಡಿ. ಮರೆಯಾಗಿರುವ ಪ್ರತಿಯೊಂದೂ ಬಹಿರಂಗವಾಗುವುದು. ಗುಪ್ತವಾಗಿರುವ ಪ್ರತಿ ಸಂಗತಿಯು ಬಯಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಆದ್ದರಿಂದ ಅವರಿಗೆ ಹೆದರಬೇಡಿರಿ, ಪ್ರಕಟಗೊಳ್ಳದಂತೆ ಯಾವುದೂ ಮುಚ್ಚಿಡಲಾಗುವುದಿಲ್ಲ, ತಿಳಿಯಲಾಗದಂತೆ ಯಾವುದೂ ಗುಪ್ತವಾಗಿರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 “ತೆಚೆಸಾಟ್ನಿ ಮಾನ್ಸಾಕ್ನಿ ತುಮಿ ಭಿಂವ್‍ನಕಾಶಿ, ಜೆ ಕಾಯ್ ಧಾಪುನ್ ಥವಲ್ಲೆ ಹಾಯ್ ತೆ ಉಗ್ಡುನ್ ಹೊತಾ, ಅನಿ ಘುಟಾನ್ ಹೊತ್ತೆ ಸಗ್ಳೆ ಸಗ್ಳ್ಯಾಕ್ನಿ ಕಳ್ತಾ. ಅಧ್ಯಾಯವನ್ನು ನೋಡಿ |