Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:3 - ಕನ್ನಡ ಸತ್ಯವೇದವು C.L. Bible (BSI)

3 ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕ ವಸೂಲಿಗಾರನಾದ ಮತ್ತಾಯ, ಅಲ್ಫಾಯನ ಮಗ ಯಾಕೋಬ, ತದ್ದಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕದ ಮತ್ತಾಯ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಫಿಲಿಪ್ಪ ಮತ್ತು ಬಾರ್ತೊಲೊಮಾಯ, ತೋಮ, ಸುಂಕವಸೂಲಿಗಾರನಾಗಿದ್ದ ಮತ್ತಾಯ, ಅಲ್ಛಾಯನ ಮಗನಾದ ಯಾಕೋಬ, ತದ್ದಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಫಿಲಿಪ್ಪ, ಬಾರ್ತೊಲೊಮಾಯ; ತೋಮ, ಸುಂಕದವನಾದ ಮತ್ತಾಯ; ಅಲ್ಫಾಯನ ಮಗ ಯಾಕೋಬ, ತದ್ದಾಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಫಿಲಿಪ್, ಅನಿ ಬಾರ್‍ತೊಲೊಮೆವ್; ಥೊಮಸ್, ಅನಿ ತೆರ್‍ಗಿ ವಸುಲ್ ಮಾತೆವ್, ಅಲ್ಫೆವಾಚೊ ಲೆಕ್ ಜಾಕೊಬ್,ತಾದ್ದೆವ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:3
30 ತಿಳಿವುಗಳ ಹೋಲಿಕೆ  

ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು.


ಅಂದ್ರೆಯ, ಫಿಲಿಪ್ಪ, ಬಾರ್ತಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಕೋಬ, ತದ್ದಾಯ, ದೇಶಾಭಿಮಾನಿ ಆದ ಸಿಮೋನ ಮತ್ತು


ಅಲ್ಲಿಂದ ಹೊರಟುಹೋಗುತ್ತಿರುವಾಗ ಅಲ್ಫಾಯನ ಮಗನಾದ ಲೇವಿಯು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿರುವುದನ್ನು ಯೇಸು ಕಂಡರು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಕರೆದರು. ಲೇವಿ ಎದ್ದು ಅವರನ್ನು ಹಿಂಬಾಲಿಸಿದನು.


ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು.


ಸಿಮೋನ ಪೇತ್ರನು, ದಿದುಮನೆಂಬ ತೋಮನು, ಗಲಿಲೇಯದ ಕಾನಾ ಊರಿನ ನತಾನಯೇಲನು, ಜೆಬೆದಾಯನ ಪುತ್ರರು ಮತ್ತು ಯೇಸುವಿನ ಇನ್ನಿಬ್ಬರು ಶಿಷ್ಯರು ಒಟ್ಟಿಗೆ ಸೇರಿ ಇದ್ದರು.


ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಕೂಡ ಪ್ರಭುವಿನೊಡನೆ ಹೋಗಿ ಸಾಯೋಣ,” ಎಂದು ಹೇಳಿದನು.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ನನಗೆ ಕೊಡಲಾಗಿದ್ದ ಈ ವಿಶೇಷ ವರವನ್ನು ಮನಗಂಡು ಸಭಾಸ್ತಂಭಗಳೆಂದು ಪರಿಗಣಿತರಾದ ಯಕೋಬ, ಕೇಫ ಮತ್ತು ಯೊವಾನ್ನರು ನನಗೂ ಬಾರ್ನಬನಿಗೂ ಕೈಯಲ್ಲಿ ಕೈಯನ್ನಿಟ್ಟು ಅನ್ಯೋನ್ಯತೆಯನ್ನು ಸೂಚಿಸಿದರು. ಅಲ್ಲದೆ, “ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ, ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ,” ಎಂದೂ ಹೇಳಿದರು.


ಆಗ, ಉಳಿದ ಪ್ರೇಷಿತರಲ್ಲಿ ಪ್ರಭುವಿನ ಸಹೋದರ ಯಕೋಬನಲ್ಲದೆ ಬೇರೆ ಯಾವ ಪ್ರೇಷಿತರನ್ನೂ ನಾನು ಕಾಣಲಿಲ್ಲ.


ಮಾರನೆಯ ದಿನ ಪೌಲನು ನಮ್ಮನ್ನು ಕರೆದುಕೊಂಡು ಯಕೋಬನನ್ನು ನೋಡಲು ಹೋದನು. ಧರ್ಮಸಭೆಯ ಹಿರಿಯರೆಲ್ಲರೂ ಅಲ್ಲಿ ಹಾಜರಿದ್ದರು.


ಪೇತ್ರನು ನಿಶ್ಯಬ್ದರಾಗಿರುವಂತೆ ಅವರಿಗೆ ಕೈಸನ್ನೆ ಮಾಡಿದನು. ಪ್ರಭು ತನ್ನನ್ನು ಹೇಗೆ ಸೆರೆಮನೆಯಿಂದ ಹೊರಗೆ ಕರೆತಂದರೆಂದು ವಿವರಿಸಿದನು. ಈ ವಿಷಯವನ್ನು ಯಕೋಬನಿಗೂ ಇತರ ಸಹೋದರರಿಗೂ ತಿಳಿಸಲು ಹೇಳಿ ಅಲ್ಲಿಂದ ಹೊರಟು ಬೇರೆ ಸ್ಥಳಕ್ಕೆ ಹೋದನು.


ಅನಂತರ ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿದ್ದಾಗ ಲೇವಿ ಎಂಬ ಸುಂಕದವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು.


ಇದಾದ ಮೇಲೆ ಯಕೋಬನು ಎದ್ದು ಹೀಗೆಂದನು: “ಸಹೋದರರೇ ಕೇಳಿ,


ಆಗ ಯೂದನು, (ಈತ ಇಸ್ಕರಿಯೋತಿನ ಯೂದನಲ್ಲ) “ಪ್ರಭೂ, ನೀವು ಈ ಲೋಕಕ್ಕೆ ನಿಮ್ಮನ್ನು ಸಾಕ್ಷಾತ್ಕರಿಸಿಕೊಳ್ಳದೆ ನಮಗೆ ಮಾತ್ರ ಸಾಕ್ಷಾತ್ಕರಿಸಿಕೊಳ್ಳುತ್ತೀರಲ್ಲಾ, ಏಕೆ?” ಎಂದು ಕೇಳಿದನು.


ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ?


ಅವರಲ್ಲಿ ಮಗ್ದಲದ ಮರಿಯಳು, ಯಕೋಬ ಹಾಗೂ ಜೋಸೆಫನ ತಾಯಿ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿ ಇದ್ದರು.


ಅವರಿಗೂ ಅವನು ಕಿವಿಗೊಡದೆಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು.


ಇದನ್ನೆಲ್ಲಾ ದೂರದಿಂದ ನೋಡುತ್ತಿದ್ದ ಕೆಲವು ಮಹಿಳೆಯರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಕೋಬ ಮತ್ತು ಯೋಸೆಯ ತಾಯಿ ಮರಿಯಳು ಹಾಗೂ ಸಲೋಮೆ ಇದ್ದರು.


“ಒಮ್ಮೆ, ಇಬ್ಬರು ಪ್ರಾರ್ಥನೆಮಾಡಲು ದೇವಾಲಯಕ್ಕೆ ಹೋದರು. ಇವರಲ್ಲಿ ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕವಸೂಲಿಯವನು.


ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ.


ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.


ಅಲ್ಲಿ ಜಕ್ಕಾಯ ಎಂಬವನಿದ್ದನು. ಅವನು ಸುಂಕವಸೂಲಿಯವರ ಮುಖಂಡ ಹಾಗೂ ಧನಾಢ್ಯ.


ನತಾನಿಯೇಲನು, “ನನ್ನ ಪರಿಚಯ ನಿಮಗೆ ಹೇಗಾಯಿತು?” ಎಂದು ಕೇಳಲು ಯೇಸು, “ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ,” ಎಂದು ಉತ್ತರಕೊಟ್ಟರು.


ಆಗ ತೋಮನು, “ಪ್ರಭುವೇ, ನೀವು ಎಲ್ಲಿಗೆ ಹೋಗುತ್ತೀರೆಂದು ನಮಗೆ ತಿಳಿಯದು; ಅಂದಮೇಲೆ ಅಲ್ಲಿಗೆ ಹೋಗುವ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು